< ಯೋಬನು 34 >
1 ೧ ಆಗ ಎಲೀಹು ಮತ್ತೆ ಇಂತೆಂದನು,
Then Elihu continued:
2 ೨ “ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ!
“Hear my words, O wise men; give ear to me, O men of learning.
3 ೩ ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.
For the ear tests words as the mouth tastes food.
4 ೪ ನ್ಯಾಯವನ್ನೇ ಆರಿಸಿಕೊಳ್ಳೋಣ, ಒಳ್ಳೆಯದು ಇಂಥದೆಂದು ನಮ್ಮನಮ್ಮೊಳಗೆ ನಿಶ್ಚಯಿಸಿಕೊಳ್ಳೋಣ.
Let us choose for ourselves what is right; let us learn together what is good.
5 ೫ ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.
For Job has declared, ‘I am righteous, yet God has deprived me of justice.
6 ೬ ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ.
Would I lie about my case? My wound is incurable, though I am without transgression.’
7 ೭ ಯೋಬನಿಗೆ ಸಮಾನನು ಯಾರು? ದೇವದೂಷಣೆಯನ್ನು ನೀರಿನಂತೆ ಕುಡಿಯುತ್ತಾನಲ್ಲಾ.
What man is like Job, who drinks up derision like water?
8 ೮ ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ.
He keeps company with evildoers and walks with wicked men.
9 ೯ ‘ಒಬ್ಬನು ದೇವರ ಅನ್ಯೋನ್ಯತೆಯಲ್ಲಿ ಸಂತೋಷಪಟ್ಟರೂ, ಅವನಿಗೆ ಯಾವ ಪ್ರಯೋಜನವೂ ಇಲ್ಲ’ ಎಂದು ಹೇಳಿದ್ದಾನಷ್ಟೆ.
For he has said, ‘It profits a man nothing that he should delight in God.’
10 ೧೦ ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾನೆಂಬ ಯೋಚನೆಯೂ, ಸರ್ವಶಕ್ತನಾದ ದೇವರು ಅನ್ಯಾಯವನ್ನು ನಡೆಸುತ್ತಾನೆಂಬ ಭಾವನೆಯೂ ದೂರವಾಗಿರಲಿ!
Therefore listen to me, O men of understanding. Far be it from God to do wrong, and from the Almighty to act unjustly.
11 ೧೧ ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.
For according to a man’s deeds He repays him; according to a man’s ways He brings consequences.
12 ೧೨ ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ, ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ.
Indeed, it is true that God does not act wickedly, and the Almighty does not pervert justice.
13 ೧೩ ಭೂಲೋಕವನ್ನು ಆತನ ವಶಕ್ಕೆ ಕೊಟ್ಟವನು ಯಾರು? ಯಾರು ಭೂಮಂಡಲವನ್ನೆಲ್ಲಾ ಕ್ರಮಪಡಿಸಿದನು?
Who gave Him charge over the earth? Who appointed Him over the whole world?
14 ೧೪ ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,
If He were to set His heart to it and withdraw His Spirit and breath,
15 ೧೫ ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು.
all flesh would perish together and mankind would return to the dust.
16 ೧೬ ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!
If you have understanding, hear this; listen to my words.
17 ೧೭ ನ್ಯಾಯವನ್ನು ದ್ವೇಷಿಸುವವನು ಆಳ್ವಿಕೆ ಮಾಡಾನೇ? ಧರ್ಮಸ್ವರೂಪನೂ, ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವೆಯಾ?
Could one who hates justice govern? Will you condemn the just and mighty One,
18 ೧೮ ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?
who says to kings, ‘You are worthless!’ and to nobles, ‘You are wicked,’
19 ೧೯ ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
who is not partial to princes and does not favor rich over poor? For they are all the work of His hands.
20 ೨೦ ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.
They die in an instant, in the middle of the night. The people convulse and pass away; the mighty are removed without human hand.
21 ೨೧ ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.
For His eyes are on the ways of a man, and He sees his every step.
22 ೨೨ ಅಧರ್ಮಿಗಳು ಅಡಗಿಕೊಳ್ಳುವುದಕ್ಕೆ, ಅನುಕೂಲವಾದ ಯಾವ ಕತ್ತಲೂ, ಯಾವ ಗಾಢಾಂಧಕಾರವೂ ಇರುವುದಿಲ್ಲ.
There is no darkness or deep shadow where the workers of iniquity can hide.
23 ೨೩ ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.
For God need not examine a man further or have him approach for judgment.
24 ೨೪ ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು.
He shatters the mighty without inquiry and sets up others in their place.
25 ೨೫ ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.
Therefore, He recognizes their deeds; He overthrows them in the night and they are crushed.
26 ೨೬ ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟುಹಾಕುವನು.
He strikes them for their wickedness in full view,
27 ೨೭ ಅವರು ಆತನನ್ನು ಹಿಂಬಾಲಿಸದೆ, ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯಮಾಡಿದ್ದರಷ್ಟೆ.
because they turned aside from Him and had no regard for any of His ways.
28 ೨೮ ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.
They caused the cry of the poor to come before Him, and He heard the outcry of the afflicted.
29 ೨೯ ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.
But when He remains silent, who can condemn Him? When He hides His face, who can see Him? Yet He watches over both man and nation,
30 ೩೦ ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ.
that godless men should not rule or lay snares for the people.
31 ೩೧ ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,
Suppose someone says to God, ‘I have endured my punishment; I will offend no more.
32 ೩೨ ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?
Teach me what I cannot see; if I have done wrong, I will not do it again.’
33 ೩೩ ಆತನು ಕೊಡುವ ಪ್ರತಿಫಲವನ್ನು ಬೇಡವೆನ್ನುವುದೇಕೆ? ಅದು ನಿನ್ನ ಮನಸ್ಸಿಗೆ ಒಪ್ಪಿತವಾಗಿರಬೇಕೋ? ನೀನೇ ಆರಿಸಿಕೋ, ನಾನು ಆರಿಸಿಕೊಳ್ಳಲಾರೆನು. ನಿನಗೆ ತಿಳಿದದ್ದನ್ನು ತಿಳಿಸು.
Should God repay you on your own terms when you have disavowed His? You must choose, not I; so tell me what you know.
34 ೩೪ ಬುದ್ಧಿವಂತರೂ, ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ ನಿನ್ನ ವಿಷಯವಾಗಿ,
Men of understanding will declare to me, and the wise men who hear me will say:
35 ೩೫ ‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’
‘Job speaks without knowledge; his words lack insight.’
36 ೩೬ ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ.
If only Job were tried to the utmost for answering like a wicked man.
37 ೩೭ ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು.
For he adds rebellion to his sin; he claps his hands among us and multiplies his words against God.”