< ಯೋಹಾನನು 12 >
1 ೧ ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
Veio, pois, Jesus seis dias antes da páscoa a Betânia, onde estava Lázaro, o que havia morrido, a quem ressuscitara dos mortos.
2 ೨ ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
Fizeram-lhe, pois, ali uma ceia, e Marta servia; e Lázaro era um dos que juntamente com ele estavam sentados [à mesa].
3 ೩ ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
Tomando então Maria um arrátel de óleo perfumado de nardo puro, de muito preço, ungiu os pés de Jesus, e limpou os pés dele com seus cabelos; e encheu-se a casa do cheiro do óleo perfumado.
4 ೪ ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
Então disse Judas de Simão Iscariotes, um de seus discípulos, o que o trairia:
5 ೫ “ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
Por que se não vendeu este óleo perfumado por trezentos dinheiros, e se deu aos pobres?
6 ೬ ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
E isto disse ele, não pelo cuidado que tivesse dos pobres; mas porque era ladrão, e tinha a bolsa, e trazia o que se lançava [nela].
7 ೭ ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
Disse pois Jesus: Deixa-a; para o dia de meu sepultamento guardou isto.
8 ೮ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
Porque aos pobres sempre os tendes convosco; porém a mim não me tendes sempre.
9 ೯ ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
Muita gente dos judeus soube pois, que ele estava ali; e vieram, não somente por causa de Jesus, mas também para verem a Lázaro, a quem ressuscitara dos mortos.
10 ೧೦ ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
E os chefes dos sacerdotes se aconselharam de também matarem a Lázaro,
11 ೧೧ ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
Porque muitos dos judeus iam por causa dele, e criam em Jesus.
12 ೧೨ ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
No dia seguinte, ouvindo uma grande multidão, que viera à festa, que Jesus vinha a Jerusalém,
13 ೧೩ ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
Tomaram ramos de plantas e lhe saíram ao encontro, e clamavam: Hosana! Bendito aquele que vem no nome do Senhor, o Rei de Israel!
14 ೧೪ ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
E Jesus achou um jumentinho, e sentou-se sobre ele, como está escrito:
15 ೧೫ ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
Não temas, ó filha de Sião; eis que teu Rei vem sentado sobre o filhote de uma jumenta.
16 ೧೬ ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
Porém seus discípulos não entenderam isto ao princípio; mas sendo Jesus já glorificado, então se lembraram que isto dele estava escrito, e [que] isto lhe fizeram.
17 ೧೭ ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
A multidão pois, que estava com ele, testemunhava, que a Lázaro chamara da sepultura, e o ressuscitara dos mortos.
18 ೧೮ ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
Pelo que também a multidão lhe saiu ao encontro, porque ouvira que fizera este sinal.
19 ೧೯ ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Disseram pois os fariseus entre si: Vedes que nada aproveitais? Eis que o mundo vai após ele.
20 ೨೦ ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
E havia alguns gregos dos que haviam subido para adorarem na festa.
21 ೨೧ ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
Estes pois vieram a Filipe, que era de Betsaida de Galileia, e rogaram-lhe, dizendo: Senhor, queríamos ver a Jesus.
22 ೨೨ ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
Veio Filipe, e disse-o a André; e André então e Filipe o disseram a Jesus.
23 ೨೩ ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
Porém Jesus lhes respondeu, dizendo: Chegada é a hora em que o Filho do homem será glorificado.
24 ೨೪ ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
Em verdade, em verdade vos digo, se o grão de trigo, ao cair na terra, não morrer, ele fica só; porém se morrer, dá muito fruto.
25 ೨೫ ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aiōnios )
Quem ama sua vida a perderá; e quem neste mundo odeia sua vida, a guardará para a vida eterna. (aiōnios )
26 ೨೬ ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
Se alguém me serve, siga-me; e onde eu estiver, ali estará também meu servo. E se alguém me servir, o Pai o honrará.
27 ೨೭ ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
Agora minha alma está perturbada; e que direi? Pai, salva-me desta hora; mas por isso vim a esta hora.
28 ೨೮ ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
Pai, glorifica teu Nome. Veio, pois, uma voz do céu, [que dizia]: E já [o] tenho glorificado, e outra vez [o] glorificarei.
29 ೨೯ ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
A multidão pois que ali estava, e [a] ouviu, dizia que havia sido trovão. Outros diziam: Algum anjo falou com ele.
30 ೩೦ ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
Respondeu Jesus e disse: Esta voz não veio por causa de mim, mas sim por causa de vós.
31 ೩೧ ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
Agora é o juízo deste mundo; agora será lançado fora o príncipe deste mundo.
32 ೩೨ ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
E eu, quando for levantado da terra, trarei todos a mim.
33 ೩೩ ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
(E isto dizia, indicando de que morte [ele] morreria.)
34 ೩೪ ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. (aiōn )
Respondeu-lhe a multidão: Temos ouvido da Lei que o Cristo permanece para sempre; e como tu dizes que convém que o Filho do homem seja levantado? Quem é este Filho do homem? (aiōn )
35 ೩೫ ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
Disse-lhes pois Jesus: Ainda por um pouco de tempo a luz está convosco; andai enquanto tendes luz, para que as trevas vos não apanhem. E quem anda em trevas não sabe para onde vai.
36 ೩೬ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
Enquanto tendes luz, crede na luz, para que sejais filhos da luz. Estas coisas falou Jesus, e indo-se, escondeu-se deles.
37 ೩೭ ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
E ainda que perante eles tinha feito tantos sinais, não criam nele.
38 ೩೮ ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
Para que se cumprisse a palavra do profeta Isaías, que disse: Senhor, quem creu em nossa pregação? E a quem o braço do Senhor foi revelado?
39 ೩೯ ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
Por isso não podiam crer, porque outra vez Isaías disse:
40 ೪೦ “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
Os olhos lhes cegou, e o coração lhes endureceu; para não acontecer que vejam dos olhos, e entendam do coração, e se convertam, e eu os cure.
41 ೪೧ ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
Isto disse Isaías, quando viu sua glória, e falou dele.
42 ೪೨ ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
Contudo ainda até muitos dos chefes também creram nele; mas não o confessavam por causa dos fariseus; para não serem expulsos da sinagoga.
43 ೪೩ ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
Porque amavam mais a glória humana do que a glória de Deus.
44 ೪೪ ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
E exclamou Jesus, e disse: Quem crê em mim, não crê [somente] em mim, mas [também] naquele que me enviou.
45 ೪೫ ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
E quem vê a mim, vê a aquele que me enviou.
46 ೪೬ ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
Eu sou a luz que vim ao mundo, para que todo aquele que crê em mim, não permaneça em trevas.
47 ೪೭ ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
E se alguém ouvir minhas palavras, e não crer, eu não o julgo; porque não vim para julgar o mundo, mas sim para salvar o mundo.
48 ೪೮ ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
Quem me rejeitar e não receber minhas palavras, já tem quem o julgue: a palavra que eu tenho falado, essa o julgará no último dia.
49 ೪೯ ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
Porque eu não tenho falado de mim mesmo; porém o Pai que me enviou, ele me deu mandamento do que devo dizer, e do que devo falar.
50 ೫೦ ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aiōnios )
E sei que seu mandamento é vida eterna. Portanto o que eu falo, falo assim como o Pai tem me dito. (aiōnios )