< ಯೋಬನು 35 >

1 ಆ ಮೇಲೆ ಎಲೀಹು ಮತ್ತೆ ಇಂತೆಂದನು,
Og Elihu tok til ords og sagde:
2 “ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?
«Seg, trur du vel at slikt er rett, so du meir rettvis er enn Gud,
3 ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?
når djervt du spør: «Kva gagn hev eg, kva løn um eg frå syndi flyr?»
4 ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.
På dette vil eg svara deg og likeins venerne med deg.
5 ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!
Ditt auga du mot himmelen snu, og sjå på skyerne der uppe!
6 ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?
Di synd, kann ho vel skade honom? Lid han, um dine brot er mange?
7 ನೀನು ನೀತಿವಂತನಾಗಿದ್ದರೆ ಆತನಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಆತನಿಗೆ ಲಾಭವೇನು?
Er du rettvis, kva gjev du honom? Kva fær han då utav di hand?
8 ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.
Di synd vedkjem ein mann som deg, di rettferd gjeld eit menneskje.
9 ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.
Dei klagar yver urett stor og skrik um hjelp mot valdsmenns arm;
10 ೧೦ ‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
men spør’kje: «Kvar er Gud, min skapar, som let ved natt lovsongar tona,
11 ೧೧ ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.
gjev oss meir vit enn dyr på mark og meir forstand enn fugl i luft?»
12 ೧೨ ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.
Der ropar dei - han svarar ikkje - um hjelp mot ovmod hjå dei vonde.
13 ೧೩ ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.
Gud høyrer ei på tome ord, slikt agtar Allvald ikkje på.
14 ೧೪ ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ, ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?
Um enn du segjer du ei ser han, han ser han nok saki, bi på honom!
15 ೧೫ ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,
Og no, når vreiden hans ei refser, tru han ei kjenner dårskapen?
16 ೧೬ ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”
Men Job let upp sin munn til fåfengd, uvitugt talar han so mykje.»

< ಯೋಬನು 35 >