< ಯೋಬನು 1 >
1 ೧ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
ऊज़ की सर ज़मीन में अय्यूब नाम का एक शख़्स था। वह शख़्स कामिल और रास्तबाज़ था और ख़ुदा से डरता और गुनाह से दूर रहता था।
2 ೨ ಅವನಿಗೆ ಏಳು ಮಂದಿ ಗಂಡುಮಕ್ಕಳೂ, ಮೂರು ಮಂದಿ ಹೆಣ್ಣುಮಕ್ಕಳೂ ಇದ್ದರು.
उसके यहाँ सात बेटे और तीन बेटियाँ पैदा हुईं।
3 ೩ ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.
उसके पास सात हज़ार भेंड़े और तीन हज़ार ऊँट और पाँच सौ जोड़ी बैल और पाँच सौ गधियाँ और बहुत से नौकर चाकर थे, ऐसा कि अहल — ए — मशरिक़ में वह सबसे बड़ा आदमी था।
4 ೪ ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು.
उसके बेटे एक दूसरे के घर जाया करते थे और हर एक अपने दिन पर मेहमान नवाज़ी करते थे, और अपने साथ खाने — पीने को अपनी तीनों बहनों को बुलवा भेजते थे।
5 ೫ ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.
और जब उनकी मेहमान नवाज़ी के दिन पूरे हो जाते, तो अय्यूब उन्हें बुलवाकर पाक करता और सुबह को सवेरे उठकर उन सभों की ता'दाद के मुताबिक़ सोख़्तनी क़ुर्बानियाँ अदा करता था, क्यूँकि अय्यूब कहता था, कि “शायद मेरे बेटों ने कुछ ख़ता की हो और अपने दिल में ख़ुदा की बुराई की हो।” अय्यूब हमेशा ऐसा ही किया करता था।
6 ೬ ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.
और एक दिन ख़ुदा के बेटे आए कि ख़ुदावन्द के सामने हाज़िर हों, और उनके बीच शैतान भी आया।
7 ೭ ಯೆಹೋವನು ಸೈತಾನನನ್ನು, “ಎಲ್ಲಿಂದ ಬಂದೆ?” ಎಂದು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದು ಹೇಳಿದನು.
और ख़ुदावन्द ने शैतान से पूछा, कि “तू कहाँ से आता है?” शैतान ने ख़ुदावन्द को जवाब दिया, कि “ज़मीन पर इधर — उधर घूमता फिरता और उसमें सैर करता हुआ आया हूँ।”
8 ೮ ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.
ख़ुदावन्द ने शैतान से कहा, “क्या तू ने मेरे बन्दे अय्यूब के हाल पर भी कुछ ग़ौर किया? क्यूँकि ज़मीन पर उसकी तरह कामिल और रास्तबाज़ आदमी, जो ख़ुदा से डरता, और गुनाह से दूर रहता हो, कोई नहीं।”
9 ೯ ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?
शैतान ने ख़ुदावन्द को जवाब दिया, “क्या अय्यूब यूँ ही ख़ुदा से डरता' है?
10 ೧೦ ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.
क्या तू ने उसके और उसके घर के चारों तरफ़, और जो कुछ उसका है उस सबके चारों तरफ़ बाड़ नहीं बनाई है? तू ने उसके हाथ के काम में बरकत बख़्शी है, और उसके गल्ले मुल्क में बढ़ गए हैं।
11 ೧೧ ಆದರೆ ನಿನ್ನ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸದೇ ಬಿಡುವನೇ?” ಎಂದನು.
लेकिन तू ज़रा अपना हाथ बढ़ा कर जो कुछ उसका है उसे छू ही दे; तो क्या वह तेरे मुँह पर तेरी बुराई न करेगा?”
12 ೧೨ ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.
