< ಯೋಬನು 41 >
1 ೧ ಲಿವ್ಯಾತಾನ್ ಮೊಸಳೆಯನ್ನು ಮೀನು ಗಾಳದಿಂದ ಎಳೆಯುವಿಯೋ? ಹುರಿಯಿಂದ ಅದರ ನಾಲಿಗೆಯನ್ನು ಅದುಮಿ ಬಿಗಿಯುವಿಯೋ?
१तुला लिव्याथानाला गळ टाकून पकडता येईल का? तुला त्याची जीभ दोरीने बांधता येईल का?
2 ೨ ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?
२तुला लिव्याथानाच्या नाकातून दोरी घालून त्यास वेसण घालता येईल का? किंवा त्याच्या जबड्यात गळ घालता येईल का?
3 ೩ ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?
३लिव्याथान तुझ्याकडे सोडून देण्यासाठी याचना करील का? तो तुझ्याशी मृदू शब्दात बोलेल का?
4 ೪ ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ?
४लिव्याथान तुझ्याशी करार करून जन्मभर तुझा दास होऊन राहील का?
5 ೫ ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ?
५तू पक्ष्याशी जसा खेळशील तसा लिव्याथानाशी खेळशील का? तू त्यास दोरीने बांधशील का? तुझ्या मुली त्याच्याशी खेळू शकतील काय?
6 ೬ ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ?
६मच्छीमार तुझ्याकडून लिव्याथानाला विकत घेण्याचा प्रयत्न करतील का? ते त्याचे तुकडे करून ते व्यापाऱ्यांना विकण्याचा प्रयत्न करतील का?
7 ೭ ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ?
७तू लिव्याथानाच्या कातडीत किंवा डोक्यात बरच्या फेकशील का?
8 ೮ ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ.
८तू एकदा का लिव्याथानावर हात टाकलास तर पुन्हा तसे कधी करु शकणार नाहीस. ती कशा प्रकारची लढाई असेल याचा एकदा विचार कर.
9 ೯ ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು.
९तू लिव्याथानाचा पराभव करु शकशील असे तुला वाटत असेल तर ते विसरून जा. तशा आशेला जागाच नाही. त्याच्याकडे नजर टाकताच तुझी भीतीने गाळण उडेल.
10 ೧೦ ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?
१०एकही मनुष्य त्यास जागे करून त्याचा राग ओढवून घेण्याइतका शूर नाही. “माझ्याविरुध्द उभा राहणाराही कोणी नाही.
11 ೧೧ ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.
११मला कोणी काही प्रथम दिले नाही म्हणून मी त्यांची परत फेड करू? या नभोमंडळाखाली जे जे आहे ते सर्व माझे आहे.
12 ೧೨ ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.
१२मी तुला लिव्याथानाच्या पायांविषयी, त्याच्या शक्तीविषयी आणि त्याच्या ऐटदार बांध्याविषयी सांगेन.
13 ೧೩ ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?
१३कोणीही त्याची कातडी छेदू शकत नाही. त्याची जबड्यांत कोणाला शिरता येईल?
14 ೧೪ ಮುಖದ ಕದಗಳನ್ನು ಯಾರು ತೆರೆದಾರು? ಭಯವು ಅದರ ಹಲ್ಲುಗಳನ್ನು ಆವರಿಸಿಕೊಂಡಿದೆ.
१४लिव्याथानाला त्याचा जबडा उघडायला कोणीही भाग पाडू शकत नाही. त्याच्या तोंडातल्या दातांची लोकांस भीती वाटते.
15 ೧೫ ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿದೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.
१५लिव्याथानाच्या पाठीवर ढालीसारख्या खवल्यांच्या रांगा एकमेकांना चिकटून आहेत.
16 ೧೬ ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ.
१६ते खवले एकमेकांना इतके चिकटले आहेत की त्यातून हवासुध्दा जाऊ शकत नाही.
17 ೧೭ ಪರಸ್ಪರ ಅಂಟಿಕೊಂಡು ವಿಂಗಡಿಸದ ಹಾಗೆ ಹಿಡಿದುಕೊಂಡಿವೆ.
१७त्याचे खवले एकमेकांशी घटृ बांधलेले आहेत. ते एकमेकांशी इतके घटृ बांधलेले आहेत की कोणी ते ओढून वेगळे करु शकत नाही.
18 ೧೮ ಅದರ ಸೀನಿನ ತುಂತುರುಗಳು ತಳತಳಿಸುವವು, ಕಣ್ಣು ಅರುಣನೇತ್ರಕ್ಕೆ ಸಮಾನವಾಗಿದೆ.
