< ಯೋನನು 3 >
1 ೧ ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
E a palavra do SENHOR veio pela segunda vez a Jonas, dizendo:
2 ೨ ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.
Levanta-te, e vai à grande cidade de Nínive, e prega contra ela a pregação que eu te falo.
3 ೩ ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
Então Jonas se levantou, e foi a Nínive, conforme a palavra do SENHOR. E Nínive era cidade extremamente grande, de três dias de caminho.
4 ೪ ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
E Jonas começou a entrar pela cidade, caminho de um dia, e pregava dizendo: Daqui a quarenta dias Nínive será destruída.
5 ೫ ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
E os homens de Nínive creram em Deus; e convocaram um jejum, e se vestiram de sacos, desde o maior até o menor deles.
6 ೬ ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
Pois quando esta palavra chegou ao rei de Nínive, ele se levantou de seu trono, e lançou de si sua roupa, e cobriu-se de saco, e se sentou em cinzas.
7 ೭ ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
E convocou e anunciou em Nínive, por mandado do rei e de seus maiorais, dizendo: Nem pessoas nem animais, nem bois nem ovelhas, provem coisa alguma, nem se lhes dê alimento, nem bebam água;
8 ೮ ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
E que as pessoas e os animais se cubram de saco, e clamem fortemente a Deus; e convertam- se cada um de seu mau caminho, e da violência que está em suas mãos.
9 ೯ ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
Quem sabe Deus mude de ideia e se arrependa, e se afaste do ardor de sua ira, para não perecermos?
10 ೧೦ ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
E Deus viu a atitude deles, que se converteram de seu mau caminho; então Deus se arrependeu do mal que tinha dito que lhes faria, e não o fez.