< ಯೋವೇಲನು 3 >

1 ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,
כִּ֗י הִנֵּ֛ה בַּיָּמִ֥ים הָהֵ֖מָּה וּבָעֵ֣ת הַהִ֑יא אֲשֶׁ֥ר אָשִׁ֛יב אֶת־שְׁב֥וּת יְהוּדָ֖ה וִירוּשָׁלִָֽם׃
2 ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.
וְקִבַּצְתִּי֙ אֶת־כָּל־הַגּוֹיִ֔ם וְה֣וֹרַדְתִּ֔ים אֶל־עֵ֖מֶק יְהֽוֹשָׁפָ֑ט וְנִשְׁפַּטְתִּ֨י עִמָּ֜ם שָׁ֗ם עַל־עַמִּ֨י וְנַחֲלָתִ֤י יִשְׂרָאֵל֙ אֲשֶׁ֣ר פִּזְּר֣וּ בַגּוֹיִ֔ם וְאֶת־אַרְצִ֖י חִלֵּֽקוּ׃
3 ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.
וְאֶל־עַמִּ֖י יַדּ֣וּ גוֹרָ֑ל וַיִּתְּנ֤וּ הַיֶּ֙לֶד֙ בַּזּוֹנָ֔ה וְהַיַּלְדָּ֛ה מָכְר֥וּ בַיַּ֖יִן וַיִּשְׁתּֽוּ׃
4 ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.
וְ֠גַם מָה־אַתֶּ֥ם לִי֙ צֹ֣ר וְצִיד֔וֹן וְכֹ֖ל גְּלִיל֣וֹת פְּלָ֑שֶׁת הַגְּמ֗וּל אַתֶּם֙ מְשַׁלְּמִ֣ים עָלָ֔י וְאִם־גֹּמְלִ֤ים אַתֶּם֙ עָלַ֔י קַ֣ל מְהֵרָ֔ה אָשִׁ֥יב גְּמֻלְכֶ֖ם בְּרֹאשְׁכֶֽם׃
5 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.
אֲשֶׁר־כַּסְפִּ֥י וּזְהָבִ֖י לְקַחְתֶּ֑ם וּמַֽחֲמַדַּי֙ הַטֹּבִ֔ים הֲבֵאתֶ֖ם לְהֵיכְלֵיכֶֽם׃
6 ಯೆಹೂದದ ಮತ್ತು ಯೆರೂಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ. ಅವರನ್ನು ಸ್ವಂತ ನಾಡಿನಿಂದ ದೂರಮಾಡಿದ್ದೀರಿ.
וּבְנֵ֤י יְהוּדָה֙ וּבְנֵ֣י יְרוּשָׁלִַ֔ם מְכַרְתֶּ֖ם לִבְנֵ֣י הַיְּוָנִ֑ים לְמַ֥עַן הַרְחִיקָ֖ם מֵעַ֥ל גְּבוּלָֽם׃
7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.
הִנְנִ֣י מְעִירָ֔ם מִן־הַ֨מָּק֔וֹם אֲשֶׁר־מְכַרְתֶּ֥ם אֹתָ֖ם שָׁ֑מָּה וַהֲשִׁבֹתִ֥י גְמֻלְכֶ֖ם בְּרֹאשְׁכֶֽם׃
8 ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು, ಯೆಹೂದ್ಯರಿಗೆ ಮಾರುವೆನು. ಅವರು ಆ ಮಕ್ಕಳನ್ನು ದೂರದ ಜನಾಂಗವಾದ, ಶೆಬದವರಿಗೆ ಮಾರಿಬಿಡುವರು. ಯೆಹೋವನೇ ಇದನ್ನು ನುಡಿದಿದ್ದಾನೆ.
וּמָכַרְתִּ֞י אֶת־בְּנֵיכֶ֣ם וְאֶת־בְּנֽוֹתֵיכֶ֗ם בְּיַד֙ בְּנֵ֣י יְהוּדָ֔ה וּמְכָר֥וּם לִשְׁבָאיִ֖ם אֶל־גּ֣וֹי רָח֑וֹק כִּ֥י יְהוָ֖ה דִּבֵּֽר׃ ס
9 ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.
קִרְאוּ־זֹאת֙ בַּגּוֹיִ֔ם קַדְּשׁ֖וּ מִלְחָמָ֑ה הָעִ֙ירוּ֙ הַגִּבּוֹרִ֔ים יִגְּשׁ֣וּ יַֽעֲל֔וּ כֹּ֖ל אַנְשֵׁ֥י הַמִּלְחָמָֽה׃
10 ೧೦ ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ.
כֹּ֤תּוּ אִתֵּיכֶם֙ לַֽחֲרָב֔וֹת וּמַזְמְרֹֽתֵיכֶ֖ם לִרְמָחִ֑ים הַֽחַלָּ֔שׁ יֹאמַ֖ר גִּבּ֥וֹר אָֽנִי׃
11 ೧೧ ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು.
