< ಯೋಹಾನನು 1 >
1 ೧ ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
From the first he was the Word, and the Word was in relation with God and was God.
2 ೨ ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.
This Word was from the first in relation with God.
3 ೩ ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
All things came into existence through him, and without him nothing was.
4 ೪ ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
What came into existence in him was life, and the life was the light of men.
5 ೫ ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
And the light goes on shining in the dark; it is not overcome by the dark.
6 ೬ ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.
There was a man sent from God, whose name was John.
7 ೭ ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.
He came for witness, to give witness about the light, so that all men might have faith through him.
8 ೮ ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.
He himself was not the light: he was sent to give witness about the light.
9 ೯ ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
The true light, which gives light to every man, was then coming into the world.
10 ೧೦ ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.
He was in the world, the world which came into being through him, but the world had no knowledge of him.
11 ೧೧ ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.
He came to the things which were his and his people did not take him to their hearts.
12 ೧೨ ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
To all those who did so take him, however, he gave the right of becoming children of God — that is, to those who had faith in his name:
13 ೧೩ ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
Whose birth was from God and not from blood, or from an impulse of the flesh and man's desire.
14 ೧೪ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
And so the Word became flesh and took a place among us for a time; and we saw his glory — such glory as is given to an only son by his father — saw it to be true and full of grace.
15 ೧೫ ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.
John gave witness about him, crying, This is he of whom I said, He who is coming after me is put over me because he was in existence before me.
16 ೧೬ ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
From his full measure we have all been given grace on grace.
17 ೧೭ ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
For the law was given through Moses; grace and the true way of life are ours through Jesus Christ.
18 ೧೮ ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
No man has seen God at any time; the only Son, who is on the breast of the Father, he has made clear what God is.
19 ೧೯ ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,
And this is the witness of John when the Jews sent priests and Levites from Jerusalem to him with the question, Who are you?
20 ೨೦ ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
He said quite openly and straightforwardly, I am not the Christ.
21 ೨೧ ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.
And they said to him, What then? Are you Elijah? And he said, I am not. Are you the prophet? And his answer was, I am not.
22 ೨೨ ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
So they said to him, Who are you then? We have to give some answer to those who sent us. What have you to say about yourself?
23 ೨೩ ಅದಕ್ಕೆ ಯೋಹಾನನು, “ಪ್ರವಾದಿಯಾದ ಯೆಶಾಯನು ಹೇಳಿದಂತೆ, ‘ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಧ್ವನಿಯೇ ನಾನು’” ಎಂದು ಉತ್ತರ ಕೊಟ್ಟನು.
He said, I am the voice of one crying in the waste land, Make straight the way of the Lord, as said Isaiah the prophet.
24 ೨೪ ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.
Those who had been sent came from the Pharisees.
25 ೨೫ ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
And they put this question to him, saying, Why then are you giving baptism if you are not the Christ, or Elijah, or the prophet?
26 ೨೬ ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.
John's answer was: I give baptism with water; but there is one among you of whom you have no knowledge;
27 ೨೭ ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.
It is he who is coming after me; I am not good enough to undo his shoes.
28 ೨೮ ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.
These things took place at Bethany on the other side of the Jordan, where John was giving baptism.
29 ೨೯ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
The day after, John sees Jesus coming to him and says, See, here is the Lamb of God who takes away the sin of the world!
30 ೩೦ ‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.
This is he of whom I said, One is coming after me who is put over me because he was in existence before me.
31 ೩೧ ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”
I myself had no knowledge of him, but I came giving baptism with water so that he might be seen openly by Israel.
32 ೩೨ ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
And John gave this witness, saying, I saw the Spirit coming down from heaven like a dove and resting on him.
33 ೩೩ ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
I had no knowledge who he was, but he who sent me to give baptism with water said to me, The one on whom you see the Spirit coming down and resting, it is he who gives baptism with the Holy Spirit.
34 ೩೪ ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
This I saw myself and my witness is that he is the Son of God.
35 ೩೫ ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,
The day after, John was there again with two of his disciples;
36 ೩೬ ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
And looking at Jesus while he was walking he said, See, there is the Lamb of God!
37 ೩೭ ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
Hearing what he said, the two disciples went after Jesus.
38 ೩೮ ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು ಅವರು, “ರಬ್ಬಿಯೇ, (ಅಂದರೆ ಗುರುವೇ) ನೀನು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
And Jesus, turning round, saw them coming after him and said to them, What are you looking for? They said to him, Rabbi (which is to say, Master), where are you living?
39 ೩೯ ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.
He said to them, Come and see. They went with him then and saw where he was living; and they were with him all that day: it was then about the tenth hour of the day.
40 ೪೦ ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.
Andrew, Simon Peter's brother, was one of the two men who, hearing what John said, went after Jesus.
41 ೪೧ ಇವನು ಮೊದಲು ತನ್ನ ಅಣ್ಣನಾದ ಸೀಮೋನನನ್ನು ಕಂಡು ಅವನಿಗೆ “ನಾವು ಮೆಸ್ಸೀಯನನ್ನು ಕಂಡುಕೊಂಡೆವು” (ಮೆಸ್ಸೀಯನು ಎಂದರೆ ಕ್ರಿಸ್ತನು) ಎಂದು ಹೇಳಿ,
Early in the morning he came across his brother and said to him, We have made discovery! It is the Messiah! (which is to say, the Christ).
42 ೪೨ ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
And he took him to Jesus. Looking at him fixedly Jesus said, You are Simon, the son of John; your name will be Cephas (which is to say, Peter).
43 ೪೩ ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.
The day after this, Jesus had a desire to go into Galilee. He came across Philip and said to him, Come and be my disciple.
44 ೪೪ ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.
Now Philip's town was Beth-saida, where Andrew and Peter came from.
45 ೪೫ ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.
Philip came across Nathanael and said to him, We have made a discovery! It is he of whom Moses, in the law, and the prophets were writing, Jesus of Nazareth, the son of Joseph.
46 ೪೬ ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.
Nazareth! said Nathanael, Is it possible for any good to come out of Nazareth? Philip said to him, Come and see.
47 ೪೭ ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.
Jesus saw Nathanael coming to him and said of him, See, here is a true son of Israel in whom there is nothing false.
48 ೪೮ ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.
Nathanael said to him, Where did you get knowledge of me? In answer Jesus said, Before Philip was talking with you, while you were still under the fig-tree, I saw you.
49 ೪೯ ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
Nathanael said to him, Rabbi, you are the Son of God, you are King of Israel!
50 ೫೦ ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.
In answer Jesus said to him, You have faith because I said to you, I saw you under the fig-tree. You will see greater things than these.
51 ೫೧ ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
And he said to him, Truly I say to you all, You will see heaven opening and God's angels going up and coming down on the Son of man.