< ಯೋಹಾನನು 20 >
1 ೧ ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
सप्ताह के पहले दिन, सूर्योदय के पूर्व, जब अंधेरा ही था, मगदालावासी मरियम कंदरा-क़ब्र पर आईं और उन्होंने देखा कि कब्र के प्रवेश द्वार से पत्थर पहले ही हटा हुआ है.
2 ೨ ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
सो वह दौड़ती हुई शिमओन पेतरॉस और उस शिष्य के पास गईं, जो मसीह येशु का प्रियजन था और उनसे कहा, “वे प्रभु को कब्र में से उठा ले गए हैं और हम नहीं जानते कि उन्होंने उन्हें कहां रखा है.”
3 ೩ ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
तब पेतरॉस और वह अन्य शिष्य कब्र की ओर चल पड़े.
4 ೪ ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.
वे दोनों साथ साथ दौड़ रहे थे किंतु वह अन्य शिष्य दौड़ते हुए पेतरॉस से आगे निकल गया और कब्र पर पहले पहुंच गया.
5 ೫ ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
उसने झुककर अंदर झांका और देखा कि वहां कपड़े की पट्टियों का ढेर लगा है किंतु वह भीतर नहीं गया.
6 ೬ ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
शिमओन पेतरॉस भी उसके पीछे-पीछे आए और उन्होंने कब्र में प्रवेश कर वहां कपड़े की पट्टियों का ढेर
7 ೭ ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
और उस अंगोछे को भी, जो मसीह येशु के सिर पर बांधा गया था, कपड़े की पट्टियों के ढेर के साथ नहीं, परंतु अलग स्थान पर रखा हुआ पाया.
8 ೮ ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
तब वह अन्य शिष्य भी, जो कब्र पर पहले पहुंचा था, भीतर गया. उसने देखा और विश्वास किया.
9 ೯ ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
(वे अब तक पवित्र शास्त्र की यह बात समझ नहीं पाए थे कि मसीह येशु का मरे हुओं में से जी उठना ज़रूर होगा.)
10 ೧೦ ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.
तब शिष्य दोबारा अपने-अपने घर चले गए.
11 ೧೧ ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,
परंतु मरियम कब्र की गुफ़ा के बाहर खड़ी रो रही थी. उन्होंने रोते-रोते झुककर कब्र की गुफ़ा के अंदर झांका.
12 ೧೨ ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
उन्होंने देखा कि जिस स्थान पर मसीह येशु का शव रखा था, वहां सफ़ेद कपड़ों में दो स्वर्गदूत बैठे हैं—एक सिर के पास और दूसरा पैर के पास.
13 ೧೩ ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
उन्होंने उनसे पूछा, “तुम क्यों रो रही हो?” उन्होंने उत्तर दिया, “वे मेरे प्रभु को यहां से ले गए हैं और मैं नहीं जानती कि उन्होंने उन्हें कहां रखा है.”
14 ೧೪ ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
यह कहकर वह पीछे मुड़ीं तो मसीह येशु को खड़े देखा किंतु वह पहचान न सकीं कि वह मसीह येशु हैं.
15 ೧೫ ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.
मसीह येशु ने उनसे पूछा, “तुम क्यों रो रही हो? किसे खोज रही हो?” उन्होंने उन्हें माली समझकर कहा, “यदि आप उन्हें यहां से उठा ले गए हैं तो मुझे बता दीजिए कि आपने उन्हें कहां रखा है कि मैं उन्हें ले जाऊं.”
16 ೧೬ ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
इस पर मसीह येशु बोले, “मरियम!” अपना नाम सुन वह मुड़ीं और उन्हें इब्री भाषा में बुलाकर कहा “रब्बूनी!” (अर्थात् गुरुवर.)
