< ಯೋಹಾನನು 13 >

1 ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
第一款 過越の晩餐 過越の祭日の前、イエズス己が時、即ち此世より父に移るべき時來れるを知り給ひて、豫ても世に在る己が[弟子]を愛し給ひしが、極まで之を愛し給へり。
2 ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.
然て晩餐の終つるに臨み、惡魔既にイエズスを付さん事を、シモンの子イスカリオテのユダの心に入れしかば、
3 ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.
イエズス父より萬事を己が手に賜はりたる事と、己が神より出でて神に至る事とを知り給ひ、
4 ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
晩餐より起上りて上衣を脱ぎ、布片を取りて腰に帯び、
5 ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.
軈て水を銅盤に盛り、弟子等の足を洗ひて、其帯びたる布片もて之を拭ひ始め給へり。
6 ಹೀಗೆ ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ, “ಕರ್ತನೇ, ನೀನು ನನ್ನ ಪಾದಗಳನ್ನು ತೊಳೆಯುತ್ತೀಯೋ?” ಎಂದು ಹೇಳಿದನು.
斯てシモン、ペトロに至り給ふや、ペトロ、主よ、我足を洗ひ給ふか、と云ひしに、
7 ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.
イエズス答へて、我が為す所汝今は知らざれども、後には之を知るべし、と曰ひければ、
8 ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, “ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ” ಎಂದನು. (aiōn g165)
ペトロ云ひけるは、我足を洗ひ給ふ事決してあるべからず、と。イエズス我若汝を洗はずば、我と一致する所あらじ、と答へ給ひしかば、 (aiōn g165)
9 ಸೀಮೋನ ಪೇತ್ರನು, “ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ, ಕೈಗಳನ್ನೂ, ತಲೆಯನ್ನೂ ಸಹ ತೊಳೆ” ಎಂದನು.
シモン、ペトロ、主よ、我足のみならず、手をも頭をも、と云ひしが、
10 ೧೦ ಯೇಸು ಅವನಿಗೆ, “ಸ್ನಾನಮಾಡಿಕೊಂಡವನಿಗೆ ತನ್ನ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು, ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವೂ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದನು.
イエズス曰ひけるは、既に身を洗ひたる人は全身潔くして、足の外洗ふを要せず、汝等も潔けれど総てには非ず、と。
11 ೧೧ ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ” ಎಂದು ಹೇಳಿದ್ದನು.
蓋己を付す者の誰なるを知り給ひて、汝等悉く潔きには非ずと曰ひしなり。
12 ೧೨ ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
然て彼等の足を洗ひ終りて上衣を取り、復席に着きて彼等に曰ひけるは、我が汝等に為しし事の何たるを知るや。
13 ೧೩ ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.
汝等は我を師又は主と呼ぶ、其言ふことや宜し、我は其なればなり。
14 ೧೪ ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.
然るに主たり師たる我にして汝等の足を洗ひたれば、汝等も亦互に足を洗はざるべからず。
15 ೧೫ ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
蓋我汝等に例を示したるは、我が汝等に為しし如く、汝等にも為さしめん為なり。
16 ೧೬ ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
誠に實に汝等に告ぐ、僕は其主よりも大いならず、使徒は之を遣はしし者よりも大いならず、
17 ೧೭ ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
汝等是等の事を知りて之を行はば福なるべし。
18 ೧೮ ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
我は汝等の凡てを指して云ふに非ず、曾て選みたる人々を知れり。然れども聖書に「我と共に麪を食する人我に向ひて其踵を挙げたり」とある事の成就せん為なり。
19 ೧೯ ಅದು ನಡೆಯುವಾಗ ನಾನೇ ಆತನು ಎಂದು ನೀವು ನಂಬುವಂತೆ, ಅದು ಸಂಭವಿಸುವುದಕ್ಕಿಂತ ಮೊದಲೇ ಅದನ್ನು ಈಗ ನಿಮಗೆ ಹೇಳುತ್ತಿದ್ದೇನೆ.
我今事の成るに先ちて汝等に告ぐるは、其成りたらん時、汝等をして我が其なることを信ぜしめん為なり。
20 ೨೦ ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”
誠に實に汝等に告ぐ、我が遣はす者を承くる人は我を承け、我を承くる人は我を遣はし給ひしものを承くるなり、と。
21 ೨೧ ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನುನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.
