< ಯೋಬನು 39 >

1 ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?
Знаешь ли ты время, когда рождаются дикие козы на скалах, и замечал ли роды ланей?
2 ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ?
можешь ли расчислить месяцы беременности их? и знаешь ли время родов их?
3 ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು.
Они изгибаются, рождая детей своих, выбрасывая свои ноши;
4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ.
дети их приходят в силу, растут на поле, уходят и не возвращаются к ним.
5 ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?
Кто пустил дикого осла на свободу, и кто разрешил узы онагру,
6 ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.
которому степь Я назначил домом и солончаки - жилищем?
7 ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.
Он посмевается городскому многолюдству и не слышит криков погонщика,
8 ಅದರ ಕಾವಲು ವಿಶಾಲವಾದ ಬೆಟ್ಟಗಳೇ. ಹಸಿರು ಎಲ್ಲಿದ್ದರೂ ಅದನ್ನು ಹುಡುಕುತ್ತಲೇ ಇರುವುದು.
по горам ищет себе пищи и гоняется за всякою зеленью.
9 ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ?
Захочет ли единорог служить тебе и переночует ли у яслей твоих?
10 ೧೦ ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
Можешь ли веревкою привязать единорога к борозде, и станет ли он боронить за тобою поле?
11 ೧೧ ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?
Понадеешься ли на него, потому что у него сила велика, и предоставишь ли ему работу твою?
12 ೧೨ ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ, ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವುದೆಂದು ಭರವಸವಿಡುವೆಯಾ?
Поверишь ли ему, что он семена твои возвратит и сложит на гумно твое?
13 ೧೩ ಉಷ್ಟ್ರಪಕ್ಷಿಯ ಪಕ್ಷವು ಸಂತೋಷದಿಂದ ಬಡಿದಾಡುವುದು, ಆದರೆ ಅದರ ರೆಕ್ಕೆಗರಿಗಳಿಗೆ ಪ್ರೀತಿಭಾವವುಂಟೋ?
Ты ли дал красивые крылья павлину и перья и пух страусу?
14 ೧೪ ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ.
Он оставляет яйца свои на земле, и на песке согревает их,
15 ೧೫ ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.
и забывает, что нога может раздавить их и полевой зверь может растоптать их;
16 ೧೬ ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.
он жесток к детям своим, как бы не своим, и не опасается, что труд его будет напрасен;
17 ೧೭ ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!
потому что Бог не дал ему мудрости и не уделил ему смысла;
18 ೧೮ ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.
а когда поднимется на высоту, посмеивается коню и всаднику его.
19 ೧೯ ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ?
Ты ли дал коню силу и облек шею его гривою?
20 ೨೦ ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.
Можешь ли ты испугать его, как саранчу? Храпение ноздрей его - ужас;
21 ೨೧ ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.
роет ногою землю и восхищается силою; идет навстречу оружию;
22 ೨೨ ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು.
он смеется над опасностью и не робеет и не отворачивается от меча;
23 ೨೩ ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.
колчан звучит над ним, сверкает копье и дротик;
24 ೨೪ ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು.
в порыве и ярости он глотает землю и не может стоять при звуке трубы;
25 ೨೫ ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು.
при трубном звуке он издает голос: гу! гу! и издалека чует битву, громкие голоса вождей и крик.
26 ೨೬ ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ?
Твоею ли мудростью летает ястреб и направляет крылья свои на полдень?
27 ೨೭ ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ?
По твоему ли слову возносится орел и устрояет на высоте гнездо свое?
28 ೨೮ ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು.
Он живет на скале и ночует на зубце утесов и на местах неприступных;
29 ೨೯ ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.
оттуда высматривает себе пищу: глаза его смотрят далеко;
30 ೩೦ ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;
птенцы его пьют кровь, и где труп, там и он.

< ಯೋಬನು 39 >