< ಯೋನನು 3 >

1 ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
時に主の言葉は再びヨナに臨んで言った、
2 ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.
「立って、あの大きな町ニネベに行き、あなたに命じる言葉をこれに伝えよ」。
3 ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
そこでヨナは主の言葉に従い、立って、ニネベに行った。ニネベは非常に大きな町であって、これを行きめぐるには、三日を要するほどであった。
4 ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
ヨナはその町にはいり、初め一日路を行きめぐって呼ばわり、「四十日を経たらニネベは滅びる」と言った。
5 ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
そこでニネベの人々は神を信じ、断食をふれ、大きい者から小さい者まで荒布を着た。
6 ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
このうわさがニネベの王に達すると、彼はその王座から立ち上がり、朝服を脱ぎ、荒布をまとい、灰の中に座した。
7 ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
また王とその大臣の布告をもって、ニネベ中にふれさせて言った、「人も獣も牛も羊もみな、何をも味わってはならない。物を食い、水を飲んではならない。
8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
人も獣も荒布をまとい、ひたすら神に呼ばわり、おのおのその悪い道およびその手にある強暴を離れよ。
9 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
あるいは神はみ心をかえ、その激しい怒りをやめて、われわれを滅ぼされないかもしれない。だれがそれを知るだろう」。
10 ೧೦ ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
神は彼らのなすところ、その悪い道を離れたのを見られ、彼らの上に下そうと言われた災を思いかえして、これをおやめになった。

< ಯೋನನು 3 >