< ಯೋವೇಲನು 2 >
1 ೧ ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.
सिय्यून में नरसिंगा फूँको; मेरे पाक पहाड़ी पर साँस बाँध कर ज़ोर से फूँको! मुल्क के तमाम रहने वाले थरथराएँ, क्यूँकि ख़ुदावन्द का दिन चला आता है; बल्कि आ पहुँचा है।
2 ೨ ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.
अंधेरे और तारीकी का दिन, काले बादल और जु़ल्मात का दिन है! एक बड़ी और ज़बरदस्त उम्मत जिसकी तरह न कभी हुई और न सालों तक उसके बाद होगी; पहाड़ों पर सुब्ह — ए — सादिक़ की तरह फैल जाएगी।
3 ೩ ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.
जैसे उनके आगे आगे आग भसम करती जाती है, और उनके पीछे पीछे शो'ला जलाता जाता है। उनके आगे ज़मीन बाग़ — ए — 'अदन की तरह है और उनके पीछे वीरान बियाबान है; हाँ, उनसे कुछ नहीं बचता।
4 ೪ ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ.
उनके पैरों का निशान घोड़ों के जैसे हैं, और सवारों की तरह दौड़ते हैं।
5 ೫ ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
पहाड़ों की चोटियों पर रथों के खड़खड़ाने और भूसे को ख़ाक करने वाले जलाने वाली आग के शोर की तरह बलन्द होते हैं। वह जंग के लिए तरतीब में ज़बरदस्त क़ौम की तरह हैं।
6 ೬ ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.
उनके आमने सामने लोग थरथराते हैं; सब चेहरों का रंग उड़ जाता है।
7 ೭ ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;
वह पहलवानों की तरह दौड़ते, और जंगी मर्दों की तरह दीवारों पर चढ़ जाते हैं। सब अपनी अपनी राह पर चलते हैं, और लाइन नहीं तोड़ते।
8 ೮ ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.
वह एक दूसरे को नहीं ढकेलते, हर एक अपनी राह पर चला जाता है; वो जंगी हथियारों से गुज़र जाते हैं, और बेतरतीब नहीं होते।
9 ೯ ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.
वो शहर में कूद पड़ते, और दीवारों और घरों पर चढ़कर चोरों की तरह खिड़कियों से घुस जाते हैं।
10 ೧೦ ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.
उनके सामने ज़मीन — ओ — आसमान काँपते और थरथराते हैं। सूरज और चाँद तारीक, और सितारे बेनूर हो जाते हैं।
11 ೧೧ ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?
और ख़ुदावन्द अपने लश्कर के सामने ललकारता है, क्यूँकि उसका लश्कर बेशुमार है और उसके हुक्म को अंजाम देने वाला ज़बरदस्त है; क्यूँकि ख़ुदावन्द का रोज़ — ए — 'अज़ीम बहुत ख़ौफ़नाक है। कौन उसकी बर्दाश्त कर सकता है?
12 ೧೨ ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
लेकिन ख़ुदावन्द फ़रमाता है, अब भी पूरे दिल से और रोज़ा रख कर और गिर्या — ओ — ज़ारी — ओ — मातम करते हुए मेरी तरफ़ फ़िरो।
13 ೧೩ ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
और अपने कपड़ों को नहीं, बल्कि दिलों को चाक करके, ख़ुदावन्द अपने ख़ुदा की तरफ़ मुतवज्जिह हो; क्यूँकि वह रहीम — ओ — मेहरबान, क़हर करने में धीमा, और शफ़क़त में ग़नी है; और 'ऐज़ाब नाज़िल करने से बाज़ रहता है।
14 ೧೪ ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.
कौन जानता है कि वह बाज़ रहे, और बरकत बाक़ी छोड़े जो ख़ुदावन्द तुम्हारे ख़ुदा के लिए नज़्र की कु़र्बानी और तपावन हो।
15 ೧೫ ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.
सिय्यून में नरसिंगा फूँको, और रोज़े के लिए एक दिन पाक करो; पाक महफ़िल इकठ्ठा करो।
16 ೧೬ ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.
