< ಯೆಹೋಶುವನು 10 >

1 ಯೆಹೋಶುವನು ಆಯಿ ನಗರವನ್ನು, ಅದರ ಅರಸನನ್ನು ಹಿಡಿದು ಯೆರಿಕೋವನ್ನೂ ಅದರ ಅರಸನನ್ನೂ ಹೇಗೆ ಸಂಹರಿಸಿದನೆಂದು ಯೆರೂಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.
Егда же услыша Адонивезек царь Иерусалимский, яко взя Иисус Гай и потреби его, якоже сотвори Иерихону и царю его, тако сотвори и Гаю и царю его, и яко сами вдашася живущии в Гаваоне ко Иисусу и ко Израилю, и быша в них,
2 ಆಯಿ ಎಂಬ ಊರಿಗಿಂತ ದೊಡ್ಡದೂ, ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದ ಉಳಿಯುವುದಕ್ಕೋಸ್ಕರ ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುವುದನ್ನು ಕೇಳಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಬಹಳವಾಗಿ ಭಯಪಟ್ಟನು.
и убояшася сами в себе зело: ведяху бо, яко град бяше велик Гаваон, яко един от великих градов, и вси мужие иже в нем крепцы.
3 ಆದುದರಿಂದ ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.
И посла Адонивезек царь Иерусалимский к Еламу царю Хевронску и Фераану царю Иеримуфску, и ко Афию царю Лахисску, и к Давиру царю Одолламску, глаголя:
4 “ನೀವು ಬಂದು ನನಗೆ ಸಹಾಯಮಾಡಿರಿ, ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿರುವ ಗಿಬ್ಯೋನ್ಯರನ್ನು ಸೋಲಿಸೋಣ” ಎಂದು ಹೇಳಿ ಕಳುಹಿಸಿದನು.
приидите, взыдите ко мне и помозите ми, да повоюем Гаваона: вдашася бо сами ко Иисусу и к сыном Израилевым.
5 ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ಒಟ್ಟಾಗಿ ಸೇರಿ ದಂಡೆತ್ತಿ ಬಂದರು. ಅವರು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.
И собрашася и взыдоша пять царей Иевусейских: царь Иерусалимский и царь Хевронский, и царь Иеримуфский и царь Лахисский и царь Одолламский, сами и вси людие их, и обседоша Гаваона и воеваша на него.
6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.
И послаша живущии в Гаваоне ко Иисусу в полк Израилев в Галгалы, глаголюще: не отрешай руки твоея от раб твоих: взыди к нам скоро и помози нам, и изми нас: яко собрани суть на ны вси царие Аморрейстии, живущии в горней.
7 ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.
И взыде Иисус от Галгал, сам и вси людие воинстии с ним, всяк сильный крепостию.
8 ಯೆಹೋವನು ಯೆಹೋಶುವನಿಗೆ, ಅವರಿಗೆ “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ” ಎಂದನು
И рече Господь ко Иисусу: не убойся их, яко в руце твои предах я: не останет от них ни един пред вами.
9 ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.
И прииде на них Иисус внезапу: всю бо нощь иде от Галгал.
10 ೧೦ ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
И ужаси я Господь от лица сынов Израилевых: и сокруши я Господь сокрушением великим в Гаваоне: и погнаша я путем восхода Вифоронска, и сечаху их даже до Азика и до Макида.
11 ೧೧ ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ತಲುಪುವವರೆಗೂ ಯೆಹೋವನು ಅವರ ಮೇಲೆ ಆಕಾಶದಿಂದ ದೊಡ್ಡ ಆಲಿಕಲ್ಲಿನ ಮಳೆಯನ್ನು ಸುರಿಸಿದನು. ಈ ಕಾರಣದಿಂದ ಅನೇಕರು ಸತ್ತರು ಇಸ್ರಾಯೇಲ್ಯರ ಕತ್ತಿಯಿಂದ ಸಂಹಾರವಾದವರಿಗಿಂತ ಆಲಿಕಲ್ಲಿನ ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.
Внегда же бежати им от лица сынов Израилевых до восхода Вифоронска, и Господь верже на ня камение великое града с небесе даже до Азика, и бысть множае умерших от града каменна, неже убиенных от сынов Израилевых мечем на брани.
12 ೧೨ ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.
Тогда глагола Иисус ко Господу, в оньже день предаде Господь Бог Аморреа под руку Израилеву, егда сокруши их в Гаваоне, и сокрушишася от лица Израилева: и рече Иисус: да станет солнце прямо Гаваону, и луна прямо дебри Елон.
13 ೧೩ ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.
И ста солнце и луна в стоянии, дондеже отмсти Бог врагом их. Не сие ли есть писано в книгах Праведнаго: и ста солнце посреде небесе и не идяше на запад в совершение дне единаго?
14 ೧೪ ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿನವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.
И не бысть день таковый ниже прежде, ниже последи, еже послушати Богу тако гласа человеча, яко Господь споборствова Израилю.
15 ೧೫ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.
И возвратися Иисус и весь Израиль с ним в полк в Галгалы.
16 ೧೬ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು.
И убегоша пять царие сии и скрышася в пещере яже в Макиде.
17 ೧೭ ಜನರು ಯೆಹೋಶುವನಿಗೆ “ಆ ಐದು ಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ” ಎಂದು ತಿಳಿಸಿದರು.
И поведаша Иисусу, глаголюще: обретошася пять царие скрывшиися в пещере яже в Макиде.
