< ಯೋಹಾನನು 19 >

1 ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.
Тогда Пилат взял Иисуса и велел бить Его.
2 ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,
И воины, сплетши венец из терна, возложили Ему на голову, и одели Его в багряницу,
3 ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.
и говорили: радуйся, Царь Иудейский! и били Его по ланитам.
4 ತರುವಾಯ ಪಿಲಾತನು ಪುನಃ ಹೊರಗೆ ಹೋಗಿ ಯೆಹೂದ್ಯರಿಗೆ, “ನನಗೆ ಅವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲವೆಂಬುದು ನಿಮಗೆ ತಿಳಿಯುವಂತೆ ಅವನನ್ನು ನಿಮ್ಮ ಬಳಿಗೆ ತರುತ್ತೇನೆ ನೋಡಿರಿ” ಎಂದು ಹೇಳಿದನು.
Пилат опять вышел и сказал им: вот, я вывожу Его к вам, чтобы вы знали, что я не нахожу в Нем никакой вины.
5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.
Тогда вышел Иисус в терновом венце и в багрянице. И сказал им Пилат: се, Человек!
6 ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.
Когда же увидели Его первосвященники и служители, то закричали: распни, распни Его! Пилат говорит им: возьмите Его вы и распните; ибо я не нахожу в Нем вины.
7 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
Иудеи отвечали ему: мы имеем закон, и по закону нашему Он должен умереть, потому что сделал Себя Сыном Божиим.
8 ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು,
Пилат, услышав это слово, больше убоялся.
9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.
И опять вошел в преторию и сказал Иисусу: откуда Ты? Но Иисус не дал ему ответа.
10 ೧೦ ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.
Пилат говорит Ему: мне ли не отвечаешь? не знаешь ли, что я имею власть распять Тебя и власть имею отпустить Тебя?
11 ೧೧ ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.
Иисус отвечал: ты не имел бы надо Мною никакой власти, если бы не было дано тебе свыше; посему более греха на том, кто предал Меня тебе.
12 ೧೨ ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
С этого времени Пилат искал отпустить Его. Иудеи же кричали: если отпустишь Его, ты не друг кесарю; всякий, делающий себя царем, противник кесарю.
13 ೧೩ ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.
Пилат, услышав это слово, вывел вон Иисуса и сел на судилище, на месте, называемом Лифостротон, а по-еврейски Гаввафа.
14 ೧೪ ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.
Тогда была пятница перед Пасхою, и час шестой. И сказал Пилат Иудеям: се, Царь ваш!
15 ೧೫ ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.
Но они закричали: возьми, возьми, распни Его! Пилат говорит им: Царя ли вашего распну? Первосвященники отвечали: нет у нас царя, кроме кесаря.
16 ೧೬ ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.
Тогда наконец он предал Его им на распятие. И взяли Иисуса и повели.
17 ೧೭ ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
И, неся крест Свой, Он вышел на место, называемое Лобное, по-еврейски Голгофа;
18 ೧೮ ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
там распяли Его и с Ним двух других, по ту и по другую сторону, а посреди Иисуса.
19 ೧೯ ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
Пилат же написал и надпись и поставил на кресте. Написано было: Иисус Назорей, Царь Иудейский.
20 ೨೦ ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.
Эту надпись читали многие из Иудеев, потому что место, где был распят Иисус, было недалеко от города и написано было по-еврейски, по-гречески, по-римски.
21 ೨೧ ಹೀಗಿರಲಾಗಿ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “‘ಯೆಹೂದ್ಯರ ಅರಸನು’ ಎಂದು ಬರೆಯಬೇಡ, ‘ನಾನು ಯೆಹೂದ್ಯರ ಅರಸನೆಂದು ಹೇಳಿದ್ದಾನೆ’ ಎಂಬುದಾಗಿ ಬರೆಯಬೇಕು” ಎಂದು ಹೇಳಿದರು.
Первосвященники же Иудейские сказали Пилату: не пиши: Царь Иудейский, но что Он говорил: Я Царь Иудейский.
