< ಯೋಬನು 30 >
1 ೧ ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.
Toda sedaj me imajo tisti, ki so mlajši od mene, v posmeh, katerih očete bi preziral, da jih postavim s psi svojega tropa.
2 ೨ ಅವರ ಕೈ ಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.
Da, kako naj mi moč njihovih rok koristi, zrelost je odšla od njih?
3 ೩ ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.
Zaradi potrebe in lakote so bili osamljeni. Bežijo v divjino, v prejšnjem času zapuščeno in opustošeno.
4 ೪ ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು.
Ki sekajo egiptovsko špinačo pri grmih in brinove korenine so njihova hrana.
5 ೫ ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು.
Pregnani so bili izmed ljudi (za njimi so vpili kakor za tatom),
6 ೬ ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.
da prebivajo v pečinah dolin, v zemeljskih votlinah in v skalah.
7 ೭ ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು.
Med grmovjem so rigali, pod koprivami so bili zbrani skupaj.
8 ೮ ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.
Bili so otroci bedakov, da, otroci nizkotnih mož, bili so zlobnejši kakor zemlja.
9 ೯ ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ.
Sedaj sem njihova pesem, da, jaz sem njihova tarča posmeha.
10 ೧೦ ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.
Prezirajo me, bežijo daleč od mene in ne prizanašajo mi pljunka v moj obraz.
11 ೧೧ ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
Ker je odvezal mojo vrvico in me prizadel, so tudi oni popustili uzdo pred menoj.
12 ೧೨ ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ.
Na moji desni roki vstaja mladina. Moja stopala odrivajo in zoper mene so dvignili poti svojega uničenja.
13 ೧೩ ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.
Škodujejo moji stezi, postavili so mojo katastrofo, nobenega pomočnika nimajo.
14 ೧೪ ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ.
Prišli so nadme kakor [skozi] široko vrzel vodá. V opustošenju so se zgrnili nadme.
15 ೧೫ ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.
Strahote so se zgrnile nadme. Mojo dušo zasledujejo kakor veter in moja blaginja mineva kakor oblak.
16 ೧೬ ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.
Sedaj je moja duša izlita nadme, polastili so se me dnevi stiske.
17 ೧೭ ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.
Moje kosti so prebodene v meni v nočnem obdobju in moje kite nimajo počitka.
18 ೧೮ ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.
Z veliko silo moje bolezni je moja obleka spremenjena; naokoli me veže kakor ovratnik mojega plašča.
19 ೧೯ ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ.
Vrgel me je v blato in postal sem podoben prahu in pepelu.
20 ೨೦ ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ.
Kličem k tebi, ti pa me ne slišiš. Vstanem, ti pa se ne oziraš name.
21 ೨೧ ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.
Do mene si postal krut; s svojo močno roko se nastrojuješ zoper mene.
22 ೨೨ ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಆರ್ಭಟದಲ್ಲಿ ಮಾಯಮಾಡುತ್ತಿ.
Vzdiguješ me k vetru, povzročaš mi, da jaham na njem in raztapljaš moje imetje.
23 ೨೩ ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.
Kajti vem, da me boš privedel k smrti in k hiši, določeni za vse živeče.
24 ೨೪ ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ?
Vendar svoje roke ne bo iztegnil h grobu, čeprav v svojem uničenju kričijo.
25 ೨೫ ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.
Mar nisem jokal zaradi tistega, ki je bil v stiski? Mar ni moja duša žalovala za ubogim?
26 ೨೬ ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.
Ko sem gledal za dobrim, potem je prišlo k meni zlo. Ko pa sem pričakoval svetlobo, je prišla tema.
27 ೨೭ ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ.
Moja notranjost vre in ne počiva. Dnevi stiske so me ovirali.
28 ೨೮ ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.
Odšel sem žalujoč brez sonca. Vstal sem in klical v skupnosti.
29 ೨೯ ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.
Brat sem zmajem in družabnik sovam.
30 ೩೦ ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.
Moja koža na meni je črna in moje kosti gorijo zaradi vročine.
31 ೩೧ ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.
Tudi moja harfa je obrnjena v žalovanje in moja piščal v glas tistih, ki jokajo.