< ಯೋಬನು 8 >
1 ೧ “ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,
Respondens autem Baldad Suhites, dixit:
2 ೨ “ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ?
[Usquequo loqueris talia, et spiritus multiplex sermones oris tui?
3 ೩ ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?
Numquid Deus supplantat judicium? aut Omnipotens subvertit quod justum est?
4 ೪ ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?
Etiam si filii tui peccaverunt ei, et dimisit eos in manu iniquitatis suæ:
5 ೫ ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,
tu tamen si diluculo consurrexeris ad Deum, et Omnipotentem fueris deprecatus;
6 ೬ ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.
si mundus et rectus incesseris: statim evigilabit ad te, et pacatum reddet habitaculum justitiæ tuæ,
7 ೭ ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.
in tantum ut si priora tua fuerint parva, et novissima tua multiplicentur nimis.
8 ೮ ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.
Interroga enim generationem pristinam, et diligenter investiga patrum memoriam
9 ೯ ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.
(hesterni quippe sumus, et ignoramus, quoniam sicut umbra dies nostri sunt super terram),
10 ೧೦ ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?
et ipsi docebunt te, loquentur tibi, et de corde suo proferent eloquia.
11 ೧೧ ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?
Numquid vivere potest scirpus absque humore? aut crescere carectum sine aqua?
12 ೧೨ ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.
Cum adhuc sit in flore, nec carpatur manu, ante omnes herbas arescit.
13 ೧೩ ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.
Sic viæ omnium qui obliviscuntur Deum, et spes hypocritæ peribit.
14 ೧೪ ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು.
Non ei placebit vecordia sua, et sicut tela aranearum fiducia ejus.
15 ೧೫ ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.
Innitetur super domum suam, et non stabit; fulciet eam, et non consurget.
16 ೧೬ ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ
Humectus videtur antequam veniat sol, et in ortu suo germen ejus egredietur.
17 ೧೭ (ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.
Super acervum petrarum radices ejus densabuntur, et inter lapides commorabitur.
18 ೧೮ ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.
Si absorbuerit eum de loco suo, negabit eum, et dicet: Non novi te.
19 ೧೯ ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!
Hæc est enim lætitia viæ ejus, ut rursum de terra alii germinentur.
20 ೨೦ ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.
Deus non projiciet simplicem, nec porriget manum malignis,
21 ೨೧ ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು.
donec impleatur risu os tuum, et labia tua jubilo.
22 ೨೨ ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”
Qui oderunt te induentur confusione, et tabernaculum impiorum non subsistet.]