< ಯೋಬನು 33 >

1 ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು.
וְֽאוּלָם שְׁמַֽע־נָא אִיּוֹב מִלָּי וְֽכׇל־דְּבָרַי הַאֲזִֽינָה׃
2 ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ.
הִנֵּה־נָא פָּתַחְתִּי פִי דִּבְּרָה לְשׁוֹנִי בְחִכִּֽי׃
3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.
יֹשֶׁר־לִבִּי אֲמָרָי וְדַעַת שְׂפָתַי בָּרוּר מִלֵּֽלוּ׃
4 ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ.
רֽוּחַ־אֵל עָשָׂתְנִי וְנִשְׁמַת שַׁדַּי תְּחַיֵּֽנִי׃
5 ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.
אִם־תּוּכַל הֲשִׁיבֵנִי עֶרְכָהֿ לְפָנַי הִתְיַצָּֽבָה׃
6 ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.
הֵן־אֲנִי כְפִיךָ לָאֵל מֵחֹמֶר קֹרַצְתִּי גַם־אָֽנִי׃
7 ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.
הִנֵּה אֵמָתִי לֹא תְבַעֲתֶךָּ וְאַכְפִּי עָלֶיךָ לֹֽא־יִכְבָּֽד׃
8 ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ,
אַךְ אָמַרְתָּ בְאׇזְנָי וְקוֹל מִלִּין אֶשְׁמָֽע׃
9 ‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.
זַךְ אֲנִי בְּֽלִי ־ פָשַׁע חַ ף אָנֹכִי וְלֹא עָוֺן לִֽי׃
10 ೧೦ ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ.
הֵן תְּנוּאוֹת עָלַי יִמְצָא יַחְשְׁבֵנִי לְאוֹיֵב לֽוֹ׃
11 ೧೧ ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ.
יָשֵׂם בַּסַּד רַגְלָי יִשְׁמֹר כׇּל־אׇרְחֹתָֽי׃
12 ೧೨ ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.
הֶן־זֹאת לֹא־צָדַקְתָּ אֶעֱנֶךָּ כִּי־יִרְבֶּה אֱלוֹהַּ מֵאֱנֽוֹשׁ׃
13 ೧೩ ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?
מַדּוּעַ אֵלָיו רִיבוֹתָ כִּי כׇל־דְּבָרָיו לֹא יַעֲנֶֽה׃
14 ೧೪ ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ.
כִּֽי־בְאַחַת יְדַבֶּר־אֵל וּבִשְׁתַּיִם לֹא יְשׁוּרֶֽנָּה׃
15 ೧೫ ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,
בַּחֲלוֹם ׀ חֶזְיוֹן לַיְלָה בִּנְפֹל תַּרְדֵּמָה עַל־אֲנָשִׁים בִּתְנוּמוֹת עֲלֵי מִשְׁכָּֽב׃
16 ೧೬ ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.
אָז יִגְלֶה אֹזֶן אֲנָשִׁים וּבְמֹסָרָם יַחְתֹּֽם׃
17 ೧೭ ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.
לְהָסִיר אָדָם מַעֲשֶׂה וְגֵוָה מִגֶּבֶר יְכַסֶּֽה׃
18 ೧೮ ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.
יַחְשֹׂךְ נַפְשׁוֹ מִנִּי־שָׁחַת וְחַיָּתוֹ מֵעֲבֹר בַּשָּֽׁלַח׃
19 ೧೯ ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.
וְהוּכַח בְּמַכְאוֹב עַל־מִשְׁכָּבוֹ (וריב) [וְרוֹב] עֲצָמָיו אֵתָֽן׃
20 ೨೦ ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.
וְזִהֲמַתּוּ חַיָּתוֹ לָחֶם וְנַפְשׁוֹ מַאֲכַל תַּאֲוָֽה׃
21 ೨೧ ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.
יִכֶל בְּשָׂרוֹ מֵרֹאִי (ושפי) [וְשֻׁפּוּ] עַצְמֹתָיו לֹא רֻאּֽוּ׃
22 ೨೨ ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.
וַתִּקְרַב לַשַּׁחַת נַפְשׁוֹ וְחַיָּתוֹ לַֽמְמִתִֽים׃
23 ೨೩ ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,
אִם־יֵשׁ עָלָיו ׀ מַלְאָךְ מֵלִיץ אֶחָד מִנִּי־אָלֶף לְהַגִּיד לְאָדָם יׇשְׁרֽוֹ׃
24 ೨೪ ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,
וַיְחֻנֶּנּוּ וַיֹּאמֶר פְּדָעֵהוּ מֵרֶדֶת שָׁחַת מָצָאתִי כֹֽפֶר׃
25 ೨೫ ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು.
רֻֽטְפַשׁ בְּשָׂרוֹ מִנֹּעַר יָשׁוּב לִימֵי עֲלוּמָֽיו׃
26 ೨೬ ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.
יֶעְתַּר אֶל־אֱלוֹהַּ ׀ וַיִּרְצֵהוּ וַיַּרְא פָּנָיו בִּתְרוּעָה וַיָּשֶׁב לֶאֱנוֹשׁ צִדְקָתֽוֹ׃
27 ೨೭ ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.
יָשֹׁר ׀ עַל־אֲנָשִׁים וַיֹּאמֶר חָטָאתִי וְיָשָׁר הֶעֱוֵיתִי וְלֹא־שָׁוָה לִֽי׃
28 ೨೮ ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.
פָּדָה (נפשי) [נַפְשׁוֹ] מֵעֲבֹר בַּשָּׁחַת (וחיתי) [וְחַיָּתוֹ] בָּאוֹר תִּרְאֶֽה׃
29 ೨೯ ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.
הֶן־כׇּל־אֵלֶּה יִפְעַל־אֵל פַּעֲמַיִם שָׁלוֹשׁ עִם־גָּֽבֶר׃
30 ೩೦ ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು
לְהָשִׁיב נַפְשׁוֹ מִנִּי־שָׁחַת לֵאוֹר בְּאוֹר הַחַיִּֽים׃
31 ೩೧ ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.
הַקְשֵׁב אִיּוֹב שְֽׁמַֽע־לִי הַחֲרֵשׁ וְאָנֹכִי אֲדַבֵּֽר׃
32 ೩೨ ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.
אִם־יֵשׁ־מִלִּין הֲשִׁיבֵנִי דַּבֵּר כִּֽי־חָפַצְתִּי צַדְּקֶֽךָּ׃
33 ೩೩ ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”
אִם־אַיִן אַתָּה שְֽׁמַֽע־לִי הַחֲרֵשׁ וַאֲאַלֶּפְךָ חׇכְמָֽה׃

< ಯೋಬನು 33 >