< ಯೋಹಾನನು 16 >
1 ೧ “ನೀವು ನಂಬಿಕೆಯಿಂದ ಎಡವಿ ಬಿದ್ದು ಹೋಗಬಾರದೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.
“Ta đã dạy các con những điều ấy để khi gặp khó khăn, các con sẽ không vấp ngã.
2 ೨ ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.
Người ta sẽ khai trừ các con. Sẽ có lúc mọi người nghĩ rằng giết các con là phục vụ Đức Chúa Trời.
3 ೩ ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.
Họ giết các con vì họ không biết Đức Chúa Trời và cũng không biết Ta.
4 ೪ ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.
Ta cho các con biết để khi các việc ấy xảy ra, các con nhớ rõ Ta báo trước rồi. Trước kia Ta chưa nói vì Ta còn ở với các con.”
5 ೫ “ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ‘ನೀನು ಎಲ್ಲಿಗೆ ಹೋಗುತ್ತಿ?’ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವುದಿಲ್ಲ.
“Bây giờ Ta sắp trở về với Đấng đã sai Ta, nhưng chẳng ai trong các con lưu ý hỏi Ta đi đâu.
6 ೬ ನಾನು ಈ ಮಾತುಗಳನ್ನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.
Trái lại lòng các con phiền muộn vì những điều Ta nói.
7 ೭ ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.
Dù vậy, Ta đi là ích lợi cho các con, vì nếu Ta không đi, Đấng An Ủi sẽ không đến với các con. Khi Ta đi, Ta sẽ sai Ngài đến với các con.
8 ೮ ಆತನು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ಕುರಿತು ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
Khi Ngài đến, Ngài sẽ chứng tỏ cho nhân loại biết họ lầm lạc trong tội lỗi, sẽ dìu dắt họ trở về đường công chính, và giúp họ hiểu công lý của Đức Chúa Trời.
9 ೯ ಅವರು ನನ್ನನ್ನು ನಂಬದೇ ಇರುವುದರಿಂದ ಪಾಪದ ಕುರಿತಾಗಿಯೂ
Họ tội lỗi vì không chịu tin Ta.
10 ೧೦ ನಾನು ನನ್ನ ತಂದೆಯ ಬಳಿಗೆ ಹೋಗಿ, ಇನ್ನು ಮೇಲೆ ನಿಮಗೆ ಕಾಣಿಸದೆ ಇರುವುದರಿಂದ ನೀತಿಯ ಕುರಿತಾಗಿಯೂ,
Về sự công chính Ta đã dành cho họ khi Ta về cùng Cha, và các con sẽ không thấy Ta nữa.
11 ೧೧ ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.
Công lý sẽ đến vì những người cai trị thế gian này đã bị phán xét.
12 ೧೨ “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.
Ta còn nhiều điều muốn nói với các con, nhưng hiện giờ các con chưa hiểu.
13 ೧೩ ಆದರೆಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.
Khi Thần Chân Lý đến, Ngài sẽ dạy cho các con biết chân lý toàn diện. Ngài không nói theo ý mình, nhưng truyền lại những điều Ngài đã nghe và nói cho các con biết những việc tương lai.
14 ೧೪ ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದನನ್ನನ್ನೇ ಮಹಿಮೆಪಡಿಸುವನು.
Thần Chân Lý sẽ tôn vinh Ta, vì Ngài sẽ cho các con biết sự thật về vinh quang Ta.
15 ೧೫ ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.
Mọi điều Cha có đều thuộc về Ta, nên Ta nói: Thần Chân Lý sẽ cho các con biết sự thật về vinh quang Ta.”
16 ೧೬ ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.
“Chẳng bao lâu, các con không thấy Ta nữa, nhưng chỉ một thời gian ngắn các con lại gặp Ta.”
