< ಯೋಬನು 6 >

1 ಆ ಮೇಲೆ ಯೋಬನು ಮತ್ತೆ ಇಂತೆಂದನು,
וַיַּ֥עַן אִיֹּ֗וב וַיֹּאמַֽר׃
2 “ಆಹಾ, ತ್ರಾಸಿನಲ್ಲಿ ನನ್ನ ವಿಪತ್ತನ್ನು ಇಟ್ಟು; ಅದರಿಂದ ನನ್ನ ಕರಕರೆಯ ಭಾರವನ್ನು ತೂಕ ಮಾಡುವುದಾದರೆ ಎಷ್ಟೋ ಒಳ್ಳೆಯದು.
ל֗וּ שָׁקֹ֣ול יִשָּׁקֵ֣ל כַּעְשִׂ֑י וְהַיָּתִי (וְ֝הַוָּתִ֗י) בְּֽמֹאזְנַ֥יִם יִשְׂאוּ־יָֽחַד׃
3 ಆಗ ನನ್ನ ವಿಪತ್ತು ಸಮುದ್ರದ ಮರಳಿಗಿಂತಲೂ ಹೆಚ್ಚು ಭಾರವುಳ್ಳದ್ದೆಂದು ಗೊತ್ತಾಗುವುದು ಎಂದು ದುಡುಕಿನಿಂದ ಮಾತನಾಡಿದ್ದೇನೆ.
כִּֽי־עַתָּ֗ה מֵחֹ֣ול יַמִּ֣ים יִכְבָּ֑ד עַל־כֵּ֝֗ן דְּבָרַ֥י לָֽעוּ׃
4 ಸರ್ವಶಕ್ತನಾದ ದೇವರ ಬಾಣಗಳು ನನ್ನಲ್ಲಿ ನಾಟಿರುತ್ತವೆ, ನನ್ನ ಆತ್ಮವು ಅವುಗಳ ವಿಷವನ್ನು ಹೀರಿಕೊಳ್ಳುತ್ತದೆ; ದೇವರು ಕಳುಹಿಸಿದ ಅಪಾಯಗಳು ನನಗೆ ವಿರುದ್ಧವಾಗಿ ವ್ಯೂಹಕಟ್ಟಿವೆ.
כִּ֤י חִצֵּ֪י שַׁדַּ֡י עִמָּדִ֗י אֲשֶׁ֣ר חֲ֭מָתָם שֹׁתָ֣ה רוּחִ֑י בִּעוּתֵ֖י אֱלֹ֣והַּ יַֽעַרְכֽוּנִי׃
5 ಕಾಡುಕತ್ತೆಗೆ ಹುಲ್ಲಿರಲು ಅರಚೀತೇ? ಎತ್ತಿಗೆ ಮೇವಿರಲು ಕೂಗೀತೇ?
הֲיִֽנְהַק־פֶּ֥רֶא עֲלֵי־דֶ֑שֶׁא אִ֥ם יִגְעֶה־שֹּׁ֝֗ור עַל־בְּלִילֹֽו׃
6 ಸಪ್ಪೆಯನ್ನು ಉಪ್ಪಿಲ್ಲದೆ ತಿನ್ನಬಹುದೇ? ಮೊಟ್ಟೆಯಲ್ಲಿರುವ ಲೋಳೆಯು ರುಚಿಯೇ?
הֲיֵאָכֵ֣ל תָּ֭פֵל מִבְּלִי־מֶ֑לַח אִם־יֶשׁ־טַ֝֗עַם בְּרִ֣יר חַלָּמֽוּת׃
7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.
מֵאֲנָ֣ה לִנְגֹּ֣ועַ נַפְשִׁ֑י הֵ֝֗מָּה כִּדְוֵ֥י לַחְמִֽי׃
8 ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ?
מִֽי־יִ֭תֵּן תָּבֹ֣וא שֶֽׁאֱלָתִ֑י וְ֝תִקְוָתִ֗י יִתֵּ֥ן אֱלֹֽוהַּ׃
9 ನಾನು ನಾಶವಾಗುವುದು ದೇವರಿಗೆ ಮೆಚ್ಚಿಕೆಯಾಗುವುದಾದರೆ, ತನ್ನ ಕೈ ಚಾಚಿ ನನ್ನನ್ನು ಸಂಹರಿಸಿದರೆ ಒಳ್ಳೆಯದು.
