< ಯೋಬನು 40 >

1 ಇದಲ್ಲದೆ ಯೆಹೋವನು ಯೋಬನಿಗೆ,
上主又接著問約伯說:
2 “ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.
好辯之士,豈能同全能者辯論﹖非難天主的,請答覆這一切!
3 ಆಗ ಯೋಬನು ಯೆಹೋವನಿಗೆ ಉತ್ತರವಾಗಿ,
約伯回答上主說:「
4 “ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.
看,我這麼卑賤,我能回答什麼﹖只好用手掩口。
5 ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.
我說過一次,再不敢重複;我再說一次:我不敢再說什麼! 」
6 ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
上主由旋風中回答約伯說:
7 “ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
你要像勇士束好腰,我要問你,請指教我。
8 ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
你豈能推翻我的評斷,歸罪於我,而自以為有理﹖
9 ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?
你的手臂豈能同天主的相比﹖你的聲音,那能像雷鳴﹖
10 ೧೦ ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.
請你以尊貴和高雅作你的點綴,以光華美麗作你的衣裳;
11 ೧೧ ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
發洩你的烈怒,貶抑一切高傲的人;
12 ೧೨ ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.
視察一切傲慢的人,且加以制服,推翻惡人所處的地位;
13 ೧೩ ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.
將他們一同埋在土中,把他們都關在黑暗中!
14 ೧೪ ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.
如果你能這樣作,我也要稱讚你,因為你的右手救護了你。
15 ೧೫ ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.
且看河馬,牠同你都是我造成的,牠像牛一樣吃草。
16 ೧೬ ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.
牠的精力全在腰部,牠的力量是在腹部的肌肉;
17 ೧೭ ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.
牠挺起尾巴好像香柏,大腿上的筋聯結在一起;
18 ೧೮ ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.
牠的脊骨好似銅管,牠的骨骸有如鐵杠。
19 ೧೯ ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.
牠是天主的傑作,造牠者賜給了牠利刃。
20 ೨೦ ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;
群山供給牠食物,百獸在那裏同牠遊戲。
21 ೨೧ ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.
牠臥在蓮葉之下,躺在蘆葦和沼澤深處;
22 ೨೨ ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.
蓮葉的蔭影遮蔽著牠,溪邊的楊柳掩護著牠。
23 ೨೩ ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.
河水漲溢之時,牠毫不戰慄;約但河漲到牠口邊,牠仍安寧。
24 ೨೪ ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು.
誰能在牠目前捕捉牠,或以木橛穿透牠的鼻孔﹖

< ಯೋಬನು 40 >