< ಯೋನನು 4 >
1 ೧ ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.
Joni bi veoma krivo i rasrdi se.
2 ೨ ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
I ovako se pomoli Jahvi: “Ah, Jahve, nisam li ja to slutio dok još u svojoj zemlji bijah? Zato sam htio prije pobjeći u Taršiš; jer znao sam da si ti Bog milostiv i milosrdan, spor na gnjev i bogat milosrđem i da se nad nesrećom brzo sažališ.
3 ೩ ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು.
Sada, Jahve, uzmi moj život, jer mi je bolje umrijeti nego živjeti.”
4 ೪ ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು.
Jahve odgovori: “Srdiš li se ti s pravom?”
5 ೫ ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು.
Jona iziđe iz grada i sjede s istoka gradu; načini ondje kolibu i sjede pod njom u hlad da vidi što će biti od grada.
6 ೬ ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು.
A Jahve Bog učini da izraste bršljan nad Jonom i pruži sjenu njegovoj glavi te da ga izliječi od zlovolje. Jona se bršljanu veoma obradova.
7 ೭ ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು.
Ali sutradan, u osvit zore, Bog zapovjedi crvu da podgrize bršljan, i on usahnu.
8 ೮ ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
Kad je ogranulo sunce, posla Bog vruć istočni vjetar; sunce je palilo glavu Joninu te je sasvim klonuo. Poželje umrijeti i reče: “Bolje mi je umrijeti nego živjeti.”
9 ೯ ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.
Bog upita Jonu: “Srdiš li se s pravom zbog bršljana?” On odgovori: “Da, s pravom sam ljut nasmrt.”
10 ೧೦ ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
Jahve mu reče: “Tebi je žao bršljana oko kojega se nisi trudio, nego je u jednu noć nikao i u jednu noć usahnuo.
11 ೧೧ ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.
A meni da ne bude žao Ninive, grada velikoga, u kojem ima više od sto i dvadeset tisuća ljudi koji ne znaju razlikovati desno i lijevo, a uz to i mnogo životinja!”