< ಯೋಹಾನನು 14 >
1 ೧ “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
CHAMIYO ninafañachatsaga corasonmiyo: injenggue si Yuus, jenggue yo locue.
2 ೨ ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
Y guima Tatajo nae guaja megae na sagayan: yaguin ti utaegüine mojon jagas jusagane jamyo. Bae jujanao ya jufamauleg y saga para jamyo.
3 ೩ ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನುನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
Yaguin jumanao yo ya jufamauleg y saga para jamyo, jumamaela talo mague ya jucone jamyo yan guajo; sa manoja yo nae sumaga, ayoja locue jamyo.
4 ೪ ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
Ya mano yo guato, intingo y chalan.
5 ೫ ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,
Ylegña nu güiya si Tomas: Señot, ti intingo para mano jao; ya jafa taemano tungomame nu y chalan?
6 ೬ ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತುಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
Ylegña nu güiya si Jesus: Guajo y chalan, yan y minagajet, yan y linâlâ; taya malag y Tata, yan ti pot guajo.
7 ೭ ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
Yaguin guinin intingoyo, mojon intingo locue y Tatajo; ya desde pago intingo güe ya inlie güe.
8 ೮ ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.
Ylegña nu guiya si Felipe: Señot, fanue jam nu y Tata ya basta para jame.
9 ೯ ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?
Ylegña nu güiya si Jesus: Megae na tiempo na manjita, ya asta pago ti untungo yo Felipe? Y lumiiyo, jaliija y Tata. Ya jafa muna ilegmo: Fanue jam nu y Tata?
10 ೧೦ ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.
Ti unjonggue na guajo gaegue gui as Tata, ya y Tata gaegue guiya guajo? Sa y finijo nu y jusasangan, ti jusasangan pot guajoja; lao y Tata nu y sumasasaga guiya guajo, ayo fumatinas y chechoña sija.
11 ೧೧ ನಾನು ತಂದೆಯಲ್ಲಿಯೂ, ತಂದೆಯು ನನ್ನಲ್ಲಿಯೂ ಇದ್ದಾನೆಂದು ತಿಳಿದು ನೀವು ನನ್ನನ್ನು ನಂಬಿರಿ. ಇಲ್ಲವೇ ನಾನು ಮಾಡಿದ ಕಾರ್ಯಗಳ ನಿಮಿತ್ತದಿಂದಾದರೂ ನೀವು ನನ್ನನ್ನು ನಂಬಿರಿ.
Jenggue na gaegue yo gui as Tata, ya y Tata gaegue guiya guajo: yaguin ti pot este, jenggueyo pot y checho sija.
12 ೧೨ “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
Magajet ya magajet y jusangane jamyo: Y jumonggueyo, y checo nu y juchogüe, güiya chumogüe locue; ya mas dangculo na chocho qui este jachogüe; sa jujanao para as Tata.
13 ೧೩ ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
Ya todo y ingagao pot y naanjo, bae jufatinas, sa y Tata uresibe minalagña nu y Lajiña.
14 ೧೪ ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.
Jafaja y ingagaoyo pot y naanjo, bae jufatinas ayo.
15 ೧೫ “ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.
Yaguin inguaeya yo, inadaje y tinagojo.
16 ೧೬ ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು. (aiōn )
Sa bae jutayuyut si Tata ya infanninae otro Consoladot para ugaegue guiya jamyo na taejinecog. (aiōn )
17 ೧೭ ಆ ಸಹಾಯಕನು ಯಾರೆಂದರೆಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.
Güiya y Espiritun minagajet nu y tano ti siña umaresibe; sa ti malie güe, ya ti matungo güe; lao jamyo intingo güe; sa sumaga yan jamyo, ya ugaegue guiya jamyo.
18 ೧೮ “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.
Ti judingo jamyo güetfano: jumamaela guiya jamyo.
19 ೧೯ ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.
Dididija talo, y tano ti uliiyo; lao jamyo inliija yo; sa lâlâyo, ya infanlâlâja locue.
20 ೨೦ ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.
Güije na jaane umasusede na intingo na gaegueyo gui as Tata, ya jamyo guiya guajo ya guajo guiya jamyo.
21 ೨೧ ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು.
Y guaja y tinagojo ya jaadadaje, ayo yo gumaeya; ya y gumaeya yo, ugüinaeya as Tata, ya juguaeya güe; ya jufanuegüe nu guajo mamaesa.
22 ೨೨ ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.
Ylegña nu güiya si Judas, ti si Iscariote: Señot, jafa muna unfanue jam nu jago namaesa ya ti unfanue y tano?
23 ೨೩ ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
Inepe as Jesus ya ilegña nu güiya: Jaye yo y gumaeya, uadaje y sinanganjo; ya ugüinaeya as Tata, ya jame infatoigüe güe ya insagaye güe.
24 ೨೪ ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
Y ti gumaeya yo, ti jaadaje y sinanganjo; ya y sinangan nu y injingog, ti sinanganjo, lao iyon y Tata ni tumago yo.
25 ೨೫ “ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.
Estesija jusagane jamyo anae manjijita.
26 ೨೬ ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.
Lao ayo y Consoladat y Espiritu Santo; nu si Tata utinago pot y naanjo, güiya infanfinanagüe todosija, ya inninafanjajasoja todo y jusangane jamyo.
27 ೨೭ “ನಾನು ನನ್ನಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
Pas jupoluye jamyo; y pasjo junae jamyo; ti taegüine y ninaen y tano na ninaejo. Chamiyo ninafañachatsaga corasonmiyo ni infanmaañao.
28 ೨೮ ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
Jamyo jagas injingogja jafa y jusagane jamyo, bae jujano, ya jutalo güine mague guiya jamyo. Yaguin inguaeya yo, magajet infanmagof, sa bae jujanao ya jufalag as Tata; sa si Tata dangculoña qui guajo.
29 ೨೯ ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.
Pago jagas jusangane jamyo antes qui umasusede, para yanguin jasusede, jamyo injenggue.
30 ೩೦ ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.
Desde pago na tiempo ti jucuentuse jamyo megae, sa y magalagen este na tano ufato, ya taya iyoña guiya guajo;
31 ೩೧ ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ” ಎಂದನು.
Lao y tano ujatungo na juguaeya si Tata, ya jaftaemanoja si Tata jasangane yo, ayo muna jufatinas. Fangajulo ya nije tafanjanao.