< ಯೋಹಾನನು 6 >
1 ೧ ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
Hi teng zawkciang in, Jesus sia Galilee tuili ah pai hi, tua mun sia Tiberias tuili a hihi.
2 ೨ ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
Taciang mihon tampi in Ama zui uh hi, banghangziam cile cina te tung ah a vawt nalamdang te a mu uh hang a hihi.
3 ೩ ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
Jesus sia mual tung ah kato a, tua mun ah nungzui te taw to khawm uh hi.
4 ೪ ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
Taciang Judah te paisanpoai hong nai zo hi.
5 ೫ ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
Jesus khua a dak ciang in mihon tampi Ama kung ah hongpai mu a, Philip kung ah, Hi te i neak tu anluum koisung pan lei tu ziam? ci hi.
6 ೬ ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
Hibang in a ci sia Philip a ze-et nop hang a hihi: banghangziam cile Ama in bang ka seam tu ci hekhol zo hi.
7 ೭ ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
Philip in, mi khatsim in tawm tek ne tu ahizong, dangka za ni man anluum zong kicing zo ngawl tu hi, ci zo hi.
8 ೮ ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
A nungzui te sung pan khat, Simon Peter suapui pa Andrew in,
9 ೯ “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
Hiak ah patang khat om a, ama in bali anluum nga le ngasa no ni nei hi: ahihang mihing tam mama sung ah, bang son thamman tu ziam? ci hi.
10 ೧೦ ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
Jesus in, Mipi te tosak vun, ci hi. Tua mun ah lopa tam mama om hi. Tua ahikom mipite to uh a, tul nga bang pha uh hi.
11 ೧೧ ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
Jesus in anluum te la a; lungdam a ko zawkciang in, a nungzui te kung ah hawmsak hi, taciang a nungzui te in a to te hawmsak hi; tasia bangma in ngasa te zong amate dei za in hawmsak hi.
12 ೧೨ ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
Amate a kham zawk uh ciang, Jesus in a nungzui te kung ah, Bangma bo thong ngawl tu in a omlai teng kaikhawm tavun, ci hi.
13 ೧೩ ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
Tua ahikom bali anluum nga a neak zawk uh ciang in a neak mong uh teng amate in tawm uh a, a kaikhop uh ciang in, bawm sawm le bawm ni dim hi.
14 ೧೪ ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
Amate in Jesus i sep nalamdang te a mu uh ciang in, leitung ah hongpai tu hi, a kici kamsang sia Ama tatak hi, ci uh hi.
15 ೧೫ ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
Tua ahikom Jesus in, amate hongpai in zawthawk thu taw kumpi hong seamsak tu hi, ci a heak ciang in, mualtung ah ama nguak pai hi.
16 ೧೬ ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
Nitak sang ciang in, Jesus a nungzui te tuili sang ah tuaksuk uh hi,
17 ೧೭ ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
Ngunkuang sung ah to uh a, tuili ngalkhat Capernaum sang ah pai uh hi. Taciang khuazin ciang in Jesus sia amate kung ah hongpai hi.
18 ೧೮ ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
Hui nasiatak in hong va ahikom, tuihual te kilok ngawp hi.
19 ೧೯ ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
Tua ahikom amate in ngunkuang sia tai thum tai li bang a hot zawk uh ciang, Jesus sia tuitung ah lampai in, ngunkuang sang ah hong nai va-ial a mu uh ciang in amate lau mama uh hi.
20 ೨೦ ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
Ahihang Jesus in amate tung ah, Keima khi hi; lau heak vun, ci hi.
21 ೨೧ ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
Tua zawkciang in amate in Jesus sia lungdamtak in ngunkuang sung ah tosak uh hi: taciang ngunkuang zong amate pai natu ngam ah tawmvei sung in theng hi.
22 ೨೨ ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
A zingciang in, tuili ngalkhat sang ah a ding te in Jesus nungzui te i to na simngawl, ngunkuang dang om ngawl hi, ci mu uh hi, taciang Jesus sia a nungzui te taw ngunkuang sung ah tum ngawl hi, ahihang a nungzui te amate bek pai uh hi;
23 ೨೩ ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
Ahihang Topa in lungdam a ko zawkciang in, anluum a neak tek na uh Tiberias nai pan in ngunkuang dangte hongpai hi.
24 ೨೪ ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
Tua ahikom, mite in Jesus le a nungzui te tua mun ah om ngawl hi, ci a mu uh ciang in, amate zong ngunkuang to uh a, Jesus zong tu in Capernaum ah pai tek uh hi.