१८लिव्याथान जेव्हा शिंकतो तेव्हा वीज चमकल्यासारखी वाटते. त्याचे डोळे पहाटेच्या प्रकाशासारखे चमकतात.
19 ೧೯ ಬಾಯೊಳಗಿಂದ ಕೊಳ್ಳಿಗಳು ಹೊರಡುವವು, ಬೆಂಕಿಕಿಡಿಗಳು ಹಾರುವವು.
१९त्याच्या तोंडातून आगीचे लोळ बाहेर पडतात. आगीच्या ठिणग्या निघतात.
20 ೨೦ ಆಪುಹುಲ್ಲಿಗೆ ಬೆಂಕಿಯಿಟ್ಟು ಊದಿ ಕಾಯಿಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಮೂಗಿನೊಳಗಿಂದ ಹೊಗೆ ಹಾಯುವುದು.
२०उकळत्या भांड्याखाली ठेवलेल्या जळत्या लव्हाळ्यातून निघतो तसा धूर त्याच्या नाकातून येतो.
21 ೨೧ ಅದರ ಉಸಿರೇ ಇದ್ದಲನ್ನು ಹೊತ್ತಿಸುವುದು, ಜ್ವಾಲೆಯು ಬಾಯಿಂದೇಳುವುದು.
२१लिव्याथानाच्या श्वासांनी कोळसे पेटतात आणि त्याच्या तोंडातून ज्वाला बाहेर पडतात.
22 ೨೨ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು.
२२लिव्याथानाची मान मजबूत आहे. लोक त्यास घाबरतात आणि त्याच्यापासून दूर पळत सुटतात.
23 ೨೩ ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.
२३त्याच्या कातडीवर एकही मऊ भाग नाही ती लोखंडासाखी कठीण आहे.
24 ೨೪ ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.
२४लिव्याथानाचे हृदय पाषाणासारखे आहे. त्यास भीती वाटत नाही ते पाट्यासारखे आहे. जात्याच्या खालच्या तळीसारखे ते आहे.
25 ೨೫ ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.
२५लिव्याथान उठून उभा राहिला की शूर वीरही घाबरतात लिव्याथानाने त्यांची शेपटी हलवली की ते पळून जातात.
26 ೨೬ ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು; ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ.
२६तलवारी, भाले आणि तीर त्याच्यावर फेकले तरी ते त्यास न लागता परत येतात. त्या शस्त्रांनी त्यास काहीही इजा होत नाही.
27 ೨೭ ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು.
२७तो लोखाडास गवताच्या काडीसारखे मोडू शकतो कुजलेले लाकूड जसे पटकन मोडते तसे तो पितळ मोडतो.
28 ೨೮ ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.
२८तो बाणांना घाबरुन पळून जात नाही वाळलेल्या गवताप्रमाणे दगड त्याच्यावर आपटून परत येतात.
29 ೨೯ ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು.
२९जेव्हा लाकडी गदा त्याच्यावर आपटली जाते तेव्हा त्यास ते गवत आपटल्याप्रमाणे वाटते. लोक त्याच्यावर भाले फेकतात तेव्हा तो हसतो.
30 ೩೦ ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು.
३०लिव्याथानाच्या शरीरावरची कातडी तीक्ष्ण, टणक खापरासाखी आहे. तो चिखलात कुळक फिरवल्याप्रमाणे तास पाडतो.
31 ೩೧ ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು.
३१लिव्याथान पाण्याला उकळी आल्याप्रमाणे हलवतो. तो त्यास उकळत्या तेलाच्या भांड्याप्रमाणे तो त्यावर बुडबुडे आणतो.
32 ೩೨ ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು.
३२लिव्याथान पोहतो तेव्हा तो आपल्यामागे मार्ग तयार करतो. तो पाणी ढवळून टाकतो आणि आपल्यामागे पांढरा फेस ठेवतो.
33 ೩೩ ಇದಕ್ಕೆ ಸಮಾನವಾದದ್ದು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ, ಭಯವಿಲ್ಲದೆ ಇರುವುದಕ್ಕಾಗಿ ಸೃಷ್ಟಿಸಲ್ಪಟ್ಟಿದೆ.
३३पृथ्वीवरचा एकही पशू लिव्याथानासारखा नाही. तो एक भीतिविरहित प्राणी आहे.
34 ೩೪ ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು.
३४लिव्याथान गर्विष्ठ प्राण्याला कमी (तुच्छ) लेखतो तो सगळ्या रानटी श्वापदांचा राजा आहे. आणि मी, परमेश्वराने त्यास निर्माण केले आहे.”