< ಯೋಬನು 32 >
1 ೧ ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
ἡσύχασαν δὲ καὶ οἱ τρεῖς φίλοι αὐτοῦ ἔτι ἀντειπεῖν Ιωβ ἦν γὰρ Ιωβ δίκαιος ἐναντίον αὐτῶν
2 ೨ ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
ὠργίσθη δὲ Ελιους ὁ τοῦ Βαραχιηλ ὁ Βουζίτης ἐκ τῆς συγγενείας Ραμ τῆς Αυσίτιδος χώρας ὠργίσθη δὲ τῷ Ιωβ σφόδρα διότι ἀπέφηνεν ἑαυτὸν δίκαιον ἐναντίον κυρίου
3 ೩ ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
καὶ κατὰ τῶν τριῶν δὲ φίλων ὠργίσθη σφόδρα διότι οὐκ ἠδυνήθησαν ἀποκριθῆναι ἀντίθετα Ιωβ καὶ ἔθεντο αὐτὸν εἶναι ἀσεβῆ
4 ೪ ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.
Ελιους δὲ ὑπέμεινεν δοῦναι ἀπόκρισιν Ιωβ ὅτι πρεσβύτεροι αὐτοῦ εἰσιν ἡμέραις
5 ೫ ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.
καὶ εἶδεν Ελιους ὅτι οὐκ ἔστιν ἀπόκρισις ἐν στόματι τῶν τριῶν ἀνδρῶν καὶ ἐθυμώθη ὀργὴ αὐτοῦ
6 ೬ ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
ὑπολαβὼν δὲ Ελιους ὁ τοῦ Βαραχιηλ ὁ Βουζίτης εἶπεν νεώτερος μέν εἰμι τῷ χρόνῳ ὑμεῖς δέ ἐστε πρεσβύτεροι διὸ ἡσύχασα φοβηθεὶς τοῦ ὑμῖν ἀναγγεῖλαι τὴν ἐμαυτοῦ ἐπιστήμην
7 ೭ ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.
εἶπα δὲ ὅτι ὁ χρόνος ἐστὶν ὁ λαλῶν ἐν πολλοῖς δὲ ἔτεσιν οἴδασιν σοφίαν
8 ೮ ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
ἀλλὰ πνεῦμά ἐστιν ἐν βροτοῖς πνοὴ δὲ παντοκράτορός ἐστιν ἡ διδάσκουσα
9 ೯ ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ.
οὐχ οἱ πολυχρόνιοί εἰσιν σοφοί οὐδ’ οἱ γέροντες οἴδασιν κρίμα
10 ೧೦ ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ.
διὸ εἶπα ἀκούσατέ μου καὶ ἀναγγελῶ ὑμῖν ἃ οἶδα
11 ೧೧ ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು.
ἐνωτίζεσθέ μου τὰ ῥήματα ἐρῶ γὰρ ὑμῶν ἀκουόντων ἄχρι οὗ ἐτάσητε λόγους
12 ೧೨ ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
καὶ μέχρι ὑμῶν συνήσω καὶ ἰδοὺ οὐκ ἦν τῷ Ιωβ ἐλέγχων ἀνταποκρινόμενος ῥήματα αὐτοῦ ἐξ ὑμῶν
13 ೧೩ ‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.
ἵνα μὴ εἴπητε εὕρομεν σοφίαν κυρίῳ προσθέμενοι
14 ೧೪ ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.
ἀνθρώπῳ δὲ ἐπετρέψατε λαλῆσαι τοιαῦτα ῥήματα
15 ೧೫ ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.
ἐπτοήθησαν οὐκ ἀπεκρίθησαν ἔτι ἐπαλαίωσαν ἐξ αὐτῶν λόγους
16 ೧೬ ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?
ὑπέμεινα οὐ γὰρ ἐλάλησαν ὅτι ἔστησαν οὐκ ἀπεκρίθησαν
17 ೧೭ ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.
ὑπολαβὼν δὲ Ελιους λέγει
18 ೧೮ ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.
πάλιν λαλήσω πλήρης γάρ εἰμι ῥημάτων ὀλέκει γάρ με τὸ πνεῦμα τῆς γαστρός
19 ೧೯ ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
ἡ δὲ γαστήρ μου ὥσπερ ἀσκὸς γλεύκους ζέων δεδεμένος ἢ ὥσπερ φυσητὴρ χαλκέως ἐρρηγώς
20 ೨೦ ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.
λαλήσω ἵνα ἀναπαύσωμαι ἀνοίξας τὰ χείλη
21 ೨೧ ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.
ἄνθρωπον γὰρ οὐ μὴ αἰσχυνθῶ ἀλλὰ μὴν οὐδὲ βροτὸν οὐ μὴ ἐντραπῶ
22 ೨೨ ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.
οὐ γὰρ ἐπίσταμαι θαυμάσαι πρόσωπον εἰ δὲ μή καὶ ἐμὲ σῆτες ἔδονται