< ಯೆಹೋಶುವನು 14 >
1 ೧ ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
১কনান দেশে ইস্রায়েল-সন্তানরা এই এই অধিকার গ্রহণ করল; ইলীয়াসর যাজক ও নূনের পুত্র যিহোশূয় এবং ইস্রায়েল-সন্তানদের বংশগুলির পিতৃকুলপতিরা এই সব তাদেরকে অংশ করে দিলেন;
2 ೨ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
২সদাপ্রভু মোশির মাধ্যমে যেরকম আদেশ করেছিলেন, সেই অনুসারে তারা গুলিবাটের মাধ্যমে সাড়ে নয় বংশের অংশ নির্ধারণ করলেন।
3 ೩ ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
৩কারণ যর্দ্দনের ওপারে মোশি আড়াই বংশকে অধিকার দিয়েছিলেন, কিন্তু লেবীয়দের লোকদের মধ্যে কোন অধিকার দেন নি।
4 ೪ ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.
৪কারণ যোষেফ-সন্তানরা দুই বংশ হল, মনঃশি ও ইফ্রয়িম; আর লেবীয়দেরকে দেশে কোন অংশ দেওয়া গেল না, কেবল বাস করবার জন্য কতগুলি নগর এবং তাদের পশুপালের ও তাদের সম্পত্তির জন্য সেই সকল নগরের পশুপালনের মাঠগুলিও দেওয়া হল।
5 ೫ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು.
৫সদাপ্রভু মোশিকে যে আদেশ দিয়েছিলেন, ইস্রায়েল-সন্তানরা সেই অনুসারে কাজ করল এবং দেশ বিভাগ করে নিল।
6 ೬ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
৬আর যিহূদা-সন্তানরা গিল্গলে যিহোশূয়ের কাছে আসল; আর কনিসীয় যিফুন্নির পুত্র কালেব তাকে বললেন, “সদাপ্রভু আমার ও তোমার বিষয়ে কাদেশ-বর্ণেয়ে ঈশ্বরের লোক মোশিকে যে কথা বলেছিলেন, তা তুমি জানো।
7 ೭ ಯೆಹೋವನ ಸೇವಕನಾದ ಮೋಶೆಯು ಈ ದೇಶವನ್ನು ಸಂಚರಿಸಿ ನೋಡುವುದಕ್ಕೋಸ್ಕರ ಕಾದೇಶ್ ಬರ್ನೇಯದಿಂದ ನನ್ನನ್ನು ಕಳುಹಿಸಿದಾಗ ನನಗೆ ನಲ್ವತ್ತು ವರ್ಷವಾಗಿತ್ತು.
৭আমার চল্লিশ বছর বয়সের দিনের সদাপ্রভুর দাস মোশি দেশ অনুসন্ধান করতে কাদেশ-বর্ণেয় থেকে আমাকে পাঠিয়েছিলেন, আর আমি সরল মনে তার কাছে সংবাদ এনে দিয়েছিলাম।
8 ೮ ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.
৮আমার যে ভাইয়েরা আমার সঙ্গে গিয়েছিল, তারা লোকদের হৃদয় [ভয়ে] গলিয়ে দিয়েছিল; কিন্তু আমি পুরোপুরিভাবে নিজের ঈশ্বর সদাপ্রভুর অনুগামী ছিলাম।
9 ೯ ಮೋಶೆಯು ಆ ದಿನ ನನಗೆ ‘ನೀನು ಪೂರ್ಣಮನಸ್ಸಿನಿಂದ ನನ್ನ ದೇವರಾದ ಯೆಹೋವನನ್ನು ಅನುಸರಿಸಿದ್ದರಿಂದ ನೀನು ಸಂಚರಿಸಿದ ಪ್ರದೇಶವು ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸ್ವತ್ತಾಗಿರುವುದು’ ಎಂದು ಪ್ರಮಾಣ ಮಾಡಿ ಹೇಳಿದನು.
৯আর মোশি ওই দিনের শপথ করে বলেছিলেন, যে জমির উপরে তোমার পা পড়েছে, সেই জমি তোমার ও চিরকাল তোমার সন্তানদের অধিকার হবে; কারণ তুমি পুরোপুরি আমার ঈশ্বর সদাপ্রভুর অনুসরণ করেছ।
10 ೧೦ ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
১০আর এখন দেখ, প্রান্তরে ইস্রায়েলের ভ্রমণের দিনের যখন সদাপ্রভু মোশিকে সেই কথা বলেছিলেন, তখন থেকে সদাপ্রভু নিজের বাক্য অনুসারে এই পঁয়তাল্লিশ বছর আমাকে জীবিত রেখেছেন; আর এখন, দেখ, আজ আমার বয়স পঁচাশী বছর।
11 ೧೧ ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
১১মোশি যে দিন আমাকে পাঠিয়েছিলেন, সেই দিন আমি যেমন বলবান ছিলাম, এখন পর্যন্ত তেমনি আছি; যুদ্ধের জন্য এবং বাইরে যাবার ও ভিতরে আসার জন্য আমার তখন যেমন শক্তি ছিল, এখনও সেরকম শক্তি আছে।
12 ೧೨ ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
১২অতএব সেই দিন সদাপ্রভু এই যে পর্বতের বিষয় বলেছিলেন, এখন তা আমাকে দাও; কারণ তুমি সেই দিন শুনেছিলে যে, অনাকীয়েরা সেখানে থাকে এবং নগরগুলি বড় ও প্রাচীর দিয়ে ঘেরা; হয় তো, সদাপ্রভু আমার সঙ্গে সঙ্গে থাকবেন, আর আমি সদাপ্রভুর বাক্য অনুসারে তাদেরকে অধিকার থেকে বঞ্চিত করব।”
13 ೧೩ ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ಬೆಟ್ಟವನ್ನು ಅವನಿಗೆ ಸ್ವತ್ತಾಗಿ ಕೊಟ್ಟನು.
১৩তখন যিহোশূয় তাকে আশীর্বাদ করলেন এবং যিফুন্নির ছেলে কালেবকে রাজত্বের জন্য হিব্রোণ দিলেন।
14 ೧೪ ಕೆನಿಜ್ಜೀಯನಾದ ಯೆಫುನ್ನೆಯ ಮಗನು ಕಾಲೇಬ್ ಇಸ್ರಾಯೇಲರ ದೇವರಾದ ಯೆಹೋವನನ್ನು ಸಂಪೂರ್ಣವಾಗಿ ಅನುಸರಿಸಿ ವಿಧೇಯನಾಗಿದ್ದುದರಿಂದ ಹೆಬ್ರೋನ್ ಅವನಿಗೆ ಸ್ವತ್ತಾಗಿ ಸಿಕ್ಕಿತು. ಅದು ಇಂದಿನವರೆಗೂ ಅವನದೇ ಆಗಿರುತ್ತದೆ.
১৪এই জন্য আজ পর্যন্ত হিব্রোণ কনিসীয় যিফুন্নির পুত্র কালেবের অধিকার রয়েছে; কারণ তিনি পুরোপুরিভাবে ইস্রায়েলের ঈশ্বর সদাপ্রভুর অনুগামী ছিলেন।
15 ೧೫ ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.
১৫পূর্বকালে হিব্রোণের নাম কিরিয়ৎ অর্ব [অর্বপুর] ছিল; ঐ অর্ব অনাকীয়দের মধ্যে মহান ছিলেন। পরে দেশে যুদ্ধ শেষ হল।