< ಯೋಬನು 33 >
1 ೧ ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು.
Luister nu, Job, naar mijn rede, En leen het oor aan heel mijn betoog.
2 ೨ ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ.
Zie, ik heb mijn mond geopend, Mijn tong in mijn gehemelte spreekt;
3 ೩ ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.
Mijn hart stort woorden van wijsheid uit, Mijn lippen verkonden duidelijke taal!
4 ೪ ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ.
De geest van God heeft mij gemaakt, De adem van den Almachtige mij het leven geschonken;
5 ೫ ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.
Antwoord mij dus, zo ge kunt; Houd u gereed, stel u tegen mij op!
6 ೬ ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.
Ik ben dus voor God aan u gelijk, Ook ik ben gekneed uit leem:
7 ೭ ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.
Dus behoeft u geen vrees voor mij te verschrikken Mijn hand niet zwaar u te drukken.
8 ೮ ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ,
Ge hebt voor mijn eigen oren verklaard, En ik heb uw woorden verstaan:
9 ೯ ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.
"Ik ben rein, zonder zonde, Ik ben zuiver, op mij rust geen schuld!"
10 ೧೦ ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ.
"Toch vindt Hij klachten tegen mij, En behandelt mij als zijn vijand;
11 ೧೧ ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ.
Hij steekt mijn voeten in het blok, Bespiedt al mijn gangen.
12 ೧೨ ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.
Zie, als ik roep, antwoordt Hij niet Want God is groter dan een mens!"
13 ೧೩ ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?
Hoe hebt ge Hem durven verwijten, Dat Hij op geen van uw woorden antwoord geeft?
14 ೧೪ ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ.
Het is, omdat God slechts eenmaal spreekt, En het geen tweede keer herhaalt:
15 ೧೫ ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,
In een droom, in een nachtelijk visioen In de sluimering op de sponde.
16 ೧೬ ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.
Dan opent Hij het oor van de mensen, En verschrikt hen door zijn visioenen,
17 ೧೭ ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.
Om den mens van trots te weerhouden, Den man voor hoogmoed te behoeden;
18 ೧೮ ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.
Om zo zijn ziel voor de groeve te bewaren, Zijn leven voor de gang naar het graf.
19 ೧೯ ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.
Dan kastijdt Hij hem door smart op zijn sponde, Door een koorts in zijn beenderen zonder eind,
20 ೨೦ ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.
Zodat zijn leven van het brood gaat walgen, Zijn ziel van de begeerlijkste spijs;
21 ೨೧ ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.
Zijn vlees slinkt zienderogen weg, Zijn gebeente, eens onzichtbaar, ligt bloot.
22 ೨೨ ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.
Maar zelfs als zijn ziel het graf al nabij is, Zijn leven het oord van de doden: Zo hij besluit in zijn hart, zich tot God te keren En hij zijn dwaasheid erkent:
23 ೨೩ ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,
Dan treedt er voor hem een engel op, Een tolk, een uit de duizend. Dan wijst hij den mens op zijn plicht,
24 ೨೪ ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,
Ontfermt zich zijner, en spreekt: Laat hem toch niet in de groeve dalen, Ik heb zijn losprijs gevonden
25 ೨೫ ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು.
Zijn vlees worde frisser dan in zijn jeugd, Hij kere tot zijn jonkheid terug!
26 ೨೬ ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.
Dan laat God Zich verbidden; genadig neemt Hij hem aan, Doet hem zijn aanschijn met jubel aanschouwen, En schenkt den mens zijn gerechtigheid terug.
27 ೨೭ ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.
Dan juicht hij het uit voor de mensen, en zegt: Ik heb gezondigd, het recht verdraaid, Maar Hij heeft het niet op mij gewroken!
28 ೨೮ ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.
Zo behoedt Hij zijn ziel voor de gang naar het graf, En verlustigt zijn leven zich in het licht!
29 ೨೯ ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.
Zie, dit alles doet God Tweemaal, driemaal met een mens:
30 ೩೦ ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು
Hij brengt zijn leven terug van het graf, En bestraalt hem met het levenslicht!
31 ೩೧ ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.
Luister dus, Job, en hoor naar mij; Zwijg stil, en laat het spreken aan mij.
32 ೩೨ ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.
Hebt ge dan iets te zeggen, antwoord mij; Spreek dan, want ik geef u gaarne gelijk.
33 ೩೩ ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”
Zo niet, luister naar mij, En zwijg, ik zal u wijsheid leren!