< ಯೋಹಾನನು 5 >
1 ೧ ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.
Apre sa, jwif yo te gen yon fèt nan tanp lan. Jezi moute Jerizalèm.
2 ೨ ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.
Nan lavil la, bò Pòtay Mouton yo, te gen yon gwo basen dlo yo te rele nan lang ebre: Betzata. Te gen senk pòt ki te bay sou li.
3 ೩ ಇವುಗಳಲ್ಲಿ ಅಸ್ವಸ್ಥರೂ, ರೋಗಿಗಳೂ, ಕುರುಡರೂ, ಕುಂಟರೂ, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. (ನೀರು ಕಲಕುವುದನ್ನು ಕಾದುಕೊಂಡು ಅಲ್ಲಿ ಬಿದ್ದುಕೊಂಡಿರುತ್ತಿದ್ದರು. ಆಗಾಗ ಒಬ್ಬ ದೂತನು ಬಂದು ಕೊಳದ ನೀರನ್ನು ಕಲಕಿಹೊಗುತ್ತಿದ್ದನು. ಆಗ ಮೊದಲು ಯಾರು ಕೊಳದೊಳಗೆ ಇಳಿಯುತ್ತಿದ್ದರೋ ಅವರ ರೋಗವು ವಾಸಿಯಾಗುತ್ತಿತ್ತು.)
Devan pòt yo, te gen anpil moun ki te gen tout kalite maladi kouche la: gen sa ki te avèg, gen sa ki t'ap bwete, gen sa ki te paralize. Yo tout yo t'ap tann lè dlo a pran bouyi.
Paske, tanzantan, yon zanj Bondye te desann nan basen an vin brase dlo a. Premye moun malad ki te desann nan dlo a apre zanj lan te fin brase l' la te geri, nenpòt ki maladi li te genyen.
5 ೫ ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
Te gen yon nonm la ki te malad depi trantwitan.
6 ೬ ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
Jezi wè l' kouche. Li vin konnen li te malad depi tout tan sa a. Li mande li: Eske ou vle geri?
7 ೭ ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
Malad la reponn li: Mèt, mwen pa gen pesonn pou mete m' nan basen an lè dlo a ap bouyi. Lè mwen fè sa pou m' ale, yon lòt gen tan desann anvan mwen.
8 ೮ ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.
Jezi di li: Leve non. Pran nat ou, mache ou ale.
9 ೯ ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
Menm lè a, nonm lan geri. Li ranmase nat li, li pran mache. Men, jou sa fèt la se te yon jou repo.
10 ೧೦ ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
Jwif yo di nonm ki te geri a: Jòdi a se jou repo. Lalwa nou an pa pèmèt pou w'ap pote nat ou jòdi a.
11 ೧೧ ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.
Li reponn yo: Se moun ki geri m' lan wi ki di m' ranmase nat mwen, mache m' ale.
12 ೧೨ ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
Lè sa a, yo mande li: Kilès sa a ki di ou ranmase nat ou, mache ou ale a?
13 ೧೩ ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
Men, nonm ki te geri a pa t' konnen ki moun li te ye, paske te sitèlman gen moun la, Jezi te gen tan pati al fè wout li.
14 ೧೪ ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
Pita, Jezi kontre nonm lan nan tanp lan. Li di li konsa: Koute non. Koulye a ou wè ou geri, pa fè peche, tande, pou bagay pi mal pa rive ou.
15 ೧೫ ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
Nonm lan al di jwif yo se Jezi ki te geri li.
16 ೧೬ ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
Se poutèt sa jwif yo tanmen pèsekite Jezi paske li te fè sa yon jou repo.
17 ೧೭ ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.
Men, Jezi reponn yo: Se tout tan Papa m' ap travay. Mwen menm tou, m'ap travay.
18 ೧೮ ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
Poutèt pawòl sa a, jwif yo t'ap chache pi rèd atò pou yo te touye l'. Li pa t' sèlman fè bagay ki kont lalwa repo a, men li te di yo Bondye se papa li. Lè l' di sa, li te fè tèt li pase pou menm moun ak Bondye.
19 ೧೯ ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
Lè sa a, Jezi reponn yo: Sa m'ap di nou la a, se vre wi: Pitit Bondye a pa fè anyen pou kò li. Sa l' wè Papa a fè, se sa l' fè tou. Tou sa Papa a ap fè, Pitit la fè l' tou.
20 ೨೦ ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.
Papa a renmen Pitit la, li moutre l' tou sa li menm l'ap fè. Li gen pou l' moutre l' fè bagay ki pi estwòdenè pase sa. Lè sa a, nou p'ap manke sezi.
21 ೨೧ ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.
Papa a fè moun mouri leve, li ba yo lavi ankò. Konsa tou, Pitit la bay moun li vle lavi.
