< ಯೋಬನು 3 >
1 ೧ ಆ ಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮ ದಿನವನ್ನು ಶಪಿಸಿ,
그 후에 욥이 입을 열어 자기의 생일을 저주하니라
3 ೩ “ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ, ‘ಗರ್ಭದಲ್ಲಿ ಪುರುಷಾಂಕುರವಾಯಿತು’ ಎಂದು ನುಡಿದ ರಾತ್ರಿಯು ನಾಶವಾಗಲಿ
나의 난 날이 멸망하였었더라면, 남아를 배었다 하던 그 밤도 그러하였었더라면,
4 ೪ ಆ ದಿನವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.
그 날이 캄캄하였었더라면, 하나님이 위에서 돌아보지 마셨더라면, 빛도 그 날을 비취지 말았었더라면,
5 ೫ ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.
유암과 사망의 그늘이 그 날을 자기 것이라 주장하였었더라면, 구름이 그 위에 덮였었더라면, 낮을 캄캄하게 하는 것이 그 날을 두렵게 하였었더라면,
6 ೬ ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
그 밤이 심한 어두움에 잡혔었더라면, 해의 날 수 가운데 기쁨이 되지 말았었더라면, 달의 수에 들지 말았었더라면,
7 ೭ ಆಹಾ, ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.
그 밤이 적막하였었더라면, 그 가운데서 즐거운 소리가 일어나지 말았었더라면,
8 ೮ ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ, ದಿನಗಳನ್ನು ಶಪಿಸುವುದರಲ್ಲಿಯೂ ಜಾಣರಾದ (ಮಾಂತ್ರಿಕರು) ಅದಕ್ಕೆ ಶಾಪಕೊಡಲಿ.
날을 저주하는 자 곧 큰 악어를 격동시키기에 익숙한 자가 그 밤을 저주하였었더라면,
9 ೯ ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
그 밤에 새벽별들이 어두웠었더라면, 그 밤이 광명을 바랄지라도 얻지 못하며 동틈을 보지 못하였었더라면 좋았을 것을,
10 ೧೦ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.
이는 내 모태의 문을 닫지 아니하였고 내 눈으로 환난을 보지 않도록 하지 아니하였음이로구나
11 ೧೧ ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?
어찌하여 내가 태에서 죽어 나오지 아니하였었던가 어찌하여 내 어미가 낳을 때에 내가 숨지지 아니하였던가
12 ೧೨ ತಾಯಿಯ ಮಡಿಲು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ನನಗೆ ಕುಡಿಯ ಕೊಟ್ಟದ್ದೇಕೆ?
어찌하여 무릎이 나를 받았던가 어찌하여 유방이 나로 빨게 하였던가
13 ೧೩ ಆಗಲೇ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ, ಕಣ್ಣು ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆನು.
그렇지 아니하였던들 이제는 내가 평안히 누워서 자고 쉬었을 것이니
14 ೧೪ ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮ್ಮ ಸಮಾಧಿಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ, ಮಂತ್ರಿಗಳೊಡನೆಯೂ ನಾನಿರುತ್ತಿದ್ದೆ.
자기를 위하여 거친 터를 수축한 세상 임금들과 의사들과 함께 있었을 것이요
15 ೧೫ ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.
혹시 금을 가지며 은으로 집에 채운 목백들과 함께 있었을 것이며
16 ೧೬ ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.
또 부지 중에 낙태한 아이 같아서 세상에 있지 않았겠고 빛을 보지 못한 아이들 같았었을 것이라
17 ೧೭ ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವುದು, ದಣಿದವರು ದಣಿವಾರಿಸಿಕೊಳ್ಳುವರು.
거기서는 악한 자가 소요를 그치며 거기서는 곤비한 자가 평강을 얻으며
18 ೧೮ ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ, ಗುಂಪುಗುಂಪಾಗಿ ವಿಶ್ರಮಿಸಿಕೊಳ್ಳುವರು.
거기서는 갇힌 자가 다 함께 평안히 있어 감독자의 소리를 듣지 아니하며
19 ೧೯ ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ. ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.
거기서는 작은 자나 큰 자나 일반으로 있고 종이 상전에게서 놓이느니라
20 ೨೦ ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?
어찌하여 곤고한 자에게 빛을 주셨으며 마음이 번뇌한 자에게 생명을 주셨는고
21 ೨೧ ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
이러한 자는 죽기를 바라도 오지 아니하니 그것을 구하기를 땅을 파고 숨긴 보배를 찾음보다 더하다가
22 ೨೨ ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.
무덤을 찾아 얻으면 심히 기뻐하고 즐거워하나니
23 ೨೩ ದೇವರು ನನ್ನ ಸುತ್ತಲೂ ಬೇಲಿ ಹಾಕಿ, ದಾರಿಕಟ್ಟಿದ ಮೇಲೆ ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?
하나님에게 둘러싸여 길이 아득한 사람에게 어찌하여 빛을 주셨는고
24 ೨೪ ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.
나는 먹기 전에 탄식이 나며 나의 앓는 소리는 물이 쏟아지는 것 같구나
25 ೨೫ ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.
나의 두려워하는 그것이 내게 임하고 나의 무서워하는 그것이 내 몸에 미쳤구나
26 ೨೬ ನನಗೆ ಯಾವ ಶಾಂತಿಯೂ, ವಿಶ್ರಾಂತಿಯೂ, ಉಪಶಮನವೂ ಇರುವುದಿಲ್ಲ, ಯಾವಾಗಲೂ ಕಳವಳವೇ.”
평강도 없고 안온도 없고 안식도 없고 고난만 임하였구나