17 ೧೭ ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
मसीह येशु ने उनसे कहा, “मुझे पकड़े मत रहो, क्योंकि मैं अब तक पिता के पास ऊपर नहीं गया हूं, किंतु मेरे भाइयों को जाकर सूचित कर दो, ‘मैं अपने पिता और तुम्हारे पिता तथा अपने परमेश्वर और तुम्हारे परमेश्वर के पास ऊपर जा रहा हूं.’”
18 ೧೮ ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
मगदालावासी मरियम ने आकर शिष्यों के सामने घोषणा की: “मैंने प्रभु को देखा है.” और उसने शिष्यों को वह सब बताया, जो प्रभु ने उससे कहा था.
19 ೧೯ ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
उसी दिन, जो सप्ताह का पहला दिन था, संध्या समय यहूदी अगुओं से भयभीत शिष्य द्वार बंद किए हुए कमरे में इकट्ठा थे. मसीह येशु उनके बीच आ खड़े हुए और बोले, “तुममें शांति बनी रहे.”
20 ೨೦ ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
यह कहकर उन्होंने उन्हें अपने हाथ और पांव दिखाए. प्रभु को देखकर शिष्य आनंद से भर गए.
21 ೨೧ ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
इस पर मसीह येशु ने दोबारा उनसे कहा, “तुममें शांति बनी रहे. जिस प्रकार पिता ने मुझे भेजा है, मैं भी तुम्हें भेजता हूं”
22 ೨೨ ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.
तब उन्होंने उन पर फूंका और उनसे कहा, “पवित्र आत्मा ग्रहण करो.
23 ೨೩ ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
यदि तुम किसी के पाप क्षमा करोगे, उनके पाप क्षमा किए गए हैं और जिनके पाप तुम क्षमा नहीं करोगे, वे अपने पापों में बंधे रहेंगे.”
24 ೨೪ ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.
जब मसीह येशु अपने शिष्यों के पास आए थे, उस समय उनके बारह शिष्यों में से एक शिष्य थोमॉस, जिनका उपनाम दिदुमॉस था, वहां नहीं थे.
25 ೨೫ ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.
अन्य शिष्य उनसे कहते रहे, “हमने प्रभु को देखा है.” इस पर थोमॉस उनसे बोले, “जब तक मैं उनके हाथों में कीलों के वे चिह्न न देख लूं और कीलों से छिदे उन हाथों में अपनी उंगली और उनकी पसली में अपना हाथ डालकर न देख लूं, तब तक मैं विश्वास कर ही नहीं सकता.”
26 ೨೬ ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”
आठ दिन के बाद मसीह येशु के शिष्य दोबारा उस कक्ष में इकट्ठा थे और इस समय थोमॉस उनके साथ थे. सारे द्वार बंद होने पर भी मसीह येशु उनके बीच आ खड़े हुए और उनसे कहा, “तुममें शांति बनी रहे.”
27 ೨೭ ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
तब उन्होंने थोमॉस की ओर मुख कर कहा, “अपनी उंगली से मेरे हाथों को छूकर देखो और अपना हाथ बढ़ाकर मेरी पसली में डालो; अविश्वासी न रहकर, विश्वासी बनो.”
28 ೨೮ ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
थोमॉस बोल उठे, “मेरे प्रभु! मेरे परमेश्वर!”
29 ೨೯ ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
मसीह येशु ने उनसे कहा, “तुमने तो विश्वास इसलिये किया है कि तुमने मुझे देख लिया, धन्य हैं वे, जिन्होंने मुझे नहीं देखा फिर भी विश्वास किया.”
30 ೩೦ ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.
मसीह येशु ने अपने शिष्यों के सामने अनेक अद्भुत चिह्न दिखाए, जिनका वर्णन इस पुस्तक में नहीं है
31 ೩೧ ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
परंतु ये, जो लिखे गए हैं, इसलिये कि तुम विश्वास करो कि येशु ही वह मसीह हैं, वही परमेश्वर के पुत्र हैं और इसी विश्वास के द्वारा तुम उनमें जीवन प्राप्त करो.