22 ೨೨ ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ.
Papa a pa jije pesonn, men li bay Pitit la tout pouvwa pou jije.
23 ೨೩ ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
Konsa, tout moun va gen respè pou Pitit la, menm jan yo gen respè pou Papa a. Moun ki pa respekte Pitit la, li pa gen respè pou Papa ki voye l' la non plis.
24 ೨೪ ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ. (aiōnios )
Sa m'ap di nou la a, se vre wi: Yon moun ki koute pawòl mwen, ki mete konfyans nan moun ki voye m' lan, l'ap gen lavi ki p'ap janm fini an. Yo p'ap kondannen li. Li deja soti nan lanmò, li antre nan lavi. (aiōnios )
25 ೨೫ ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.
Sa m'ap di nou la a, se vre wi: Lè a ap rive, li rive deja: moun mouri yo pral tande vwa Pitit Bondye a. Tout moun mouri ki va tande vwa sa a pral gen lavi.
26 ೨೬ ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.
Papa a gen pouvwa pou l' bay lavi. Konsa tou, li bay Pitit la pouvwa pou bay lavi tou.
27 ೨೭ ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.
Li bay Pitit la otorite pou jije, paske Pitit la, se Moun Bondye voye nan lachè a.
28 ೨೮ ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,
Nou pa bezwen sezi. Lè a pral rive: tout mò ki nan tonm pral tande vwa li,
29 ೨೯ ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
yo pral leve soti vivan nan tonm yo. Moun ki fè sa ki byen pral leve pou resevwa lavi ki p'ap janm fini an. Men, tout moun ki fè sa ki mal pral leve pou resevwa kondannasyon yo.
30 ೩೦ “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
Mwen pa kapab fè anyen pou kò mwen. M'ap jije dapre sa Bondye di mwen. Jijman mwen bon paske sa m'ap chache fè a se pa sa m' vle, men sa moun ki voye m' lan vle.
31 ೩೧ ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
Si m' pale tèt mwen byen, moun pa ka asepte sa m'ap di a pou verite.
32 ೩೨ ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
Men, se yon lòt k'ap pale byen sou mwen. Mwen konnen sa l'ap di sou mwen an, se verite.
33 ೩೩ ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
Nou te voye moun bò kot Jan. Li te di nou verite a jan l' ye a.
34 ೩೪ ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
Mwen menm poutèt pa m', mwen pa bezwen pesonn pale pou mwen. Men, mwen di nou sa pou nou kapab sove.
35 ೩೫ ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
Jan te tankou yon lanp yo limen ki klere byen bèl. Pou yon tan, nou te byen kontan pwofite limyè li a.
36 ೩೬ ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
Men, pou mwen menm, mwen gen yon lòt bagay ki pale an favè m' ki pi bon toujou pase sa Jan te di sou mwen an. Se travay m'ap fè a, travay Papa m' ban m' fè a ki pale pou mwen. Sa fè wè se Papa a ki voye mwen.
37 ೩೭ ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
Papa ki voye m' lan, li menm tou l'ap pale an favè mwen. Nou pa janm tande vwa l', ni nou pa janm wè figi li.
38 ೩೮ ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.
Nou pa kenbe pawòl li yo nan kè nou, paske nou pa kwè nan moun li voye a.
39 ೩೯ ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ. (aiōnios )
N'ap plede etidye sa ki ekri nan Liv la, paske nou mete nan tèt nou nou ka jwenn lavi ki pa janm fini an ladan li. Men, se Liv sa a menm ki pale sou mwen. (aiōnios )
40 ೪೦ ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.
Malgre sa, nou pa vle vin jwenn mwen pou nou ka gen lavi tout bon an.
41 ೪೧ “ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,
Mwen p'ap chache lwanj nan men lèzòm.
42 ೪೨ ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.
Men, mwen konnen ki moun nou ye: nou pa gen renmen pou Bondye nan kè nou.
43 ೪೩ ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.
Se Papa m' ki voye mwen. Men, nou pa vle resevwa mwen. Men, kite yon lòt moun vin pou kont li, n'ap resevwa li.
44 ೪೪ ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
Nou renmen resevwa lwanj yonn nan men lòt, nou pa chache lwanj ki soti nan men Bondye ki pa gen parèy la. Nan kondisyon sa a, ki jan pou nou kwè?
45 ೪೫ ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!
Pa mete nan tèt nou mwen pral akize nou devan Papa mwen. Se Moyiz ki pral akize nou, Moyiz nou di ki tout espwa nou an.
46 ೪೬ ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.
Si nou te kwè tout bon nan Moyiz, nou ta kwè nan mwen tou, paske li ekri sou mwen tou.
47 ೪೭ ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.
Men, nou pa kwè nan sa l' te ekri a. Ki jan pou n' ta fè kwè sa m'ap di nou an?