25 ೨೫ ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
Amate in tuili ngalkhat ah, Jesus a mu uh ciang in, Rabbi, hiak ah bang hun in pai ni ziam? ci uh hi.
26 ೨೬ ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
Jesus in, A tatak in kong ci hi, nalamdang na mu uh hang bek in hong zong na hi bua uh a, anluum khamteak in na neak uh hang in hong zong nu hi.
27 ೨೭ ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. (aiōnios )
A kisia thei an atu in naseam heak vun, ahihang tawntung nuntakna ciangdong a kho tu, mihing Tapa in note tung ah hongpiak tu an atu in seam zaw vun: banghangziam cile Pa Pathian in ceptena khen zo hi, ci hi. (aiōnios )
28 ೨೮ ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
Tua zawkciang in amate in, Pathian nasep te ka sep thei natu uh in bang seam tu khu ziam? ci uh hi.
29 ೨೯ ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
Jesus in amate tung ah, A ki sawl pa na um uh le Pathian naseam na hi uh hi, ci in zo hi.
30 ೩೦ ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
Amate in, mu in ka up thei natu uh in, bang musakna hong lak tu ni ziam? a bang vawt tu ni ziam?
31 ೩೧ ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
Laithiangtho sung ah a ki atsa bang in, ka pa te uh in senneal ngam ah mana ne ngei uh hi; ama in neak tu in vanpan in anluum pia hi, ci uh hi.
32 ೩೨ ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
Jesus in, A tatak in kong ci hi, Moses in van pan in anluum hong pia ngawl hi; ahihang ka Pa in van pan in anluum tatak note hong pia hi.
33 ೩೩ ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
Banghangziam cile Pathian i hongpiak anluum sia vantung pan in tuaksuk a, leitung ah a nuntakna pia tu pa a hihi, ci hi.
34 ೩೪ ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
Amate in, Topa awng, hi anluum sia a tawntung in hong pia tan, ci uh hi.
35 ೩೫ ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.
Jesus in amate tung ah, Keima sia nuntakna anluum ka hihi: ka kung hongpai peuma a ngilkial kik nawn ngawl tu hi; keima hong um peuma a dangtak kik nawn ngawl tu hi.
36 ೩೬ ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
Ahihang ka sonsa bang in, note in hong mu zo napi, hong um ngawl nu hi.
37 ೩೭ ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
Pa in hongpiak theampo ka kung ah hongpai tu hi; taciang ka kung hongpai peuma ka hawlkhia ngei batu hi.
38 ೩೮ ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
Banghangziam cile keima deina bang seam tu in vantung pan kong tuaksuk bua hi, ahihang hong sawlpa deina seam tu in hong tuaksuk ka hihi.
39 ೩೯ ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
Keima hongpiak theampo khatzong bosua ngawl tu in, ni tawpkhak ni ciang, thawkiksak tu sia keima hong sawlpa i deina a hihi.
40 ೪೦ ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. (aiōnios )
Tapa a mu peuma in ama um a, tawntung nuntakna nei tu le ni tawpkhak ni ciang in keima in ka thawkiksak tu sia keima hong sawlpa i deina a hihi, ci hi. (aiōnios )
41 ೪೧ ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
Keima sia vantung pan hong tuaksuk anluum ka hihi, a ci hu in Judah mite phun uh hi.
42 ೪೨ “ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
Taciang amate in, hi Jesus sia Joseph i tapa hi ngawl ziam, a pa le a nu te zong i heak hi ngawl ziam? bangbang in van pan in hong tuaksuk khi hi, ci thei ziam? ci uh hi.
43 ೪೩ ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.
Tua ahikom Jesus in, Note sung ah phun teaptup heak vun,
44 ೪೪ “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
Keima hong sawlpa in hong kai bale, kuama ka kung ah hongpai thei ngawl hi: taciang keima in ni tawpkhak ni ciang in ka thokiksak tu hi.
45 ೪೫ ‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
Kamsang te laibu sung ah, amate a vekpi in Pathian i hil te hi tu uh hi. Tua ahikom a za peuma le Pa kung pan a sin te ka kung ah hongpai hi, ci in atkhol hi.
46 ೪೬ ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.
Hibang ka ci ciang in, khatpo in Pa mu zo hi, cinopna hi ngawl hi, Pathian kung pan in hongpaipa bekma in Pa a mu hi.
47 ೪೭ ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. (aiōnios )
A tatak in kong ci hi, keima hong um peuma in tawntung nuntakna nei hi. (aiōnios )
Keima sia tua nuntakna anluum ka hihi.