तुम लोगों को जमा' करो। जमा'अत को पाक करो, बुज़ुर्गों को इकट्ठा करो; बच्चों और शीरख़्वारों को भी बुलाओ। दुल्हा अपनी कोठरी से और दुल्हन अपने तन्हाई के घर से निकल आए।
17 ೧೭ ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”
काहिन या'नी ख़ुदावन्द के ख़ादिम, डयोढ़ी और कु़र्बानगाह के बीच गिर्या — ओ — ज़ारी करें कहें, ऐ ख़ुदावन्द, अपने लोगों पर रहम कर, और अपनी मीरास की तौहीन न होने दे। ऐसा न हो कि दूसरी क़ौमें उन पर हुकूमत करें। वह उम्मतों के बीच क्यूँ कहें, उनका ख़ुदा कहाँ है?
18 ೧೮ ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,
तब ख़ुदावन्द को अपने मुल्क के लिए गै़रत आई और उसने अपने लोगो पर रहम किया।
19 ೧೯ ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.
फिर ख़ुदावन्द ने अपने लोगों से फ़रमाया, मैं तुम को अनाज और नई मय और तेल 'अता फ़रमाऊँगा और तुम उनसे सेर होगे और मैं फिर तुम को क़ौमों में रुस्वा न करूँगा।
20 ೨೦ ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.
और शिमाली लश्कर को तुम से दूर करूँगा और उसे खु़श्क वीराने में हाँक दूँगा; उसके अगले मशरिक़ी समुंदर में होंगे, और पिछले मग़रिबी समुंदर में होंगे; उससे बदबू उठेगी और 'उफ़ूनत फैलेगी, क्यूँकि उसने बड़ी गुस्ताख़ी की है।
21 ೨೧ ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.
'ऐ ज़मीन, न घबरा; खु़शी और शादमानी कर, क्यूँकि ख़ुदावन्द ने बड़े बड़े काम किए हैं!
22 ೨೨ ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
ऐ दश्ती जानवरो, न घबरा; क्यूँकि वीरान की चारागाह सब्ज़ होती है, और दरख़्त अपना फल लाते हैं। अंजीर और ताक अपनी पूरी पैदावार देते हैं।
23 ೨೩ ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.
तब ऐ बनी सिय्यून, खुश हो, और ख़ुदावन्द अपने ख़ुदा में शादमानी करो; क्यूँकि वह तुम को पहली बरसात कसरत से बख़्शेगा; वही तुम्हारे लिए बारिश, या'नी पहली और पिछली बरसात वक़्त पर भेजेगा।
24 ೨೪ ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.
यहाँ तक कि खलीहान गेहूँ से भर जाएँगे, और हौज़ नई मय और तेल से लबरेज़ होंगे।
25 ೨೫ ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
और उन बरसों का हासिल जो मेरी तुम्हारे ख़िलाफ़ भेजीं हुई फ़ौज़ — ए — मलख़ निगल गई, और खाकर चट कर गई; तुम को वापस दूँगा।
26 ೨೬ ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
और तुम खू़ब खाओगे और सेर होगे, और ख़ुदावन्द अपने ख़ुदा के नाम की, जिसने तुम से 'अजीब सुलूक किया, इबादत करोगे और मेरे लोग हरगिज़ शर्मिन्दा न होंगे।
27 ೨೭ ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
तब तुम जानोगे कि मैं इस्राईल के बीच हूँ, और मैं ख़ुदावन्द तुम्हारा ख़ुदा हूँ, और कोई दूसरा नहीं; और मेरे लोग कभी शर्मिन्दा न होंगे।
28 ೨೮ ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
'और इसके बाद मैं हर फ़र्द — ए — बशर पर अपना रूह नाज़िल करूँगा, और तुम्हारे बेटे बेटियाँ नबुव्वत करेंगे; तुम्हारे बूढे ख़्वाब और जवान रोया देखेंगे।
29 ೨೯ ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.
बल्कि मैं उन दिनों में गु़लामों और लौंडियों पर अपना रूह नाज़िल करूँगा।
30 ೩೦ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
और मैं ज़मीन — ओ — आसमान में 'अजायब ज़ाहिर करूँगा, या'नी खू़न और आग और धुंवें के खम्बे।
31 ೩೧ ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
इस से पहले कि ख़ुदावन्द का ख़ौफ़नाक रोज़ — ए — अज़ीम आए, सूरज तारीक और चाँद ख़ून हो जाएगा।
32 ೩೨ ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
और जो कोई ख़ुदावन्द का नाम लेगा नजात पाएगा, क्यूँकि कोह — ए — सिय्यून और येरूशलेम में, जैसा ख़ुदावन्द ने फ़रमाया है बच निकलने वाले होंगे, और बाक़ी लोगों में वह जिनको ख़ुदावन्द बुलाता है।