< ಯೋನನು 2 >

1 ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
ヨナは魚の腹の中からその神、主に祈って、
2 “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. (Sheol h7585)
言った、「わたしは悩みのうちから主に呼ばわると、主はわたしに答えられた。わたしが陰府の腹の中から叫ぶと、あなたはわたしの声を聞かれた。 (Sheol h7585)
3 ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
あなたはわたしを淵の中、海のまん中に投げ入れられた。大水はわたしをめぐり、あなたの波と大波は皆、わたしの上を越えて行った。
4 ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
わたしは言った、『わたしはあなたの前から追われてしまった、どうして再びあなたの聖なる宮を望みえようか』。
5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
水がわたしをめぐって魂にまでおよび、淵はわたしを取り囲み、海草は山の根元でわたしの頭にまといついた。
6 ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
わたしは地に下り、地の貫の木はいつもわたしの上にあった。しかしわが神、主よ、あなたはわが命を穴から救いあげられた。
7 “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
わが魂がわたしのうちに弱っているとき、わたしは主をおぼえ、わたしの祈はあなたに至り、あなたの聖なる宮に達した。
8 “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
むなしい偶像に心を寄せる者は、そのまことの忠節を捨てる。
9 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
しかしわたしは感謝の声をもって、あなたに犠牲をささげ、わたしの誓いをはたす。救は主にある」。
10 ೧೦ ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.
主は魚にお命じになったので、魚はヨナを陸に吐き出した。

< ಯೋನನು 2 >