< ಯೆಹೋಶುವನು 13 >
1 ೧ ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.
Sasa Yoshua alikuwa mzee wakati Yahweh alipomwambia, “Umekuwa mzee, lakini bado kuna nchi kubwa ya kuteka.
2 ೨ ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ
Nchi iliyosalia ndio hii: mikoa yote ya Wafilisti, na mikoa ile ya Wageshuri,
3 ೩ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದ ಫಿಲಿಷ್ಟಿಯ ಪ್ರಾಂತ್ಯ; ಗೆಷೂರ್ಯರ ಸೀಮೆಯು,
(tangu Shihori, iliyoko mashariki mwa Misri, na upande wa kaskazini kuelekea mpaka wa Ekroni, inayofikiriwa kuwa ni mali ya Wakanaani; wafalme watano wa Wafilisti, wale wafalme wa Gaza, Ashidodi, Ashikeloni, Gathi na Ekroni - miliki ya Waavi.
4 ೪ ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು
Katika upande wa kusini, kulisalia nchi yote ya Wakanaani, na Meara ambayo ni miliki ya Wasidoni, hadi Afeki, hata mpaka wa Waamori;
5 ೫ ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;
nchi ya Wagebali, Lebanoni kuelekea upande wa mapambazuko ya jua, kutoka Baali- Gadi chini ya Mlima Hermoni mpaka Lebo Hamathi.
6 ೬ ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ
Pia, wenyeji wote wa nchi ya milima kutoka Lebanoni hadi Misrefothi - Maimu, pamoja na watu wa Sidoni. Nitawafukuza mbele ya jeshi la Israeli. Uwe na uhakika wa kuwapa Waisraeli nchi kama urithi, kama nilivyokuagiza.
7 ೭ ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.
Igawanye nchi hii kama urithi kwa makabila tisa na kwa nusu ya kabila la Manase.
8 ೮ ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
Pamoja na nusu nyingine ya kabila la Manase, Wareubeni na Wagadi wamekwisha kupokea urithi wao ambao Musa aliwapa katika upande wa mashariki wa Yordani,
9 ೯ ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
kutoka Aroeri, iliyo katika ukingo wa bonde la mto Arnoni (kujumuisha na mji ambao uko katikati ya bonde), kwa nyanda zote za Medeba hadi Diboni;
10 ೧೦ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ವಶದಲ್ಲಿದ್ದ ಅಮ್ಮೋನಿಯರ ಮೇರೆಯ ಈಚೆಗೆ ಇದ್ದಂಥ ಎಲ್ಲಾ ಪಟ್ಟಣಗಳು; ಗಿಲ್ಯಾದ್ ಸೀಮೆ
miji yote ya Sihoni, mfalme wa Waamori, ambaye alitawala katika Heshiboni, hata mpaka wa Waamori,
11 ೧೧ ಗೆಷೂರ‍್ಯರ ಮತ್ತು ಮಾಕತೀಯರ ಪ್ರಾಂತ್ಯಗಳು ಹೆರ್ಮೋನ್ ಬೆಟ್ಟದ ಮೇಲಿನ ಎಲ್ಲಾ ಪ್ರದೇಶ,
Gileadi na mkoa wa Wageshuri na Maakathi, mlima wote wa Hermoni, Bashani yote mpaka Saleka;
12 ೧೨ ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.
ufalme wote wa Ogu katika Bashani, aliyetawala katika Ashitarothi na Edrei - hawa ni wale waliosalia katika Refaimu - ambao Musa aliwapiga na kuwafukuzia mbali.
13 ೧೩ ಇಸ್ರಾಯೇಲ್ಯರು ಗೆಷೂರ‍್ಯರನ್ನೂ, ಮಾಕತೀಯರನ್ನೂ ದೇಶದೊಳಗಿಂದ ಹೊರಡಿಸಲಿಲ್ಲ. ಏಕೆಂದರೆ ಆದ್ದರಿಂದ ಗೆಷೂರ‍್ಯರೂ ಮಾಕತೀಯರೂ ಅವರು ಇಂದಿನವರೆಗೂ ಇಸ್ರಾಯೇಲ್ಯರ ಮಧ್ಯದಲ್ಲಿ ಇರುತ್ತಾರೆ.
Lakini watu wa Israeli hawakuwafukuza Wageshuri wala Wamakathi. Badala yake, Wageshuri na Wamakathi wanaishi miongoni mwa Waisraeli hadi leo.
14 ೧೪ ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.
Kabila la Lawi pekee halikupewa urithi na Musa. Urithi wao ni sadaka za Yahweh, Mungu wa Israeli, zilizotolewa kwa moto, kama Mungu alivyomwagiza Musa.
15 ೧೫ ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
Musa aliwapa urithi kabila la Rubeni, ukoo kwa ukoo.
16 ೧೬ ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ;
Miliki yao ilikuwa kutoka Aroeri, juu ya ukingo wa bonde la Mto Arnoni, na mji ulio katikati ya bonde, na nyanda zote za Medeba.
