< ಯೋನನು 2 >
1 ೧ ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
Berdoalah Yunus kepada TUHAN, Allahnya, dari dalam perut ikan itu,
2 ೨ “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol )
katanya: "Dalam kesusahanku aku berseru kepada TUHAN, dan Ia menjawab aku, dari tengah-tengah dunia orang mati aku berteriak, dan Kaudengarkan suaraku. (Sheol )
3 ೩ ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
Telah Kaulemparkan aku ke tempat yang dalam, ke pusat lautan, lalu aku terangkum oleh arus air; segala gelora dan gelombang-Mu melingkupi aku.
4 ೪ ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
Dan aku berkata: telah terusir aku dari hadapan mata-Mu. Mungkinkah aku memandang lagi bait-Mu yang kudus?
5 ೫ ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
Segala air telah mengepung aku, mengancam nyawaku; samudera raya merangkum aku; lumut lautan membelit kepalaku
6 ೬ ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
di dasar gunung-gunung. Aku tenggelam ke dasar bumi; pintunya terpalang di belakangku untuk selama-lamanya. Ketika itulah Engkau naikkan nyawaku dari dalam liang kubur, ya TUHAN, Allahku.
7 ೭ “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
Ketika jiwaku letih lesu di dalam aku, teringatlah aku kepada TUHAN, dan sampailah doaku kepada-Mu, ke dalam bait-Mu yang kudus.
8 ೮ “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
Mereka yang berpegang teguh pada berhala kesia-siaan, merekalah yang meninggalkan Dia, yang mengasihi mereka dengan setia.
9 ೯ ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
Tetapi aku, dengan ucapan syukur akan kupersembahkan korban kepada-Mu; apa yang kunazarkan akan kubayar. Keselamatan adalah dari TUHAN!"
10 ೧೦ ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.
Lalu berfirmanlah TUHAN kepada ikan itu, dan ikan itupun memuntahkan Yunus ke darat.