וְיֹאֵ֣ל אֱ֭לֹוהַּ וִֽידַכְּאֵ֑נִי יַתֵּ֥ר יָ֝דֹ֗ו וִֽיבַצְּעֵֽנִי׃
10 ೧೦ ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.
וּ֥תְהִי עֹ֨וד ׀ נֶ֘חָ֤מָתִ֗י וַאֲסַלְּדָ֣ה בְ֭חִילָה לֹ֣א יַחְמֹ֑ול כִּי־לֹ֥א כִ֝חַ֗דְתִּי אִמְרֵ֥י קָדֹֽושׁ׃
11 ೧೧ ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ? ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?
מַה־כֹּחִ֥י כִֽי־אֲיַחֵ֑ל וּמַה־קִּ֝צִּ֗י כִּֽי־אַאֲרִ֥יךְ נַפְשִֽׁי׃
12 ೧೨ ನನ್ನ ಬಲವು ಕಲ್ಲಿನ ಬಲವೋ? ಅಥವಾ ನನ್ನ ಶರೀರವು ತಾಮ್ರದ್ದೋ?
אִם־כֹּ֣חַ אֲבָנִ֣ים כֹּחִ֑י אִֽם־בְּשָׂרִ֥י נָחֽוּשׁ׃
13 ೧೩ ನನ್ನಲ್ಲಿ ಏನೂ ಸಹಾಯವಿಲ್ಲವಲ್ಲಾ, ನನ್ನ ಸಾಮರ್ಥ್ಯವು ತೊಲಗಿಹೋಗಿದೆ.
הַאִ֬ם אֵ֣ין עֶזְרָתִ֣י בִ֑י וְ֝תֻשִׁיָּ֗ה נִדְּחָ֥ה מִמֶּֽנִּי׃
14 ೧೪ ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.
לַמָּ֣ס מֵרֵעֵ֣הוּ חָ֑סֶד וְיִרְאַ֖ת שַׁדַּ֣י יַעֲזֹֽוב׃
15 ೧೫ ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.
אַ֭חַי בָּגְד֣וּ כְמֹו־נָ֑חַל כַּאֲפִ֖יק נְחָלִ֣ים יַעֲבֹֽרוּ׃
16 ೧೬ ಹಿಮವು ಅಡಗಿರುವ ಪ್ರವಾಹಗಳು, ಮಂಜುಗಡ್ಡೆಯಿಂದ ಕೂಡಿ ಕಪ್ಪಾಗಿರುವವು.
הַקֹּדְרִ֥ים מִנִּי־קָ֑רַח עָ֝לֵ֗ימֹו יִתְעַלֶּם־שָֽׁלֶג׃
17 ೧೭ ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗ ಅವು ಬತ್ತಿ ಕಾಣಿಸದೆ ಹೋಗುವವು.
בְּ֭עֵת יְזֹרְב֣וּ נִצְמָ֑תוּ בְּ֝חֻמֹּ֗ו נִדְעֲכ֥וּ מִמְּקֹומָֽם׃
18 ೧೮ ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ, ಮರುಭೂಮಿಗೆ ತಿರುಗಿ ನಾಶವಾಗುತ್ತವೆ.
יִ֭לָּ֣פְתוּ אָרְחֹ֣ות דַּרְכָּ֑ם יַעֲל֖וּ בַתֹּ֣הוּ וְיֹאבֵֽדוּ׃
19 ೧೯ ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು.
הִ֭בִּיטוּ אָרְחֹ֣ות תֵּמָ֑א הֲלִיכֹ֥ת שְׁ֝בָ֗א קִוּוּ־לָֽמֹו׃
20 ೨೦ ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.