49 ೪೯ ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
Na pa te uh in senneal ngamsung ah mana ne napi uh a, thi siat veve hi.
50 ೫೦ ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.
Hisia in vantung pan hong tuaksuk anluum a hihi, tua anluum a ne peuma a thi bua tu hi.
51 ೫೧ ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. (aiōn )
Keima in vantung pan hongpai a nungta anluum ka hihi. Khat po in hi anluum a ne le nungta tawntung tu hi, taciang ka piak tu anluum zong ka taksa hi a, tua in leitung mite nuntakna atu ka piak a hihi, ci in zo hi. (aiōn )
52 ೫೨ ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
Tua ahikom Judah mite in, hisia pa in bangbang in a taksa sia neak tu in hong pia thei tu ziam? ci in amate le amate ki nial uh hi.
53 ೫೩ ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
Tua zawkciang in Jesus in amate tung ah, A tatak in kong ci hi, mihing Tapa i taksa na ne bua uh a, a thisan na dawn bua uh le, na sung uh ah nuntak na nei bua uh hi.
54 ೫೪ ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. (aiōnios )
A kuamapo in ka taksa ne a, ka thisan a dawn peuma in, tawntung nuntakna nei hi; taciang ni tawpkhak ni ciang in ka thokiksak tu hi. (aiōnios )
55 ೫೫ ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.
Banghangziam cile ka taksa sia an tatak hi a, ka thisan sia dawn tu tatak a hihi.
56 ೫೬ ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
Ka taksa ne a, ka thisan a dawn peuma sia, keima sung ah om hi, taciang keima zong ama sung ah ka om hi.
57 ೫೭ ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.
A nungta Pa in kei hong sawl a, taciang Pa hang in ka nungta hi: tua ahikom ka taksa a ne peuma, keima hang in nungta tu hi.
58 ೫೮ ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. (aiōn )
Hi thu sia vantung pan hong tuaksuk anluum a hihi: na pate uh mana ne a, a thi uh bang hi ngawl hi: hi anluum a ne peuma a tawntung in nungta tu hi, ci hi. (aiōn )
59 ೫೯ ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
Hi thu te sia Capernaum khua synagogue sung ah thu a hil lai in, ahil thu a hihi.
60 ೬೦ ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.
Tua ahikom a nungzui tampi te in hi thu a zak uh ciang in, hi thu haksa lei hi; a kua in ngai zo tu ziam? ci uh hi.
61 ೬೧ ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?
Jesus in a nungzui te phun uh hi, ci a heak ciang in, amate tung ah, Hi thu in hong puksak ziam?
62 ೬೨ ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
Mihing Tapa sia ama omna ah a kato mu le uhte, bang na ci tu uh ziam?
63 ೬೩ ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
Nuntakna a pia sia Pathian i Thaa a hihi; cilesa sia bangma phattuamna nei ngawl hi: note tung ah kong son kammal te sia, thaa le nuntakna a hihi.
64 ೬೪ ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
Ahihang note sung ah mi pawlkhat te in na um bua uh hi, ci hi. Banghangziam cile Jesus in a kipatcil pan kipan in a um ngawl te le, ama a leheak tu sia a heakkholsa hi zo hi.
65 ೬೫ ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
Tua ahikom kong ci hi, Pa in hongpiak te simngawl kuama ka kung ah hongpai thei ngawl hi, ci hi.
66 ೬೬ ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.
Tua hun pan kipan in nungzui tampi te heakkik uh a, Ama taw ki thawl nawn ngawl uh hi.
67 ೬೭ ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
Tua zawkciang in Jesus in a nungzui sawmleni te kung ah, Note zong nong paisan nuam uh ziam? ci hi.
68 ೬೮ ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. (aiōnios )
Simon Peter in, Topa awng, a kua kung ah pai tu khu ziam? nangma in tawntung nuntakna kammal te na nei hi. (aiōnios )
69 ೬೯ ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
Nangma sia a nungta Pathian Tapa Christ na hihi, ci sia um in ka he uh hi, ci in zo hi.
70 ೭೦ ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.
Jesus in, Sawmle ni hong teal hi ngawl khi ziam? taciang note sung ah khat sia doai a hihi, ci in zo hi.
71 ೭೧ ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.
Ama in Simon tapa Judah Iscariot thu a son a hihi: banghangziam cile nungzui sawmleni sung pan khat hi napi, Ama a leheak pa a hihi.