< ಯೋಹಾನನು 21 >
1 ೧ ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
Seinna birtist Jesús lærisveinunum á ný og þá við Galíleuvatnið. Það gerðist á þennan hátt:
2 ೨ ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
Nokkrir okkar voru þar, Símon Pétur, Tómas, „tvíburinn“, Natanael frá Kana í Galíleu, Jakob bróðir minn og ég, og tveir aðrir lærisveinar.
3 ೩ ಆಗ ಅವರಿಗೆ ಸೀಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ” ಎಂದು ಹೇಳಲು ಅವರು ಅವನಿಗೆ, “ನಾವೂ ಸಹ ನಿನ್ನ ಜೊತೆಯಲ್ಲಿ ಬರುತ್ತೇವೆ” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.
„Ég ætla út að fiska, “sagði Símon Pétur. „Við komum með þér, “sögðum við hinir. Við fórum en urðum ekki varir alla nóttina.
4 ೪ ಬೆಳಗಾಗುವಾಗ ಯೇಸು ದಡದಲ್ಲಿ ನಿಂತಿದ್ದನು. ಆದಾಗ್ಯೂ ಶಿಷ್ಯರು ಆತನನ್ನು ಯೇಸುವೇ ಎಂದು ಗುರುತಿಸಲಿಲ್ಲ.
Við sólarupprás sáum við mann standa á ströndinni en við þekktum hann ekki.
5 ೫ ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.
Hann kallaði til okkar og sagði: „Hafið þið fengið nokkuð, drengir?“„Nei, “svöruðum við.
6 ೬ ಆತನು ಅವರಿಗೆ, “ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ” ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
„Kastið þá netinu hægra megin við bátinn og þá munuð þið fáʼann!“kallaði hann. Þetta gerðum við og þá fylltist netið af fiski og var mergðin slík að við gátum ekki innbyrt það.
7 ೭ ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.
Þá sagði ég við Pétur: „Þetta er Drottinn!“Þá snaraði Pétur sér úr treyjunni, stökk út í og synti að landi.
8 ೮ ದಡವು ದೂರವಿರಲಿಲ್ಲ, ಹೆಚ್ಚು ಕಡಿಮೆ ಇನ್ನೂರು ಅಡಿ ದೂರವಿತ್ತು. ಉಳಿದ ಶಿಷ್ಯರು ಮೀನು ತುಂಬಿದ್ದ ಆ ಬಲೆಯನ್ನು ಎಳೆಯುತ್ತಾ ದೋಣಿಯಲ್ಲಿಯೇ ಬಂದರು.
Við hinir vorum kyrrir í bátnum og drógum netið, sem var alveg fullt, á eftir okkur þennan spöl, sem við áttum ófarinn í land.
9 ೯ ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
Þegar þangað kom, sáum við að þar hafði verið kveiktur eldur. Einnig var þar steiktur fiskur og brauð.
10 ೧೦ ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
„Komið hingað með nokkra af fiskunum, sem þið veidduð, “sagði Jesús.
11 ೧೧ ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
Símon Pétur fór þá og dró netið á land og taldi úr því 153 stóra fiska. En þótt fjöldinn væri slíkur, hafði netið ekki rifnað.
12 ೧೨ ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
„Komið, við skulum fá okkur að borða, “sagði Jesús. Enginn okkar þorði að spyrja hann, hvort hann væri Drottinn í raun og veru, við vorum reyndar vissir um að svo væri.
13 ೧೩ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.
Og hann skipti á milli okkar fiskunum og brauðinu.
14 ೧೪ ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.
Þetta var í þriðja sinn sem Jesús birtist okkur eftir upprisuna.
15 ೧೫ ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು.
Að morgunverðinum loknum, sagði Jesús við Símon Pétur: „Símon Jónasson, elskar þú mig meira en þeir hinir?“„Já, “svaraði Pétur, „þú veist að ég elska þig.“Þá sagði Jesús við hann: „Gættu lamba minna.“
16 ೧೬ ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
Jesús endurtók spurninguna og sagði: „Símon Jónasson, elskar þú mig í raun og veru?“„Já, Drottinn, “svaraði Pétur, „þú veist að ég elska þig.“„Annastu sauði mína, “sagði Jesús.
17 ೧೭ ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
Og í þriðja sinn spurði Jesús hann: „Símon Jónasson, ert þú sannur vinur minn?“Pétur varð hryggur þegar hann heyrði Jesú spyrja þess sama í þriðja sinn og svaraði: „Drottinn, þú þekkir hjarta mitt og veist að ég elska þig.“„Gæt þú sauða minna, “svaraði Jesús.
18 ೧೮ “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.
Síðan bætti hann við og sagði: „Þegar þú varst ungur, gerðirðu það sem þig langaði til og fórst hvert sem þú vildir. En þegar þú eldist muntu verða að rétta út hendur þínar og aðrir munu taka þig með valdi og fara með þig þangað sem þú vilt ekki.“
19 ೧೯ ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Þetta sagði Jesús til að láta hann vita með hvaða hætti hann mundi deyja og vegsama Guð. Síðan sagði Jesús við hann: „Fylgdu mér!“
20 ೨೦ ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ.
Pétur sneri sér þá við og sá mig, lærisveininn sem Jesús elskaði, koma á eftir sér, en það var ég sem hafði hallað mér upp að Jesú við kvöldmáltíðarborðið og spurt: „Meistari, hver af okkur mun svíkja þig?“
21 ೨೧ ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
Pétur spurði því Jesú: „Hvað með hann, Drottinn? Hvernig mun hann deyja?“
22 ೨೨ ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Jesús svaraði: „Hvað varðar þig um það, ef ég vil að hann lifi þangað til ég kem aftur? En þú skalt fylgja mér.“
23 ೨೩ ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.
Þetta varð til þess að sá orðrómur barst út meðal bræðranna að þessi lærisveinn mundi ekki deyja, en það hafði Jesús ekki sagt. Hann sagði aðeins: „Hvað varðar þig um það, ef ég vil að hann lifi þangað til ég kem aftur?“
24 ೨೪ ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.
Ég er þessi lærisveinn! Ég sá þessa atburði gerast og hef ritað um þá hér. Við vitum að frásögn mín er sönn.
25 ೨೫ ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
Ég býst við að heimurinn mundi varla rúma allar þær bækur sem til yrðu, ef skrifa ætti allt sem gerðist í lífi Jesú.