< ಯೋಹಾನನು 9 >
1 ೧ ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
Og da han gikk videre, så han en mann som var født blind.
2 ೨ ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
Og hans disipler spurte ham: Rabbi! hvem er det som har syndet, han eller hans foreldre, siden han skulde fødes blind?
3 ೩ ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
Jesus svarte: Hverken han har syndet eller hans foreldre, men det var forat Guds gjerninger skulde åpenbares på ham.
4 ೪ ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
Jeg må gjøre hans gjerninger som har sendt mig, så lenge det er dag; natten kommer da ingen kan arbeide.
5 ೫ ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
Mens jeg er i verden, er jeg verdens lys.
6 ೬ ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
Da han hadde sagt dette, spyttet han på jorden og gjorde en deig av spyttet og smurte deigen på hans øine.
7 ೭ ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
og han sa til ham: Gå og vask dig i dammen Siloa, det er utlagt: utsendt. Han gikk da bort og vasket sig, og kom tilbake seende.
8 ೮ ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
Grannene og de som før hadde sett ham sitte og tigge, sa da: Er det ikke han som satt og tigget?
9 ೯ ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
Andre sa: Jo, det er han; andre sa: Nei, men han ligner ham. Han selv sa: Det er mig.
10 ೧೦ ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
De sa da til ham: Hvorledes blev dine øine åpnet?
11 ೧೧ ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
Han svarte: Den mann som heter Jesus, gjorde en deig og smurte på mine øine og sa til mig: Gå til Siloa og vask dig! Da jeg så gikk bort og vasket mig, fikk jeg mitt syn.
12 ೧೨ ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
De sa til ham: Hvor er han? Han sier: Jeg vet ikke.
13 ೧೩ ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
Da fører de ham som hadde vært blind, frem for fariseerne.
14 ೧೪ ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
Men det var sabbat den dag da Jesus gjorde deigen og åpnet hans øine.
15 ೧೫ ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
Fariseerne spurte ham da likeså hvorledes han hadde fått sitt syn. Han sa til dem: Han la en deig på mine øine, og jeg vasket mig, og nu ser jeg.
16 ೧೬ ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
Nogen av fariseerne sa da: Denne mann er ikke fra Gud, siden han ikke holder sabbaten. Andre sa: Hvorledes kan en synder gjøre sådanne tegn? Og det var splid iblandt dem.
17 ೧೭ ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
Da sier de atter til den blinde: Hvad sier du om ham, siden det var dine øine han åpnet? Han sa: Han er en profet.
18 ೧೮ ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
Jødene trodde da ikke om ham at han hadde vært blind og fått sitt syn, før de fikk kalt for sig foreldrene til ham som hadde fått sitt syn,
19 ೧೯ ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
og de spurte dem: Er dette eders sønn som I sier er født blind? Hvorledes går det da til at han nu ser?
20 ೨೦ ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
Hans foreldre svarte: Vi vet at dette er vår sønn, og at han er født blind;
21 ೨೧ ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
men hvorledes det er gått til at han nu ser, det vet vi ikke, eller hvem som har åpnet hans øine, det vet vi heller ikke; spør ham selv! han er gammel nok, han vil selv svare for sig.
22 ೨೨ ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
Dette sa hans foreldre fordi de fryktet for jødene; for jødene var allerede kommet overens om at dersom nogen bekjente ham å være Messias, skulde han utstøtes av synagogen;
23 ೨೩ “ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
derfor sa hans foreldre: Han er gammel nok; spør ham selv!
24 ೨೪ ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
De kalte da annen gang den mann for sig som hadde vært blind, og sa til ham: Gi Gud ære! Vi vet at dette menneske er en synder.
25 ೨೫ ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
Han svarte da: Om han er en synder, vet jeg ikke; én ting vet jeg, at jeg som var blind, nu ser.
26 ೨೬ ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
De sa da til ham: Hvad gjorde han med dig? hvorledes åpnet han dine øine?
27 ೨೭ ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
Han svarte dem: Jeg har allerede sagt eder det, og I hørte ikke på det; hvorfor vil I atter høre det? Kanskje også I vil bli hans disipler?
28 ೨೮ ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
Da skjelte de ham ut og sa: Du er hans disippel, men vi er Mose disipler.
29 ೨೯ ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
Vi vet at til Moses har Gud talt, men hvor denne er fra, vet vi ikke.
30 ೩೦ ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
Mannen svarte dem: Dette er da underlig at ikke I vet hvor han er fra, og han har dog åpnet mine øine.
31 ೩೧ ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
Vi vet at Gud hører ikke syndere, men den som er gudfryktig og gjør hans vilje, ham hører han.
32 ೩೨ ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ. (aiōn )
Så lenge verden har stått, er det uhørt at nogen har åpnet øinene på en blindfødt; (aiōn )
33 ೩೩ ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
var ikke denne mann fra Gud, da kunde han intet gjøre.
34 ೩೪ ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
De svarte ham: Du er helt igjennem født i synder, og du vil lære oss? Og de kastet ham ut.
35 ೩೫ ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
Jesus fikk høre at de hadde kastet ham ut, og da han traff ham, sa han: Tror du på Guds Sønn?
36 ೩೬ ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
Han svarte: Hvem er han da, Herre, så jeg kan tro på ham?
37 ೩೭ ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
Jesus sa til ham: Du har sett ham; og han som her taler med dig, han er det.
38 ೩೮ ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
Han sa: Jeg tror, Herre! og falt ned for ham.
39 ೩೯ ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
Og Jesus sa: Til dom er jeg kommet til denne verden, forat de som ikke ser, skal se, og de som ser, skal bli blinde.
40 ೪೦ ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
Nogen av fariseerne, som var sammen med ham, hørte dette og sa til ham: Kanskje vi også er blinde?
41 ೪೧ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
Jesus sa til dem: Var I blinde, da hadde I ikke synd; men nu sier I: Vi ser; derfor blir eders synd.