< ಯೋಬನು 8 >

1 “ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,
וַ֭יַּעַן בִּלְדַּ֥ד הַשּׁוּחִ֗י וַיֹאמַֽר׃
2 “ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ?
עַד־אָ֥ן תְּמַלֶּל־אֵ֑לֶּה וְר֥וּחַ כַּ֝בִּיר אִמְרֵי־פִֽיךָ׃
3 ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?
הַ֭אֵל יְעַוֵּ֣ת מִשְׁפָּ֑ט וְאִם־שַׁ֝דַּ֗י יְעַוֵּֽת־צֶֽדֶק׃
4 ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?
אִם־בָּנֶ֥יךָ חָֽטְאוּ־לֹ֑ו וַֽ֝יְשַׁלְּחֵ֗ם בְּיַד־פִּשְׁעָֽם׃
5 ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,
אִם־אַ֭תָּה תְּשַׁחֵ֣ר אֶל־אֵ֑ל וְאֶל־שַׁ֝דַּ֗י תִּתְחַנָּֽן׃
6 ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.
אִם־זַ֥ךְ וְיָשָׁ֗ר אָ֥תָּה כִּי־עַ֭תָּה יָעִ֣יר עָלֶ֑יךָ וְ֝שִׁלַּ֗ם נְוַ֣ת צִדְקֶֽךָ׃
7 ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.
וְהָיָ֣ה רֵאשִׁיתְךָ֣ מִצְעָ֑ר וְ֝אַחֲרִיתְךָ֗ יִשְׂגֶּ֥ה מְאֹֽד׃
8 ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.
כִּֽי־שְׁאַל־נָ֭א לְדֹ֣ר רִישֹׁ֑ון וְ֝כֹונֵ֗ן לְחֵ֣קֶר אֲבֹותָֽם׃
9 ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.
כִּֽי־תְמֹ֣ול אֲ֭נַחְנוּ וְלֹ֣א נֵדָ֑ע כִּ֤י צֵ֖ל יָמֵ֣ינוּ עֲלֵי־אָֽרֶץ׃
10 ೧೦ ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?
הֲלֹא־הֵ֣ם יֹ֭ורוּךָ יֹ֣אמְרוּ לָ֑ךְ וּ֝מִלִּבָּ֗ם יֹוצִ֥אוּ מִלִּֽים׃
11 ೧೧ ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?
הֲיִֽגְאֶה־גֹּ֭מֶא בְּלֹ֣א בִצָּ֑ה יִשְׂגֶּה־אָ֥חוּ בְלִי־מָֽיִם׃
12 ೧೨ ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.
עֹדֶ֣נּוּ בְ֭אִבֹּו לֹ֣א יִקָּטֵ֑ף וְלִפְנֵ֖י כָל־חָצִ֣יר יִיבָֽשׁ׃
13 ೧೩ ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.
כֵּ֗ן אָ֭רְחֹות כָּל־שֹׁ֣כְחֵי אֵ֑ל וְתִקְוַ֖ת חָנֵ֣ף תֹּאבֵֽד׃
14 ೧೪ ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು.
אֲשֶׁר־יָקֹ֥וט כִּסְלֹ֑ו וּבֵ֥ית עַ֝כָּבִ֗ישׁ מִבְטַחֹֽו׃
15 ೧೫ ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.
יִשָּׁעֵ֣ן עַל־בֵּ֭יתֹו וְלֹ֣א יַעֲמֹ֑ד יַחֲזִ֥יק בֹּ֝֗ו וְלֹ֣א יָקֽוּם׃
16 ೧೬ ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ
רָטֹ֣ב ה֖וּא לִפְנֵי־שָׁ֑מֶשׁ וְעַ֥ל גַּ֝נָּתֹ֗ו יֹֽנַקְתֹּ֥ו תֵצֵֽא׃
17 ೧೭ (ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.
עַל־גַּ֭ל שָֽׁרָשָׁ֣יו יְסֻבָּ֑כוּ בֵּ֖ית אֲבָנִ֣ים יֶחֱזֶֽה׃
18 ೧೮ ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.
אִם־יְבַלְּעֶ֥נּוּ מִמְּקֹומֹ֑ו וְכִ֥חֶשׁ בֹּ֝֗ו לֹ֣א רְאִיתִֽיךָ׃
19 ೧೯ ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!
הֶן־ה֭וּא מְשֹׂ֣ושׂ דַּרְכֹּ֑ו וּ֝מֵעָפָ֗ר אַחֵ֥ר יִצְמָֽחוּ׃
20 ೨೦ ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.
הֶן־אֵ֭ל לֹ֣א יִמְאַס־תָּ֑ם וְלֹֽא־יַ֝חֲזִ֗יק בְּיַד־מְרֵעִֽים׃
21 ೨೧ ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು.
עַד־יְמַלֵּ֣ה שְׂחֹ֣וק פִּ֑יךָ וּשְׂפָתֶ֥יךָ תְרוּעָֽה׃
22 ೨೨ ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”
שֹׂנְאֶ֥יךָ יִלְבְּשׁוּ־בֹ֑שֶׁת וְאֹ֖הֶל רְשָׁעִ֣ים אֵינֶֽנּוּ׃ פ

< ಯೋಬನು 8 >