בֹּ֥שׁוּ כִּֽי־בָטָ֑ח בָּ֥אוּ עָ֝דֶ֗יהָ וַיֶּחְפָּֽרוּ׃
21 ೨೧ ಈಗ ನೀವು ಹಾಗೆಯೇ ಇದ್ದೀರಿ. (ನನ್ನ) ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ.
כִּֽי־עַ֭תָּה הֱיִ֣יתֶם לֹא (לֹ֑ו) תִּֽרְא֥וּ חֲ֝תַ֗ת וַתִּירָֽאוּ׃
22 ೨೨ ನನ್ನ ಬಿನ್ನಹವೇನು? ‘ನನಗೆ ದಾನಮಾಡಿರಿ’ ಎಂದು ಬಿನ್ನವಿಸಿದೆನೋ? ನಿಮ್ಮ ಆಸ್ತಿಯಿಂದ, ‘ನನಗಾಗಿ ಲಂಚಕೊಡಿರಿ’ ಎಂದೆನೋ?
הֲ‍ֽכִי־אָ֭מַרְתִּי הָ֣בוּ לִ֑י וּ֝מִכֹּחֲכֶ֗ם שִׁחֲד֥וּ בַעֲדִֽי׃
23 ೨೩ ವಿರೋಧಿಯ ಕೈಯಿಂದ, ‘ನನ್ನನ್ನು ರಕ್ಷಿಸಿರಿ’ ಎಂದು ಕೇಳಿಕೊಂಡೆನೋ? ಬಲಾತ್ಕರಿಸುವವರಿಂದ, ‘ನನ್ನನ್ನು ವಿಮೋಚಿಸಿರಿ’ ಎಂದು ಬೇಡಿಕೊಂಡೆನೋ?
וּמַלְּט֥וּנִי מִיַּד־צָ֑ר וּמִיַּ֖ד עָרִיצִ֣ים תִּפְדּֽוּנִי׃
24 ೨೪ ನನಗೆ ಉಪದೇಶಮಾಡಿ ನನ್ನ ತಪ್ಪನ್ನು ನನಗೆ ತಿಳಿಯಪಡಿಸಿರಿ, ನಾನು ಮೌನದಿಂದಿರುವೆನು.
הֹ֭ורוּנִי וַאֲנִ֣י אַחֲרִ֑ישׁ וּמַה־שָּׁ֝גִ֗יתִי הָבִ֥ינוּ לִֽי׃
25 ೨೫ ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ನಿರಾರ್ಥಕ?
מַה־נִּמְרְצ֥וּ אִמְרֵי־יֹ֑שֶׁר וּמַה־יֹּוכִ֖יחַ הֹוכֵ֣חַ מִכֶּֽם׃
26 ೨೬ ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ?
הַלְהֹוכַ֣ח מִלִּ֣ים תַּחְשֹׁ֑בוּ וּ֝לְר֗וּחַ אִמְרֵ֥י נֹאָֽשׁ׃
27 ೨೭ ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು; ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.
אַף־עַל־יָתֹ֥ום תַּפִּ֑ילוּ וְ֝תִכְר֗וּ עַל־רֵֽיעֲכֶֽם׃
28 ೨೮ ಆದುದರಿಂದ ಈಗ ದಯಮಾಡಿ ನನ್ನನ್ನು ನೋಡಿರಿ, ನಿಮ್ಮ ಮುಖದೆದುರಿಗೆ ನಾನು ಸುಳ್ಳಾಡುವೆನೋ?
וְ֭עַתָּה הֹואִ֣ילוּ פְנוּ־בִ֑י וְעַל־פְּ֝נֵיכֶ֗ם אִם־אֲכַזֵּֽב׃
29 ೨೯ ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.
שֻֽׁבוּ־נָ֭א אַל־תְּהִ֣י עַוְלָ֑ה וְשֻׁבִי (וְשׁ֥וּבוּ) עֹ֝וד צִדְקִי־בָֽהּ׃
30 ೩೦ ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ?
הֲיֵשׁ־בִּלְשֹׁונִ֥י עַוְלָ֑ה אִם־חִ֝כִּ֗י לֹא־יָבִ֥ין הַוֹּֽות׃

< ಯೋಬನು 6 >