< ಯೋಹಾನನು 3 >
1 ೧ ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
Серед фарисеїв був чоловік, на ім’я Никодим, один з юдейських керівників.
2 ೨ ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
Він прийшов до Ісуса вночі та сказав: ―Равві, ми знаємо, що Ти Вчитель, Який прийшов від Бога, бо ніхто не може робити таких знамень, які Ти робиш, якщо Бог не з ним.
3 ೩ ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
Ісус відповів: ―Істинно кажу тобі: якщо хтось не народиться знову, не може побачити Царства Божого.
4 ೪ ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
Никодим сказав Йому: ―Як може людина народитися знову, якщо вона вже стара? Адже не може вона знов увійти в утробу своєї матері та народитися?
5 ೫ ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
Ісус відповів: ―Істинно кажу тобі: якщо хтось не народиться від води та Духа, не може увійти до Царства Божого.
6 ೬ ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
Те, що народжене від плоті, є плоттю, а народжене від Духа є духом.
7 ೭ ‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
Не дивуйся, що Я сказав тобі: вам треба народитися знову.
8 ೮ ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
Вітер віє, де хоче, ти чуєш його, але не бачиш, звідки він приходить і куди йде. Так само і з кожним, хто народжений від Духа.
9 ೯ ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
Никодим у відповідь сказав: ―Як це може статися?
10 ೧೦ ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
Ісус відповів: ―Ти – учитель Ізраїля й не знаєш цього?
11 ೧೧ ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
Істинно кажу тобі: ми говоримо про те, що знаємо, свідчимо про те, що бачили, але ви не приймаєте нашого свідчення.
12 ೧೨ ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
Якщо Я сказав вам про земні речі, і ви не повірили, як же ви повірите, якщо Я скажу про небесне?
13 ೧೩ ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
Ніхто не піднімався на небо, окрім Того, Хто зійшов із неба, – Сина Людського, Який є на небі.
14 ೧೪ ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
І як Мойсей підняв змія в пустелі, так має бути піднятий і Син Людський,
15 ೧೫ ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. (aiōnios )
щоб кожний, хто повірить у Нього, мав життя вічне. (aiōnios )
16 ೧೬ “ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. (aiōnios )
Бо так полюбив Бог світ, що віддав Свого Єдинородного Сина, щоб кожний, хто вірує в Нього, не загинув, але мав життя вічне. (aiōnios )
17 ೧೭ ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
Адже Бог послав Сина у світ не для того, щоб засудити світ, але для того, щоб спасти світ через Нього.
18 ೧೮ ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
Хто вірить у Нього, не буде засуджений, а хто не вірить, той уже засуджений, бо він не повірив в ім’я Єдинородного Сина Божого.
19 ೧೯ ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
У цьому полягає суд: світло прийшло у світ, але люди полюбили більше темряву, ніж світло, бо їхні вчинки були погані.
20 ೨೦ ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
Адже кожний, хто чинить зло, ненавидить світло й не приходить до світла, щоб не викрились його вчинки.
21 ೨೧ ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
А хто живе в істині, той приходить до світла, щоб розкрилися його вчинки, бо були зроблені в Бозі.
22 ೨೨ ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
Після цього Ісус разом зі Своїми учнями пішов до землі юдейської. Він перебував там деякий час та хрестив.
23 ೨೩ ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
Іван також продовжував хрестити в Еноні, що біля Салима, бо там було багато води. Люди продовжували приходити до нього, і він хрестив їх.
24 ೨೪ ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
На той час Іван ще не був вкинутий до в’язниці.
25 ೨೫ ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
Між деякими учнями Івана та одним юдеєм виникла суперечка щодо очищення.
26 ೨೬ ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
Вони прийшли до Івана й сказали йому: ―Равві, ось Той, Хто був із тобою на тому боці Йордану й про Кого ти свідчив, зараз Сам хрестить, і всі йдуть до Нього.
27 ೨೭ ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
Іван сказав у відповідь: ―Не може людина прийняти нічого, якщо не дано їй з неба.
28 ೨೮ ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
Ви самі свідки того, що я казав: «Я не Христос, я посланий перед Ним».
29 ೨೯ ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
Хто має наречену, той є нареченим. Друг нареченого стоїть, слухає та радіє від голосу нареченого. Отже, у цьому й моя радість, і зараз вона сповнилась.
30 ೩೦ ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
Йому належить зростати, а мені меншати.
31 ೩೧ ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
Той, Хто приходить згори, величніший за всіх. Земний же належить до землі й говорить по-земному. Той, Хто приходить із неба, величніший за всіх.
32 ೩೨ ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
Він свідчить про все, що бачив та чув, але ніхто не приймає Його свідчення.
33 ೩೩ ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
Той, хто приймає Його свідчення, той засвідчив, що Бог істинний.
34 ೩೪ ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
Адже Той, Кого надіслав Бог, говорить слова Божі, тому що [Бог] дає Йому Духа без міри.
35 ೩೫ ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
Отець любить Сина й усе віддав у Його руки.
36 ೩೬ ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” (aiōnios )
Хто вірить у Сина, той має життя вічне, а хто не вірить у Сина, той не побачить життя, і гнів Божий залишається на ньому. (aiōnios )