< ಯೋಬನು 42 >
1 ೧ ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
१नंतर ईयोबने परमेश्वरास उत्तर दिले, तो म्हणाला:
2 ೨ “ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
२“परमेश्वरा सर्वकाही तूच करु शकतोस ते मला माहीत आहे, तू योजना आखतोस त्या प्रत्यक्षात कोणीही थांबवू शकत नाही.
3 ೩ ‘ಜ್ಞಾನವಿಲ್ಲದೆ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?’ ಎಂಬ ನಿನ್ನ ಮಾತಿನಂತೆ ನಾನು ತಿಳಿಯದ ಸಂಗತಿಗಳನ್ನೂ, ನನಗೆ ಗೊತ್ತಿಲ್ಲದೆ ಬುದ್ಧಿಗೆ ಮೀರಿರುವ ಅದ್ಭುತಗಳನ್ನೂ ಕುರಿತು ಮಾತನಾಡಿದ್ದೇನೆ.
३तू मला विचारलेस, हा अज्ञानी मनुष्य कोण आहे जो असे मूर्खासारखे बोलतो आहे? तरीही मला ज्या गोष्टी कळत नव्हत्या त्या गोष्टी मी बोललो, त्यांच्याविषयीच मी बोलत होतो. ज्या गोष्टी समजणे माझ्या आवाक्याबाहेरचे होते त्यांच्याविषयी मी बोलत होतो.
4 ೪ ದಯಮಾಡಿ ಕೇಳು, ನಾನೇ ಮಾತನಾಡುವೆನು; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು ಎಂದು ಅಪ್ಪಣೆಕೊಟ್ಟೆ.
४परमेश्वरा, तू मला म्हणालास, ईयोब, तू ऐक, मी बोलेन, मी तुला प्रश्न विचारेन, आणि तू मला उत्तर दे.
5 ೫ ಕಿವಿಯಿಂದ ನಿನ್ನ ವಿಷಯವನ್ನು ಕೇಳಿದ್ದೆನು, ಈಗಲಾದರೋ ನಿನ್ನನ್ನೇ ಕಣ್ಣಾರೆ ಕಂಡೆನು.
५परमेश्वरा, मी तुझ्याबद्दल पूर्वी ऐकले होते, परंतु आता मी माझ्या डोळ्यांनी तुला बघतो आहे.
6 ೬ ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
६आता मलाच माझी लाज वाटते. मला पश्चाताप होत आहे. मी आता धुळीत आणि राखेतबसून पश्चाताप करील.
7 ೭ ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.
७परमेश्वराचे ईयोबाशी बोलणे झाल्यावर तो तेमानीच्या अलीफजला म्हणाला, मला तुझा आणि तुझ्या दोन मित्रांचा राग आला आहे. का? कारण तुम्ही माझ्याबद्दल योग्य बोलला नाही. परंतु ईयोब माझा सेवक आहे. तो माझ्याविषयी बरोबर बोलला.
8 ೮ ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.
८म्हणून अलीफज, आता सात बैल आणि सात एडके घे. ते घेऊन माझ्या सेवकाकडे, ईयोबाकडे जा. त्यांना मार आणि त्यांचा स्वत: साठी होमबली अर्पण कर. माझा सेवक ईयोब तुमच्यासाठी प्रार्थना करेल आणि मी त्याच्या प्रार्थनेला उत्तर देईन. मग मी तुम्हास योग्य असलेली शिक्षा देणार नाही. तुम्ही अतिशय मूर्ख होता म्हणून तुम्हास शिक्षा करायला हवी. तुम्ही माझ्याविषयी नीट बोलला नाही. परंतु माझा सेवक ईयोब मात्र माझ्याबद्दल अगदी योग्य बोलला.
9 ೯ ಆಗ ತೇಮಾನ್ಯನಾದ ಎಲೀಫಜನೂ, ಶೂಹ್ಯನಾದ ಬಿಲ್ದದನೂ, ನಾಮಾಥ್ಯನಾದ ಚೋಫರನೂ ಹೋಗಿ ಯೆಹೋವನು ತಮಗೆ ಆಜ್ಞಾಪಿಸಿದ ಪ್ರಕಾರ ಮಾಡಲು ಯೆಹೋವನು ಯೋಬನ ವಿಜ್ಞಾಪನೆಯನ್ನು ಲಾಲಿಸಿದನು.
९तेव्हा अलीफज तेमानी, बिल्दद शूही आणि सोफर नामाथीचा यांनी देवाचे ऐकले. नंतर परमेश्वराने ईयोबाच्या प्रार्थनेला उत्तर दिले.
10 ೧೦ ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.
१०ईयोबाने त्याच्या मित्रांसाठी प्रार्थना केली याप्रकारे परमेश्वराने ईयोबाला पुन्हा यशस्वी केले. देवाने त्यास पूर्वी त्याच्याकडे होते त्यापेक्षा दुप्पट दिले.
11 ೧೧ ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.
११ईयोबाचे सगळे भाऊ आणि बहिणी त्याच्या घरी आले. ईयोबाला जो कोणी ओळखत होता तो ही त्याच्याकडे आला. त्यांनी ईयोबासह भोजन घेतले. त्यांनी ईयोबाचे सांत्वन केले. परमेश्वराने ईयोबावर इतकी संकटे आणली त्याचे त्यांना वाईट वाटले. प्रत्येकाने ईयोबाला चांदीचा तुकडा आणि सोन्याची अंगठी दिली.
12 ೧೨ ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು.
१२परमेश्वराने ईयोबाच्या आयुष्याच्या उत्तरार्धावर त्याच्या पूर्वार्धापेक्षा अधिक कृपा केली. ईयोबाकडे आता चौदा हजार मेंढ्या, सहा हजार उंट, दोन हजार गायी आणि एक हजार गाढवी आहेत.
13 ೧೩ ಇಷ್ಟು ಮಾತ್ರವಲ್ಲದೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳನ್ನೂ ಪಡೆದನು.
१३ईयोबाला सात मुले आणि तीन मुली झाल्या.
14 ೧೪ ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.
१४ईयोबाने त्याच्या पहिल्या मुलीचे नाव यमीमा, दुसऱ्या मुलींचे नाव कसीया ठेवले. तिसऱ्या मुलीचे नाव केरेन हप्पूक ठेवले.
15 ೧೫ ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.
१५त्याच्या मुली त्या देशातील सर्वात सुंदर मुली होत्या, ईयोबाने त्याच्या मुलींना त्याच्या मालमत्तेतला वाटा दिला. त्यांच्या भावांप्रमाणे ईयोबाच्या मालमत्तेतला वाटा त्यांना मिळाला.
16 ೧೬ ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು.
१६अशा तऱ्हेने ईयोब एकशे चाळीस वर्षे जगला. तो त्याची मुले, नातवंडे, पतवंडे पाहीपर्यंत जगला.
17 ೧೭ ತರುವಾಯ ಯೋಬನು ಮುಪ್ಪಿನ ಮುದುಕನಾಗಿ ಮರಣ ಹೊಂದಿದನು.
१७नंतर ईयोब मरण पावला. ईयोब चांगले आयुष्य जगला. तो अगदी वयोवृध्द होऊन मेला.”