イエズス之を曰ひ終りて御心騒ぎ、證明して、誠に實に汝等に告ぐ、汝等の中一人我を付さんとす、と曰ひければ、
22 ೨೨ ಆಗ ಈತನು ಯಾರ ವಿಷಯವಾಗಿ ಈ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
弟子等、誰を指して曰へるぞと訝りて、互に顔を見合せたりしが、
23 ೨೩ ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.
イエズスの愛し給へる一人の弟子、御懐の辺りに倚懸り居たるに、
24 ೨೪ ಅವನಿಗೆ ಸೀಮೋನ ಪೇತ್ರನು ಸನ್ನೆಮಾಡಿ, “ಆತನು ಯಾರ ವಿಷಯವಾಗಿ ಮಾತನಾಡಿದನು ಎಂದು ಕೇಳು” ಅಂದನು.
シモン、ペトロ、腮もて示しつつ、曰へるは誰の事ぞ、と云ひければ、
25 ೨೫ ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.
彼御胸に倚懸りて、主よ誰なるか、と云ひしかば、
26 ೨೬ ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.
イエズス答へて曰ひけるは、我が麪を浸して與ふる者即ち其なり、と。斯て麪を浸して、シモンの子イスカリオテのユダに與へ給ひしに、
27 ೨೭ ಅವನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೇ ಮಾಡು” ಎಂದು ಹೇಳಿದನು.
此一片を取るやサタン彼に入れり。然てイエズス之に向ひて、其為す所を速に為せ、と曰ひしかど、
28 ೨೮ ಆದರೆ ಆತನು ಅವನಿಗೆ ಇದನ್ನು ಏಕೆ ಹೇಳಿದನೆಂದು ಊಟದ ಮೇಜಿನಲ್ಲಿ ಕುಳಿತವರಲ್ಲಿ ಯಾರಿಗೂ ತಿಳಿಯಲಿಲ್ಲ.
食卓に就けるものは一人として、何の為に之を曰ひしかを知らず、
29 ೨೯ ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.
中にはユダが財嚢を持てるによりて、祭日の為に我等が要する物を買へ、或は貧者に何かを施せ、とイエズスの曰へるならん、と思ふ人々もありき。
30 ೩೦ ಇಸ್ಕರಿಯೋತ ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ, ಅಲ್ಲಿಂದ ಎದ್ದು ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.
ユダは彼一片を受くるや直に出行きしが、時は既に夜なりき。
31 ೩೧ ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತುದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
第二款 食堂に於る談話 ユダが出でし後、イエズス曰ひけるは、今や人の子光榮を得、神も彼に於て光榮を得給へり、
32 ೩೨ ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನುತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
神彼に於て光榮を得給ひたれば、神亦己に於て光榮を彼に得させ、而も直に得させ給ふべし。
33 ೩೩ ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
小子よ、我は尚暫く汝等と共に在り、汝等将に我を尋ぬべけれども、曾てユデア人に向ひて、我が往く處には汝等來る能はずと言ひし如く、今は汝等にも亦然言ふ。
34 ೩೪ ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
我は新しき掟を汝等に與ふ、即ち汝等相愛すべし、我が汝等を愛せし如く、汝等も相愛すべし、
35 ೩೫ ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
汝等相愛せば、人皆之によりて汝等の我弟子たる事を認めん、と。
36 ೩೬ ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
シモン、ペトロ、主よ、何處に往き給ふぞ、と云ひしにイエズス答へ給ひけるは、我が往く處に汝今は從ふ能はず、後に從はん、と。
37 ೩೭ ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
ペトロ又、我今は汝に從ふ能はざるは何ぞや、我は汝の為に生命をも棄てんとす、と云ひしかば、
38 ೩೮ ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.
イエズス之に答へ給ひけるは、汝は我が為に生命をも棄てんとするか、誠に實に汝に告ぐ、汝が三度我を否む迄は鶏鳴はざるべし。

< ಯೋಹಾನನು 13 >