22 ೨೨ ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು.
Пилат отвечал: что я написал, то написал.
23 ೨೩ ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.
Воины же, когда распяли Иисуса, взяли одежды Его и разделили на четыре части, каждому воину по части, и хитон; хитон же был не сшитый, а весь тканый сверху.
24 ೨೪ ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.
Итак сказали друг другу: не станем раздирать его, а бросим о нем жребий, чей будет, - да сбудется реченное в Писании: разделили ризы Мои между собою и об одежде Моей бросали жребий. Так поступили воины.
25 ೨೫ ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.
При кресте Иисуса стояли Матерь Его и сестра Матери Его, Мария Клеопова, и Мария Магдалина.
26 ೨೬ ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು.
Иисус, увидев Матерь и ученика, тут стоящего, которого любил, говорит Матери Своей: Жено! се, сын Твой.
27 ೨೭ ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.
Потом говорит ученику: се, Матерь твоя! И с этого времени ученик сей взял Ее к себе.
28 ೨೮ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.
После того Иисус, зная, что уже все совершилось, да сбудется Писание, говорит: жажду.
29 ೨೯ ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಸ್ಪಂಜನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಆತನ ಬಾಯಿಗೆ ಮುಟ್ಟಿಸಿದರು.
Тут стоял сосуд, полный уксуса. Воины, напоив уксусом губку и наложив на иссоп, поднесли к устам Его.
30 ೩೦ ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.
Когда же Иисус вкусил уксуса, сказал: совершилось! И, преклонив главу, предал дух.
31 ೩೧ ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.
Но так как тогда была пятница, то Иудеи, дабы не оставить тел на кресте в субботу, - ибо та суббота была день великий, - просили Пилата, чтобы перебить у них голени и снять их.
32 ೩೨ ಅದರಂತೆ ಸಿಪಾಯಿಗಳು ಬಂದು ಮೊದಲನೆಯವನ ಕಾಲುಗಳನ್ನು ಅವನ ಜೊತೆಯಲ್ಲಿ ಶಿಲುಬೆಗೆ ಹಾಕಿಸಿಕೊಂಡಿದ್ದ ಮತ್ತೊಬ್ಬನ ಕಾಲುಗಳನ್ನು ಮುರಿದರು.
Итак пришли воины и у первого перебили голени, и у другого, распятого с Ним.
33 ೩೩ ಆದರೆ ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವುದನ್ನು ಅವರು ಕಂಡು ಆತನ ಕಾಲುಗಳನ್ನು ಮುರಿಯಲಿಲ್ಲ.
Но, придя к Иисусу, как увидели Его уже умершим, не перебили у Него голеней,
34 ೩೪ ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
но один из воинов копьем пронзил Ему ребра, и тотчас истекла кровь и вода.
35 ೩೫ ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.
И видевший засвидетельствовал, и истинно свидетельство его; он знает, что говорит истину, дабы вы поверили.
36 ೩೬ ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.
Ибо сие произошло, да сбудется Писание: кость Его да не сокрушится.
37 ೩೭ “ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.
Также и в другом месте Писание говорит: воззрят на Того, Которого пронзили.
38 ೩೮ ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.
После сего Иосиф из Аримафеи - ученик Иисуса, но тайный, из страха от Иудеев, - просил Пилата, чтобы снять тело Иисуса; и Пилат позволил. Он пошел и снял тело Иисуса.
39 ೩೯ ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
Пришел также и Никодим, приходивший прежде к Иисусу ночью, - и принес состав из смирны и алоя, литр около ста.
40 ೪೦ ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
Итак они взяли тело Иисуса и обвили его пеленами с благовониями, как обыкновенно погребают Иудеи.
41 ೪೧ ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
На том месте, где Он распят, был сад, и в саду гроб новый, в котором еще никто не был положен.
42 ೪೨ ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.
Там положили Иисуса ради пятницы Иудейской, потому что гроб был близко.

< ಯೋಹಾನನು 19 >