< ಯೋವೇಲನು 3 >
1 ೧ ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,
Denn siehe, in jenen Tagen und zu jener Zeit, wenn ich die Gefangenschaft Judas und Jerusalems wenden werde,
2 ೨ ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.
dann werde ich alle Nationen versammeln und sie in das Tal Josaphat hinabführen; und ich werde daselbst mit ihnen rechten über mein Volk und mein Erbteil Israel, welches sie unter die Nationen zerstreut haben;
3 ೩ ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.
und mein Land haben sie geteilt, und über mein Volk das Los geworfen; und den Knaben haben sie um eine Hure gegeben, und das Mädchen um Wein verkauft, den sie getrunken haben. -
4 ೪ ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.
Und auch ihr, was wollt ihr mir, Tyrus und Zidon und alle ihr Bezirke Philistäas? Wollt ihr mir eine Tat vergelten, oder wollt ihr mir etwas antun? Schnell, eilends werde ich euer Tun auf euren Kopf zurückbringen,
5 ೫ ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.
daß ihr mein Silber und mein Gold weggenommen und meine besten Kleinode in eure Tempel gebracht,
6 ೬ ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.
und die Kinder Judas und die Kinder Jerusalems den Kindern der Griechen verkauft habt, um sie weit von ihrer Grenze zu entfernen.
7 ೭ ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.
Siehe, ich will sie erwecken von dem Orte, wohin ihr sie verkauft habt, und will euer Tun auf euren Kopf zurückbringen.
8 ೮ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.
Und ich werde eure Söhne und eure Töchter in die Hand der Kinder Judas verkaufen; und diese werden sie an die Sabäer verkaufen, an eine ferne Nation; denn Jehova hat geredet.
9 ೯ ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.
Rufet dieses aus unter den Nationen, heiliget einen Krieg, erwecket die Helden; es sollen herankommen und heraufziehen alle Kriegsmänner!
10 ೧೦ ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ.
Schmiedet eure Pflugmesser zu Schwertern und eure Winzermesser zu Speeren; der Schwache sage: Ich bin ein Held!
11 ೧೧ ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.
Eilet und kommet her, alle ihr Nationen ringsum, und versammelt euch! Dahin, Jehova, sende deine Helden hinab!
12 ೧೨ ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.
Die Nationen sollen sich aufmachen und hinabziehen in das Tal Josaphat; denn dort werde ich sitzen, um alle Nationen ringsum zu richten.
13 ೧೩ ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ.
Leget die Sichel an, denn die Ernte ist reif; kommet, stampfet, denn die Kelter ist voll, die Kufen fließen über! Denn groß ist ihre Bosheit. -
14 ೧೪ ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
Getümmel, Getümmel im Tale der Entscheidung; denn nahe ist der Tag Jehovas im Tale der Entscheidung.
15 ೧೫ ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.
Die Sonne und der Mond verfinstern sich, und die Sterne verhalten ihren Glanz.
16 ೧೬ ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
Und Jehova brüllt aus Zion und läßt aus Jerusalem seine Stimme erschallen, und Himmel und Erde erbeben. Und Jehova ist eine Zuflucht für sein Volk und eine Feste für die Kinder Israel.
17 ೧೭ ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
Und ihr werdet erkennen, daß ich, Jehova, euer Gott bin, der auf Zion wohnt, meinem heiligen Berge. Und Jerusalem wird heilig sein, und Fremde werden es nicht mehr durchziehen.
18 ೧೮ ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.
Und es wird geschehen, an jenem Tage, da werden die Berge von Most triefen, und die Hügel von Milch fließen, und alle Bäche Judas werden von Wasser fließen; und eine Quelle wird aus dem Hause Jehovas hervorbrechen und das Tal Sittim bewässern.
19 ೧೯ ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
Ägypten wird zur Einöde und Edom zu einer öden Wüste werden wegen der Gewalttat an den Kindern Judas, weil sie in ihrem Lande unschuldiges Blut vergossen haben.
20 ೨೦ ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.
Aber Juda soll ewiglich bewohnt werden, und Jerusalem von Geschlecht zu Geschlecht.
21 ೨೧ ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
Und ich werde sie von ihrem Blute reinigen, von dem ich sie nicht gereinigt hatte. Und Jehova wird in Zion wohnen.