ע֣וּשׁוּ וָבֹ֧אוּ כָֽל־הַגּוֹיִ֛ם מִסָּבִ֖יב וְנִקְבָּ֑צוּ שָׁ֕מָּה הַֽנְחַ֥ת יְהוָ֖ה גִּבּוֹרֶֽיךָ׃
12 ೧೨ ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.
יֵע֙וֹרוּ֙ וְיַעֲל֣וּ הַגּוֹיִ֔ם אֶל־עֵ֖מֶק יְהֽוֹשָׁפָ֑ט כִּ֣י שָׁ֗ם אֵשֵׁ֛ב לִשְׁפֹּ֥ט אֶת־כָּל־הַגּוֹיִ֖ם מִסָּבִֽיב׃
13 ೧೩ ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ. ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ, ದ್ರಾಕ್ಷಿಯ ಅಲೆಯು ತುಂಬಿದೆ. ತೊಟ್ಟಿಗಳು ತುಂಬಿ ತುಳುಕುತ್ತಿವೆ. ಜನಾಂಗಗಳ ದುಷ್ಟತನವು ವಿಪರೀತವಾಗಿದೆ.
שִׁלְח֣וּ מַגָּ֔ל כִּ֥י בָשַׁ֖ל קָצִ֑יר בֹּ֤אֽוּ רְדוּ֙ כִּֽי־מָ֣לְאָה גַּ֔ת הֵשִׁ֙יקוּ֙ הַיְקָבִ֔ים כִּ֥י רַבָּ֖ה רָעָתָֽם׃
14 ೧೪ ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.
הֲמוֹנִ֣ים הֲמוֹנִ֔ים בְּעֵ֖מֶק הֶֽחָר֑וּץ כִּ֤י קָרוֹב֙ י֣וֹם יְהוָ֔ה בְּעֵ֖מֶק הֶחָרֽוּץ׃
15 ೧೫ ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಗುಂದುತ್ತವೆ.
שֶׁ֥מֶשׁ וְיָרֵ֖חַ קָדָ֑רוּ וְכוֹכָבִ֖ים אָסְפ֥וּ נָגְהָֽם׃
16 ೧೬ ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
וַיהוָ֞ה מִצִּיּ֣וֹן יִשְׁאָ֗ג וּמִירוּשָׁלִַ֙ם֙ יִתֵּ֣ן קוֹל֔וֹ וְרָעֲשׁ֖וּ שָׁמַ֣יִם וָאָ֑רֶץ וַֽיהוָה֙ מַֽחֲסֶ֣ה לְעַמּ֔וֹ וּמָע֖וֹז לִבְנֵ֥י יִשְׂרָאֵֽל׃
17 ೧೭ ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
וִֽידַעְתֶּ֗ם כִּ֣י אֲנִ֤י יְהוָה֙ אֱלֹ֣הֵיכֶ֔ם שֹׁכֵ֖ן בְּצִיּ֣וֹן הַר־קָדְשִׁ֑י וְהָיְתָ֤ה יְרוּשָׁלִַ֙ם֙ קֹ֔דֶשׁ וְזָרִ֥ים לֹא־יַֽעַבְרוּ־בָ֖הּ עֽוֹד׃ ס
18 ೧೮ ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.
וְהָיָה֩ בַיּ֨וֹם הַה֜וּא יִטְּפ֧וּ הֶהָרִ֣ים עָסִ֗יס וְהַגְּבָעוֹת֙ תֵּלַ֣כְנָה חָלָ֔ב וְכָל־אֲפִיקֵ֥י יְהוּדָ֖ה יֵ֣לְכוּ מָ֑יִם וּמַעְיָ֗ן מִבֵּ֤ית יְהוָה֙ יֵצֵ֔א וְהִשְׁקָ֖ה אֶת־נַ֥חַל הַשִּׁטִּֽים׃
19 ೧೯ ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
מִצְרַ֙יִם֙ לִשְׁמָמָ֣ה תִֽהְיֶ֔ה וֶאֱד֕וֹם לְמִדְבַּ֥ר שְׁמָמָ֖ה תִּֽהְיֶ֑ה מֵֽחֲמַס֙ בְּנֵ֣י יְהוּדָ֔ה אֲשֶׁר־שָׁפְכ֥וּ דָם־נָקִ֖יא בְּאַרְצָֽם׃
20 ೨೦ ಆದರೆ ಯೆಹೂದವು ಸದಾ ಜನಭರಿತವಾಗಿರುವುದು, ಯೆರೂಸಲೇಮ್ ತಲತಲಾಂತರಕ್ಕೂ ನಿವಾಸಸ್ಥಾನವಾಗಿರುವುದು.
וִיהוּדָ֖ה לְעוֹלָ֣ם תֵּשֵׁ֑ב וִירוּשָׁלִַ֖ם לְד֥וֹר וָדֽוֹר׃
21 ೨೧ ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
וְנִקֵּ֖יתִי דָּמָ֣ם לֹֽא־נִקֵּ֑יתִי וַֽיהוָ֖ה שֹׁכֵ֥ן בְּצִיּֽוֹן׃

< ಯೋವೇಲನು 3 >