< ಯೋಬನು 37 >

1 “ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.
אַף־לְ֭זֹאת יֶחֱרַ֣ד לִבִּ֑י וְ֝יִתַּ֗ר מִמְּקוֹמֽוֹ׃
2 ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ!
שִׁמְע֤וּ שָׁמ֣וֹעַ בְּרֹ֣גֶז קֹל֑וֹ וְ֝הֶ֗גֶה מִפִּ֥יו יֵצֵֽא׃
3 ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.
תַּֽחַת־כָּל־הַשָּׁמַ֥יִם יִשְׁרֵ֑הוּ וְ֝אוֹר֗וֹ עַל־כַּנְפ֥וֹת הָאָֽרֶץ׃
4 ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ.
אַחֲרָ֤יו ׀ יִשְׁאַג־ק֗וֹל יַ֭רְעֵם בְּק֣וֹל גְּאוֹנ֑וֹ וְלֹ֥א יְ֝עַקְּבֵ֗ם כִּֽי־יִשָּׁמַ֥ע קוֹלֽוֹ׃
5 ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.
יַרְעֵ֤ם אֵ֣ל בְּ֭קוֹלוֹ נִפְלָא֑וֹת עֹשֶׂ֥ה גְ֝דֹל֗וֹת וְלֹ֣א נֵדָֽע׃
6 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು.
כִּ֤י לַשֶּׁ֨לַג ׀ יֹאמַ֗ר הֱוֵ֫א אָ֥רֶץ וְגֶ֥שֶׁם מָטָ֑ר וְ֝גֶ֗שֶׁם מִטְר֥וֹת עֻזּֽוֹ׃
7 ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.
בְּיַד־כָּל־אָדָ֥ם יַחְתּ֑וֹם לָ֝דַ֗עַת כָּל־אַנְשֵׁ֥י מַעֲשֵֽׂהוּ׃
8 ಆಗ ಮೃಗಗಳು ಗುಹೆಗಳನ್ನು ಸೇರಿ, ತಮ್ಮ ಗುಹೆಗಳಲ್ಲಿ ವಾಸಿಸುವವು.
וַתָּבֹ֣א חַיָּ֣ה בְמוֹ־אָ֑רֶב וּבִמְע֖וֹנֹתֶ֣יהָ תִשְׁכֹּֽן׃
9 ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು.
מִן־הַ֭חֶדֶר תָּב֣וֹא סוּפָ֑ה וּֽמִמְּזָרִ֥ים קָרָֽה׃
10 ೧೦ ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, ವಿಶಾಲವಾದ ನೀರು ಗಟ್ಟಿಯಾಗುವುದು.
מִנִּשְׁמַת־אֵ֥ל יִתֶּן־קָ֑רַח וְרֹ֖חַב מַ֣יִם בְּמוּצָֽק׃
11 ೧೧ ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.
אַף־בְּ֭רִי יַטְרִ֣יחַ עָ֑ב יָ֝פִ֗יץ עֲנַ֣ן אוֹרֽוֹ׃
12 ೧೨ ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.
וְה֤וּא מְסִבּ֨וֹת ׀ מִתְהַפֵּ֣ךְ בְּתַחְבּוּלֹתָ֣יו לְפָעֳלָ֑ם כֹּ֖ל אֲשֶׁ֥ר יְצַוֵּ֓ם ׀ עַל־פְּנֵ֖י תֵבֵ֣ל אָֽרְצָה׃
13 ೧೩ ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.
אִם־לְשֵׁ֥בֶט אִם־לְאַרְצ֑וֹ אִם־לְ֝חֶ֗סֶד יַמְצִאֵֽהוּ׃
14 ೧೪ ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು.
הַאֲזִ֣ינָה זֹּ֣את אִיּ֑וֹב עֲ֝מֹ֗ד וְהִתְבּוֹנֵ֤ן ׀ נִפְלְא֬וֹת אֵֽל׃
15 ೧೫ ದೇವರು ಇವುಗಳನ್ನು ನಿಯಂತ್ರಿಸಿ, ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?
הֲ֭תֵדַע בְּשׂוּם־אֱל֣וֹהַּ עֲלֵיהֶ֑ם וְ֝הוֹפִ֗יעַ א֣וֹר עֲנָנֽוֹ׃
16 ೧೬ ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?
הֲ֭תֵדַע עַל־מִפְלְשֵׂי־עָ֑ב מִ֝פְלְא֗וֹת תְּמִ֣ים דֵּעִֽים׃
17 ೧೭ ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?
אֲשֶׁר־בְּגָדֶ֥יךָ חַמִּ֑ים בְּהַשְׁקִ֥ט אֶ֝֗רֶץ מִדָּרֽוֹם׃
18 ೧೮ ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?
תַּרְקִ֣יעַ עִ֭מּוֹ לִשְׁחָקִ֑ים חֲ֝זָקִ֗ים כִּרְאִ֥י מוּצָֽק׃
19 ೧೯ ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.
ה֭וֹדִיעֵנוּ מַה־נֹּ֣אמַר ל֑וֹ לֹ֥א־נַ֝עֲרֹ֗ךְ מִפְּנֵי־חֹֽשֶׁךְ׃
20 ೨೦ ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ.
הַֽיְסֻפַּר־ל֭וֹ כִּ֣י אֲדַבֵּ֑ר אִֽם־אָ֥מַר אִ֝֗ישׁ כִּ֣י יְבֻלָּֽע׃
21 ೨೧ ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.
וְעַתָּ֤ה ׀ לֹ֘א רָ֤אוּ א֗וֹר בָּהִ֣יר ה֭וּא בַּשְּׁחָקִ֑ים וְר֥וּחַ עָ֝בְרָ֗ה וַֽתְּטַהֲרֵֽם׃
22 ೨೨ ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.
מִ֭צָּפוֹן זָהָ֣ב יֶֽאֱתֶ֑ה עַל־אֱ֝ל֗וֹהַּ נ֣וֹרָא הֽוֹד׃
23 ೨೩ ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.
שַׁדַּ֣י לֹֽא־מְ֭צָאנֻהוּ שַׂגִּיא־כֹ֑חַ וּמִשְׁפָּ֥ט וְרֹב־צְ֝דָקָ֗ה לֹ֣א יְעַנֶּֽה׃
24 ೨೪ ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”
לָ֭כֵן יְרֵא֣וּהוּ אֲנָשִׁ֑ים לֹֽא־יִ֝רְאֶ֗ה כָּל־חַכְמֵי־לֵֽב׃ פ

< ಯೋಬನು 37 >