17 ೧೭ ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’ ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು
Vài môn đệ hỏi nhau: “Lời Thầy có nghĩa gì khi nói: ‘Chẳng bao lâu nữa các con không thấy Ta, nhưng chỉ một thời gian ngắn các con lại gặp Ta,’ và ‘Ta sắp về với Cha’?
18 ೧೮ “‘ಸ್ವಲ್ಪ ಕಾಲವೆಂದು’ ಈತನು ಹೇಳುವ ಈ ಮಾತೇನು? ಏನು ಮಾತನಾಡುತ್ತಿದ್ದಾನೋ ನಮಗೆ ತಿಳಿಯದು” ಎಂದು ಅಂದುಕೊಳ್ಳುತ್ತಿದ್ದರು.
Và ý Thầy nói ‘một thời gian ngắn’ là bao lâu? Chúng ta không hiểu được.”
19 ೧೯ ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?
Chúa Giê-xu biết họ đang hoang mang, Ngài phán: “Các con không hiểu lời Ta vừa nói sao?
20 ೨೦ ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆನಿಮ್ಮ ದುಃಖವು ಹೋಗಿ ಆನಂದ ಬರುವುದು.
Ta cho các con biết, các con sẽ than khóc về những việc sắp xảy đến cho Ta nhưng người đời sẽ mừng rỡ. Các con sẽ đau buồn, nhưng nỗi buồn ấy sẽ biến thành niềm vui, vì các con lại gặp Ta.
21 ೨೧ ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
Người mẹ sắp đến giờ sinh nở phải chịu đau đớn, buồn lo. Nhưng sau khi sinh con, người mẹ vui mừng và quên hết đau đớn.
22 ೨೨ ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
Tuy hiện nay các con đau buồn, nhưng chẳng bao lâu Ta sẽ gặp các con, lòng các con sẽ tràn ngập niềm vui bất tận.
23 ೨೩ ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
Lúc ấy các con sẽ không còn thắc mắc hỏi han gì nữa. Ta quả quyết với các con, các con nhân danh Ta cầu xin điều gì, Cha cũng ban cho.
24 ೨೪ ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
Trước nay, các con chưa nhân danh Ta cầu xin điều chi cả. Cứ cầu xin đi, các con sẽ được, để lòng các con tràn ngập vui mừng.
25 ೨೫ “ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.
Ta thường dùng ẩn dụ để dạy dỗ các con. Sẽ đến lúc Ta không dùng ẩn dụ nữa, nhưng giải bày trực tiếp về Cha cho các con.
26 ೨೬ ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.
Lúc ấy các con sẽ nhân danh Ta cầu xin, không phải chỉ có Ta cầu thay cho các con, nhưng chính các con cầu xin Cha,
27 ೨೭ ನೀವು ನನ್ನನ್ನು ಪ್ರೀತಿಸಿನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
vì Cha cũng yêu các con bởi các con yêu Ta và tin rằng Ta được Đức Chúa Trời sai đến.
28 ೨೮ ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
Ta từ Cha xuống trần gian, nay Ta sắp rời trần gian trở về với Cha.”
29 ೨೯ ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.
Các môn đệ thưa: “Thưa Thầy, bây giờ Thầy giảng giải rõ ràng, không còn dùng ẩn dụ nữa.
30 ೩೦ ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.
Bây giờ chúng con biết Thầy thấu hiểu mọi việc, chẳng cần ai hỏi Thầy. Vì thế chúng con tin Thầy đến từ Đức Chúa Trời.”
31 ೩೧ ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.
Chúa Giê-xu hỏi: “Bây giờ các con tin rồi sao?
32 ೩೨ ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.
Sắp đến lúc các con ly tán mỗi người một ngã, bỏ Ta lại một mình. Nhưng Ta không cô đơn bao giờ vì Cha ở với Ta.
33 ೩೩ ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
Ta nói cho các con những điều ấy để các con được bình an trong Ta. Thế gian sẽ gây đủ thứ hoạn nạn khốn khổ cho các con. Nhưng đừng nản lòng vì Ta đã chiến thắng thế gian.”