< ಯೋಬನು 7 >
1 ೧ ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ.
“Je, mwanadamu hana kazi ngumu duniani? Siku zake si kama zile za mtu aliyeajiriwa?
2 ೨ ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ.
Kama mtumwa anavyovionea shauku vivuli vya jioni, au mtu aliyeajiriwa anavyoungojea mshahara wake,
3 ೩ ಬೇಸರಿಕೆಯ ಮಾಸಗಳೂ, ಆಯಾಸದ ರಾತ್ರಿಗಳೂ ನನ್ನ ಪಾಲಿಗೆ ನೇಮಕವಾಗಿವೆ.
ndivyo nilivyogawiwa miezi ya ubatili, nami nimeandikiwa huzuni usiku hata usiku.
4 ೪ ಮಲಗುವ ವೇಳೆಯಲ್ಲಿ ಯಾವಾಗ ಏಳುವೆನೋ ಅಂದುಕೊಳ್ಳುವೆನು; ರಾತ್ರಿಯು ಬೆಳೆಯುತ್ತಾ ಹೋಗುತ್ತದೆ. ಉದಯದವರೆಗೂ ಹೊರಹೊರಳಿ ಸಾಕಾಗುತ್ತದೆ.
Wakati nilalapo ninawaza, ‘Itachukua muda gani kabla sijaamka?’ Usiku huwa mrefu, nami najigeuzageuza hadi mapambazuko.
5 ೫ ಹುಳಗಳೂ, ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. (ಬಿರಿದ) ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.
Mwili wangu umevikwa mabuu na uchafu, ngozi yangu imetumbuka na kutunga usaha.
6 ೬ ನನ್ನ ದಿನಗಳು ಮಗ್ಗದ ಲಾಳಿಗಿಂತ ವೇಗವಾಗಿ, ನಿರೀಕ್ಷೆಯಿಲ್ಲದೆ ಕಳೆದು ಹೋಗುತ್ತವೆ.
“Siku zangu zinapita upesi kuliko mtande wa kufuma, nazo zinafikia mwisho wake bila matumaini.
7 ೭ ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.
Kumbuka, Ee Mungu, maisha yangu ni kama pumzi; macho yangu kamwe hayataona tena raha.
8 ೮ ನನ್ನನ್ನು ನೋಡುವವನ ಕಣ್ಣಿಗೆ ನಾನು ಕಾಣಿಸುವುದಿಲ್ಲ, ನಿನ್ನ ಕಣ್ಣುಗಳು ನನ್ನ ಕಡೆ ಇದ್ದರೂ ನಾನು ಇರುವುದಿಲ್ಲ.
Lile jicho linaloniona sasa halitaniona tena; utanitafuta, wala sitakuwepo.
9 ೯ ಮೋಡ ಹರಿದು ಮಾಯವಾಗುವಂತೆ, ಪಾತಾಳಕ್ಕೆ ಇಳಿದು ಹೋದವನು ತಿರುಗಿ ಬರುವುದಿಲ್ಲ. (Sheol )
Kama vile wingu liondokavyo na kutoweka, vivyo hivyo yeye ashukaye kaburini harudi tena. (Sheol )
10 ೧೦ ಅವನು ತನ್ನ ಮನೆಗೆ ಪುನಃ ಸೇರುವುದಿಲ್ಲ, ಇನ್ನು ಮೇಲೆ ಅವನ ನಿವಾಸಕ್ಕೆ ಅವನ ಪರಿಚಯ ಇರುವುದಿಲ್ಲ.
Kamwe harudi tena nyumbani mwake; wala mahali pake hapatamjua tena.
11 ೧೧ ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.
“Kwa hiyo sitanyamaza; nitanena kutokana na maumivu makuu ya roho yangu, nitalalama kwa uchungu wa nafsi yangu.
12 ೧೨ ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?
Je, mimi ni bahari, au mnyama mkubwa mno akaaye vilindini, hata uniweke chini ya ulinzi?
13 ೧೩ ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು, ನನ್ನ ಮಂಚವು ನನ್ನ ಬಾಧೆಯನ್ನು ಹೊರುವುದು ಅಂದುಕೊಳ್ಳುವಾಗ
Ninapofikiri kwamba kitanda changu kitanifariji, nacho kiti changu cha fahari kitapunguza malalamiko yangu,
14 ೧೪ ನೀನು ಸ್ವಪ್ನಗಳಿಂದ ನನ್ನನ್ನು ಬೆದರಿಸಿ, ದರ್ಶನಗಳ ಮೂಲಕ ಭಯಪಡಿಸುವಿ.
ndipo wanitisha kwa ndoto na kunitia hofu kwa maono,
15 ೧೫ ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.
hivyo ninachagua kujinyonga na kufa, kuliko huu mwili wangu.
16 ೧೬ ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
Ninayachukia maisha yangu; nisingetamani kuendelea kuishi. Niache; siku zangu ni ubatili.
17 ೧೭ ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?
“Mwanadamu ni kitu gani hata umjali kiasi hiki, kwamba unamtia sana maanani,
18 ೧೮ ದಿನಂಪ್ರತಿ ಅವನ ಮೇಲೆ ಲಕ್ಷ್ಯವಿಟ್ಟು, ಕ್ಷಣಕ್ಷಣಕ್ಕೂ ಅವನನ್ನು ಪರಿಶೋಧಿಸುವುದೇಕೆ?
kwamba unamwangalia kila asubuhi na kumjaribu kila wakati?
19 ೧೯ ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?
Je, hutaacha kamwe kunitazama, au kuniacha japo kwa kitambo kidogo tu?
20 ೨೦ ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.
Ikiwa nimetenda dhambi, nimekufanyia nini, Ewe mlinzi wa wanadamu? Kwa nini umeniweka niwe shabaha yako? Je, nimekuwa mzigo kwako?
21 ೨೧ ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.
Kwa nini husamehi makosa yangu na kuachilia dhambi zangu? Kwa kuwa hivi karibuni nitalala mavumbini; nawe utanitafuta, wala sitakuwepo.”