ख़ुदावन्द ने शैतान से कहा, “देख, उसका सब कुछ तेरे इख़्तियार में है, सिर्फ़ उसको हाथ न लगाना।” तब शैतान ख़ुदावन्द के सामने से चला गया।
13 ೧೩ ಇದಾದ ಬಳಿಕ ಒಂದು ದಿನ ಯೋಬನ ಗಂಡು ಹೆಣ್ಣು ಮಕ್ಕಳು ಹಿರಿಯವನ ಮನೆಯಲ್ಲಿ ಔತಣದಲ್ಲಿ ಊಟಮಾಡಿ ಕುಡಿಯುತ್ತಿರುವಾಗ,
और एक दिन जब उसके बेटे और बेटियाँ अपने बड़े भाई के घर में खाना खा रहे और मयनोशी कर रहे थे।
14 ೧೪ ಒಬ್ಬ ದೂತನು ಯೋಬನ ಬಳಿಗೆ ಬಂದು, “ನಿನ್ನ ಎತ್ತುಗಳು ಉಳುತ್ತಾ ಇರುವಾಗ ಅವುಗಳ ಹತ್ತಿರ ಕತ್ತೆಗಳು ಮೇಯುತ್ತಾ ಇದ್ದವು.
तो एक क़ासिद ने अय्यूब के पास आकर कहा, कि “बैल हल में जुते थे और गधे उनके पास चर रहे थे,
15 ೧೫ ಶೆಬದವರು ಅವುಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ಈ ಸುದ್ದಿಯನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದು ಹೇಳಿದನು.
कि सबा के लोग उन पर टूट पड़े और उन्हें ले गए, और नौकरों को हलाक किया और सिर्फ़ मैं ही अकेला बच निकला कि तुझे ख़बर दूँ।”
16 ೧೬ ಅವನು ಮಾತನಾಡುತ್ತಿರುವಾಗಲೇ ಮತ್ತೊಬ್ಬನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ, ಆಳುಗಳನ್ನೂ ದಹಿಸಿ ನುಂಗಿಬಿಟ್ಟಿದೆ. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
वह अभी यह कह ही रहा था कि एक और भी आकर कहने लगा, कि “ख़ुदा की आग आसमान से नाज़िल हुई और भेड़ों और नौकरों को जलाकर भस्म कर दिया, और सिर्फ़ मैं ही अकेला बच निकला कि तुझे ख़बर दूँ।”
17 ೧೭ ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು ಒಂಟೆಗಳ ಮೇಲೆ ಬಿದ್ದು ಹೊಡೆದುಕೊಂಡು ಹೋದರು. ಇದಲ್ಲದೆ ಆಳುಗಳನ್ನು ಕತ್ತಿಯಿಂದ ಹತ್ಯೆ ಮಾಡಿದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
वह अभी यह कह ही रहा था कि एक और भी आकर कहने लगा, 'कसदी तीन ग़ोल होकर ऊँटों पर आ गिरे और उन्हें ले गए, और नौकरों को हलाक किया और सिर्फ़ मैं ही अकेला बच निकला कि तुझे ख़बर दूँ।
18 ೧೮ ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ,
वह अभी यह कह ही रहा था कि एक और भी आकर कहने लगा, कि “तेरे बेटे बेटियाँ अपने बड़े भाई के घर में खाना खा रहे और मयनोशी कर रहे थे,
19 ೧೯ ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.
और देख, वीरान से एक बड़ी आँधी चली और उस घर के चारों कोनों पर ऐसे ज़ोर से टकराई कि वह उन जवानों पर गिर पड़ा, और वह मर गए और सिर्फ़ मैं ही अकेला बच निकला कि तुझे ख़बर दूँ।”
20 ೨೦ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,
तब अय्यूब ने उठकर अपना लिबास चाक किया और सिर मुंडाया और ज़मीन पर गिरकर सिज्दा किया
21 ೨೧ “ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿಹೋಗುವೆನು; ನನಗಿರುವುದನ್ನೆಲ್ಲ ಯೆಹೋವನೇ ಕೊಟ್ಟನು, ಅವುಗಳನ್ನು ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ” ಎಂದು ಹೇಳಿದನು.
और कहा, “नंगा मैं अपनी माँ के पेट से निकला, और नंगा ही वापस जाऊँगा। ख़ुदावन्द ने दिया और ख़ुदावन्द ने ले लिया। ख़ुदावन्द का नाम मुबारक हो।”
22 ೨೨ ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲೂ ಇಲ್ಲ.
इन सब बातों में अय्यूब ने न तो गुनाह किया और न ख़ुदा पर ग़लत काम का 'ऐब लगाया।