17 ೧೭ ಮೇದೆಬದ ತಪ್ಪಲ ಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣ, ಅಲ್ಲೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್ ಬೇತ್ಬಾಳ್ಮೆಯೋನ್,
Wareubeni walipata pia Heshiboni, na miji yake yote zilizo katika uwanda, Diboni, na Bamathi Baali, na Bethi Baalimeoni,
18 ೧೮ ಯಹಚಾ ಕೆದೇಮೋತ್, ಮೇಫಾಯತ್,
na Yahazi, na Kedemothi, na Mefaathi,
19 ೧೯ ಕಿರ್ಯಾತಯಿಮ್ ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿರುವ ಬೆಟ್ಟದ ಮೇಲಿನ ಚೆರೆತ್ ಶಹರ್,
na Kiriathaimu, na Sibuma, na Zerethishahari juu ya kilima cha bonde.
20 ೨೦ ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ,
Wareubeni walipata pia Bethi Peori, miteremko ya Pisiga, Bethi Yeshimothi,
21 ೨೧ ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.
miji yote ya uwanda, na ufalme wote wa Sihoni, mfalme wa Waamori, ambaye alikuwa ametawala katika Heshiboni, ambaye Musa alikuwa amemshinda pamoja na viongozi wa Midiani, Evi, Rekemu, Zuri, Huri na Reba, wana wa mfalme wa Sihoni, ambao walikuwa wameishi katika nchi.
22 ೨೨ ಇಸ್ರಾಯೇಲ್ಯರು ಕತ್ತಿಯಿಂದ ಸಂಹರಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನಾಗಿದ್ದ ಬಿಳಾಮನೂ ಇದ್ದನು.
Pia, watu wa Israeli walimwua kwa upanga Baalam mwana wa Beori, ambaye alifanya mambo ya uaguzi, miongoni mwa wale waliowaua.
23 ೨೩ ಯೊರ್ದನ್ ನದಿಯು, ರೂಬೇನ್ಯರ ಪಡುವಣ ಮೇರೆಯಾಗಿತ್ತು. ರೂಬೇನ್ಯರ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಗ್ರಾಮನಗರಗಳು ಇವುಗಳೇ.
Mpaka wa kabila la Rubeni ni Mto Yordani; huu ndio mpaka wao. Huu ulikuwa ni urithi wa kabila la Rubeni, uliotolewa kwa kila ukoo, pamoja na miji na vijiji vyao.
24 ೨೪ ಮೋಶೆಯು ಗಾದ್ ಕುಲದ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:
Hiki ndicho Musa alilipa kabila la Gadi, ukoo kwa ukoo:
25 ೨೫ ಹೆಷ್ಬೋನಿನ ಅರಸನಾದ ಸೀಹೋನಿನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಮೊದಲಾದ ಗಿಲ್ಯಾದಿನ ಎಲ್ಲಾ ಪಟ್ಟಣಗಳು, ರಬ್ಬಾ ಊರಿನ ಪೂರ್ವದಲ್ಲಿರುವ ಅರೋಯೇರ್ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧ ರಾಜ್ಯ,
Himaya yao ilikuwa Yazeri, miji yote ya Gileadi na nusu ya nchi ya Waamoni, hadi Aroeri, iliyo mashariki mwa Raba,
26 ೨೬ ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೋನೀಮ್ ಎಂಬ ಊರುಗಳ ವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೂ ಇರುವ ಸೀಮೆ,
kutoka Heshiboni hadi Ramathi - Mizipe na Betonimu, kutoka Mahanaimu mpaka himaya ya Debiri.
27 ೨೭ ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
Katika bonde, Musa aliwapa Bethi -Haramu, Bethi - Nimra, Sukothi, na Zafoni, ufalme uliobakia wa Sihoni mfalme wa Heshiboni, pamoja na Yordani kama mpaka, katika sehemu za chini za mwisho wa Bahari ya Kinerethi, upande wa mashariki ng'ambo ya Yordani.
28 ೨೮ ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.
Huu ni urithi wa kabila la Gadi, ukoo kwa ukoo, pamoja na miji na vijiji vyao.
29 ೨೯ ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
Musa aliwapa urithi nusu ya kabila la Manase. Urithi uligawiwa kwa nusu ya kabila la watu wa Manase kutokana na kabila zao.
30 ೩೦ ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.
Miliki yao ilikuwa kutoka Mahanaimu, Bashani yote, ufalme wote wa mfalme Ogu wa Bashani, na miji yote ya Yairi, iliyo katika Bashani, miji sitini;
31 ೩೧ ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.
nusu ya Gileadi, na Ashitarothi na Edrei (miji ya kifalme ya Ogu katika Bashani). Miji hii iligawanywa kwa ukoo wa Makiri mwana wa Manase -nusu ya watu wa Makiri, walipewa kwa kila familia zao.
32 ೩೨ ಮೋಶೆಯು ಯೊರ್ದನಿನ ಆಚೆ ಯೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲಿನಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವತ್ತಾಗಿ ಕೊಟ್ಟನು.
Huu ndio urithi ambao Musa aliowagawia katika nyanda za Moabu, ng'ambo ya Yordani mashariki mwa Yeriko.
33 ೩೩ ಆದರೆ ಲೇವಿಯ ಕುಲಕ್ಕೆ ಮೋಶೆಯು ಯಾವ ಸ್ವತ್ತನ್ನು ಕೊಡಲಿಲ್ಲ. ಯಾಕೆಂದರೆ ಇಸ್ರಾಯೇಲ್ಯರ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ಆತನೇ ಅವರ ಸ್ವತ್ತಾಗಿದ್ದನು.
Musa hakulipa urithi kabila la Lawi. kwa kuwa Yahweh, Mungu wa israeli, ni urithi wao, kama vile alivyowaambia.