18 ೧೮ ಆಗ ಯೆಹೋಶುವನು ಅವರಿಗೆ “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕಾವಲುಗಾರರನ್ನು ಇಡಿರಿ. ನೀವಾದರೂ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದೆ ಬರುವ ಶತ್ರುಗಳನ್ನು ಹತಮಾಡುತ್ತಾ ಹೋಗಿರಿ.
И рече Иисус: привалите камение велие ко устию пещеры и приставите над ними мужы стрещи их:
19 ೧೯ ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.
вы же не стойте зде, гоняще вслед врагов ваших, и постигните останок их, и не дадите внити им во грады их, предаде бо я Господь Бог наш в руце наши.
20 ೨೦ ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.
И бысть егда преста Иисус и вси сынове Израилевы секуще их сечением великим зело даже до конца, и уцелевшии от них внидоша во грады тверды.
21 ೨೧ ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ.
И возвратишася вси людие в полк ко Иисусу в Макиду здрави, и не возскомле никтоже от сынов Израилевых языком своим.
22 ೨೨ ಅನಂತರ ಯೆಹೋಶುವನು ಜನರಿಗೆ “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ” ಎಂದನು.
И рече Иисус: отверзите устие пещеры и изведите ко мне пять царей сих из пещеры.
23 ೨೩ ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಕೊಂಡು ಅವನ ಬಳಿಗೆ ತಂದರು.
И сотвориша тако, и изведоша к нему пять царей из пещеры: царя Иерусалимска и царя Хевронска, и царя Иеримуфска и царя Лахисска и царя Одолламска.
24 ೨೪ ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
И егда изведоша их ко Иисусу, и созва Иисус всего Израиля и началники воинския ходящыя с ним, глаголя к ним: приступите и наступите ногами вашими на выи царей сих. И приступивше наступиша ногами своими на выи их.
25 ೨೫ ಆಗ ಅವನು ಅವರಿಗೆ “ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು” ಎಂದು ಹೇಳಿದನು.
И рече к ним Иисус: не бойтеся их, ни ужасайтеся: мужайтеся и крепитеся, яко сице сотворит Господь всем врагом вашым, ихже вы повоюете.
26 ೨೬ ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.
И уби я Иисус, и повеси я на пяти древесех: и быша висяще на древах даже до вечера.
27 ೨೭ ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.
И бысть при захождении солнца, повеле Иисус, и сняша я с древес, и ввергоша я в пещеру, в нюже вбегоша тамо: и завалиша камением великим пещеру до днешняго дне.
28 ೨೮ ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.
Взяша же и Макиду в той день, и избиша ю острием меча и царя ея, и потребиша их и все дышущее еже бяше в ней: и не остася никтоже в ней цел и избегший. И сотвориша царю Макидску, якоже сотвориша царю Иерихонску.
29 ೨೯ ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.
И отиде Иисус и весь Израиль с ним от Макиды в Левну, и облеже Левну.
30 ೩೦ ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.
И предаде ю Господь в руце Израилю: и взяша ю и царя ея, и избиша ю острием меча, и все дышущее в ней: и не остася в ней ни един цел и избегший. И сотвориша царю ея, якоже сотвориша царю Иерихонску.
31 ೩೧ ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.
И отиде Иисус и весь Израиль с ним от Левны в Лахис, и облеже его, и воеваше нань.
32 ೩೨ ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ, ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
И предаде Господь Лахис в руце Израилевы: и взя его в день вторый, и избиша его острием меча (и все дышущее в нем), и потребиша его, якоже сотвориша Левне.
33 ೩೩ ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.
Тогда взыде Орам царь Газерск, помогаяй Лахису: и порази его Иисус острием меча, и люди его, дондеже не остася от них ни един цел и избегший.
34 ೩೪ ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.
И отиде Иисус и весь Израиль с ним от Лахиса во Аглон, и облеже и, и воева на него.
35 ೩೫ ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.
И предаде и Господь в руце Израилю: и взя и в той день, и изби и острием меча, и все дышущее в нем уби, и сотвори ему якоже и Лахису.
36 ೩೬ ಅನಂತರ ಯೆಹೋಶುವನೂ, ಇಸ್ರಾಯೇಲರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ
И отиде Иисус и весь Израиль с ним в Хеврон, и обсяде и:
37 ೩೭ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.
и взя его, и порази его острием меча, и царя его, и вся веси его, и вся дышущая елика бяху в нем: не бе уцелевый: якоже сотвориша Аглону, потребиша и и все дышущее, елика в нем бяху.
38 ೩೮ ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.
И обратися Иисус и весь Израиль с ним в Давир: и обседше и,
39 ೩೯ ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.
взяша его и царя его и вся веси его, и поразиша и мечем, и потребиша и и все дышущее в нем, и не оставиша в нем ни единаго уцелевша: якоже сотвориша Хеврону и царю его, тако сотвориша Давиру и царю его, и якоже сотвориша Левне и царю ея.
40 ೪೦ ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.
И порази Иисус всю землю горную и Нагев, и равную и Асидоф, и вся цари его: не оставиша в нем ни единаго уцелевша: и все дышущее потребиша, якоже заповеда Господь Бог Израилю.
41 ೪೧ ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.
И изби их Иисус от Кадис-Варни даже до Газы, и всю землю Госом даже до Гаваона:
42 ೪೨ ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
и вся цари сия и землю их взя Иисус единою: яко Господь Бог Израилев помогаше Израилю.
43 ೪೩ ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.
И возвратися Иисус и весь Израиль с ним в полк в Галгалы.

< ಯೆಹೋಶುವನು 10 >