< ಯೋಹಾನನು 18 >
1 ೧ ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
Après avoir dit ces choses Jésus sortit avec ses disciples pour se rendre, au delà du torrent des cèdres, en un lieu où se trouvait un jardin dans lequel il entra, lui et ses disciples.
2 ೨ ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
Or Judas, qui le livrait, connaissait aussi l'endroit, parce que souvent Jésus s'y était réuni à ses disciples.
3 ೩ ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
Judas donc, ayant pris la cohorte et des satellites que lui avaient donnés les grands prêtres et les pharisiens, arrive en ce lieu avec des torches, des lanternes et des armes.
4 ೪ ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
Jésus donc, qui savait tout ce qui allait lui arriver, sortit et leur dit: « Qui cherchez-vous? »
5 ೫ ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
Ils lui répondirent: « Jésus le Nazoréen. » Il leur dit: « C'est moi qui suis Jésus. » Or Judas qui le livrait était aussi avec eux.
6 ೬ ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
Lors donc qu'il leur eut dit: « C'est moi qui le suis, » ils reculèrent en arrière et tombèrent par terre.
7 ೭ ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
Il leur demanda donc derechef: « Qui cherchez-vous? » Et ils dirent: « Jésus le Nazoréen. »
8 ೮ ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
Jésus répondit: « Je vous ai dit que c'est moi qui le suis, si donc vous me cherchez, laissez aller ceux-ci. » —
9 ೯ ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
Afin que fût accomplie la parole qu'il avait dite: ceux que tu m'as donnés, je n'en ai perdu aucun. —
10 ೧೦ ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
Simon Pierre qui avait une épée la tira donc et frappa l'esclave du grand prêtre et lui coupa l'oreille droite; or le nom de l'esclave était Malchus.
11 ೧೧ ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.
Jésus dit donc à Pierre: « Remets l'épée dans le fourreau; la coupe que le Père m'a donnée, ne la boirai-je pas? »
12 ೧೨ ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
La cohorte, et le commandant, et les satellites des Juifs se saisirent donc de Jésus et le garrottèrent,
13 ೧೩ ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
et ils le conduisirent d'abord chez Annas; il était en effet beau-père de Caïaphas, qui était grand prêtre cette année-là. —
14 ೧೪ ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.
Or Caïaphas était celui qui avait donné aux Juifs le conseil: il convient qu'un seul homme meure pour le peuple. —
15 ೧೫ ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
Cependant Simon Pierre suivait Jésus, avec un autre disciple; or ce disciple-ci était connu du grand prêtre, et il entra avec Jésus dans la cour du grand prêtre,
16 ೧೬ ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
mais Pierre se tenait dehors près de la porte. L'autre disciple, celui qui était connu du grand prêtre, sortit donc, et parla à la portière, et il fit entrer Pierre.
17 ೧೭ ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
La servante qui faisait office de portière dit donc à Pierre: « N'es-tu pas, toi aussi, des disciples de cet homme-là? » Il lui dit: « Je n'en suis point. »
18 ೧೮ ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.
Cependant les esclaves et les satellites se tenaient auprès d'un brasier qu'ils avaient allumé, car il faisait froid, et ils se chauffaient; or Pierre se tenait aussi avec eux et se chauffait.
19 ೧೯ ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
Le grand prêtre interrogea donc Jésus sur ses disciples et sur sa doctrine.
20 ೨೦ ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
Jésus lui répondit: « Pour moi, c'est publiquement que j'ai parlé au monde; j'ai constamment enseigné dans une synagogue et dans le temple où tous les Juifs se rassemblent, et je n'ai rien dit en cachette.
21 ೨೧ ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
Pourquoi m'interroges-tu? Interroge ceux qui ont entendu ce dont je leur ai parlé; voici, ce sont eux qui savent ce que j'ai dit. »
22 ೨೨ ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
Or quand il eut dit cela, un des satellites qui se trouvait là donna un soufflet à Jésus, en disant: « C'est ainsi que tu réponds au grand prêtre! »
23 ೨೩ ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
Jésus lui répondit: « Si j'ai mal parlé, porte témoignage du mal que j'ai dit, mais si c'est bien, pourquoi me frappes-tu? »
24 ೨೪ ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
Annas l'envoya donc garrotté à Caïaphas le grand prêtre.
25 ೨೫ ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
Cependant Simon Pierre était à se chauffer; ils lui dirent donc: « N'es-tu pas, toi aussi, de ses disciples? » Il le nia et dit: « Je n'en suis point. »
26 ೨೬ ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
Un des esclaves du grand prêtre, qui était parent de celui dont Pierre avait coupé l'oreille, dit: « Est-ce que je ne t'ai pas vu dans le jardin avec lui? »
27 ೨೭ ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
Pierre donc nia derechef, et aussitôt un coq chanta.
28 ೨೮ ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
Ils conduisent donc Jésus de chez Caïaphas au prétoire; or c'était le matin, et eux-mêmes n'entrèrent pas dans le prétoire, afin de ne pas se souiller, et de pouvoir manger la pâque.
29 ೨೯ ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.
Pilate donc sortit pour se rendre auprès d'eux et dit: « Quelle accusation portez-vous contre cet homme? »
30 ೩೦ ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
Ils lui répliquèrent: « Si celui-ci n'était pas un malfaiteur, nous ne te l'aurions pas livré. »
31 ೩೧ ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
Pilate leur dit donc: « Prenez-le vous-mêmes, et jugez-le selon votre loi. » Les Juifs lui dirent: « Il ne nous est pas permis de mettre personne à mort. » —
32 ೩೨ ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.
Afin que fût accomplie la parole par laquelle Jésus avait indiqué de quelle mort il devait mourir. —
33 ೩೩ ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
Pilate entra donc derechef dans le prétoire, et il appela Jésus, et lui dit: « Es-tu le roi des Juifs? »
34 ೩೪ ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.
Jésus répondit: « Est-ce de toi-même que tu dis cela, ou bien d'autres te l'ont-ils dit de moi? »
35 ೩೫ ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,
Pilate répondit: « Est-ce que je suis Juif? C'est ta nation et les grands prêtres qui t'ont livré à moi; qu'as-tu fait? »
36 ೩೬ ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
Jésus répondit: « Mon royaume n'est pas de ce monde; si mon royaume était de ce monde, mes satellites auraient combattu afin que je ne fusse pas livré aux Juifs; mais maintenant mon royaume n'est pas d'ici. »
37 ೩೭ ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
Pilate lui dit donc: « Tu es donc roi? » Jésus répondit: « Tu le dis; en effet je suis roi. C'est pour rendre témoignage à la vérité que je suis né et que je suis venu dans le monde; quiconque est de la vérité écoute ma voix. »
38 ೩೮ ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
Pilate lui dit: « Qu'est-ce que la vérité? » Et en disant cela il sortit derechef pour se rendre auprès des Juifs, et il leur dit: « Pour moi, je ne trouve en lui aucun crime;
39 ೩೯ ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
mais c'est votre coutume que je vous relâche quelqu'un à Pâque, voulez-vous donc que je vous relâche le roi des Juifs? »
40 ೪೦ ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.
Ils s'écrièrent donc derechef: « Non pas celui-ci, mais Barabbas! » Or Barabbas était un brigand.