< ಯೋನನು 4 >

1 ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.
約納因此很不高興,遂發起怒來。
2 ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
他懇求天主說:「上主,當我還在故鄉時,我豈不是已想到這事﹖所以我預先要逃往塔爾史士去,因為我知道你是慈悲的,寬仁的天主;是緩於發怒,富於慈愛,憐憫而不願降災禍的天主。
3 ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.
上主,現在,求你從我身上收去我的性命,因為,我死了比活著還好! 」
4 ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.
上主說:「你的憤怒合理嗎﹖」
5 ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.
約納出了城,坐在城東,在那裏為自己搭了一個棚坐在棚蔭下,要看看那城究竟要發生什麼事。
6 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.
上主天主安排了一株篦麻,使長得高過約納,為他的頭遮蔭,消除自己尸煩惱。約納很喜愛這株篦麻。
7 ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.
但第二天曙升起時,天主安排了一個蟲咬死了篦麻,篦麻便枯萎了
8 ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
當太陽升起時,天主又安排了灸熱的東風,太陽射在約納頭上,使他無法忍受,遂要求死去,說:「我死了比活著還好! 」
9 ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.
天主血約納說:「你為這株篦麻發怒合理嗎﹖」他回答說:「我發怒以致於死,是合理的! 」
10 ೧೦ ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
上主說:「你為這株篦麻,並沒有勞過力,也沒有使它生長,還憐惜它:它不過是一夜生,出一夜死去的植物;
11 ೧೧ ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.
對尼尼微這座大城,其中有十二萬不能分辨自己左右手的人,且有許多牲畜,我就不該憐他們麼﹖」

< ಯೋನನು 4 >