< ಯೆಹೋಶುವನು 16 >

1 ಯೋಸೇಫನ ವಂಶದವರಿಗೆ ದೊರಕಿದ ಸ್ವತ್ತಿನ ಮೇರೆಯು: ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ಯೆರಿಕೋವಿನ ಪೂರ್ವದಲ್ಲಿದ್ದ ನದಿ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ ಹಾಗೂ
Yosef asefo no kyɛfa fi Asubɔnten Yordan fa a ɛbɛn Yeriko, wɔ Yeriko nsuwa no apuei fam, kɔfa sare no so kopue Bet-El bepɔw asase no so.
2 ಬೇತೇಲ್ ಇವುಗಳ ಮೇಲೆ ಲೂಜಿಗೂ ಹೋಗುತ್ತದೆ. ಅಲ್ಲಿಂದ ಅರ್ಕಿಯರ ಮೇರೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ
Efi Bet-El, a ɛyɛ Lus, a ɛfa Atarot a ɛwɔ Arkifo mantam mu.
3 ಅಲ್ಲಿಂದ ಇಳಿದು ಪಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನ್ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
Esian fa atɔe fam kosi Bet-Horon Anafo a ɛwɔ Yafletifo mantam mu. Ɛtoa so kɔ Geser na afei akosi Po Kɛse no mu.
4 ಇದು ಯೋಸೇಫನ ಮಕ್ಕಳಾದ ಮನಸ್ಸೆ, ಎಫ್ರಾಯೀಮ್ ಎಂಬ ಕುಲಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು.
Yosef mmabarima Manase ne Efraim mmusua nyaa wɔn agyapade.
5 ಎಫ್ರಾಯೀಮ್ ಗೋತ್ರಗಳ ದೇಶದ ದಕ್ಷಿಣ ದಿಕ್ಕಿನ ಮೇರೆಯು ಅಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ಬೇತ್ ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
Wɔde saa asase yi maa Efraim mmusua sɛ wɔn agyapade. Wɔn agyapade no hye a ɛwɔ apuei fam no fi Atarot-Adar. Efi hɔ kɔ Bet-Horon Soro,
6 ಅದರ ಉತ್ತರ ದಿಕ್ಕಿನ ಮೇರೆಯು ಮಿಕ್ಮೆತಾತ್ ಯಿಂದ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.
na akɔ Po Kɛse no ho. Atifi fam hye no fi Po Kɛse no, ɛfa apuei fam, twa mu wɔ Mikmetat, na akɔntɔn afa apuei fam, atwa mu wɔ Taanat-Silo akɔ Yanoa apuei fam.
7 ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಯೆರಿಕೋ ಪ್ರಾಂತ್ಯಕ್ಕೆ ಬಂದು ಯೊರ್ದನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
Efi Yanoa a, ɛdan fa anafo fam kɔ Atarot ne Naara, ɛka Yeriko, na akɔpem Asubɔnten Yordan.
8 ಅದರ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ಹಳ್ಳವನ್ನು ಅನುಸರಿಸಿ ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಾಯೀಮ್ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವುಗಳೇ.
Efi Tapua a, ɔhye no kɔ atɔe fam, nam Kana Suka no mu kosi Po Kɛse no. Saa agyapade yi na wɔde maa mmusua a wɔbɔ mu yɛ Efraim abusuakuw no.
9 ಇದಲ್ಲದೆ ಎಫ್ರಾಯೀಮ್ ಕುಲದವರ ಮತ್ತು ಮನಸ್ಸೆ ಕುಲದವರ ಮಧ್ಯದಲ್ಲಿ ಪ್ರತ್ಯೇಕವಾದ ಕೆಲವು ಪಟ್ಟಣಗಳು ಅವುಗಳಿಗೆ ಸೇರಿದ ಗ್ರಾಮಗಳು ದೊರಕಿದವು.
Wɔde nkurow bi ne wɔn nkuraase a ɛwɔ Manase abusuakuw no fa mantam mu maa Efraim.
10 ೧೦ ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.
Wɔampam Kanaanfo no amfi Geser, enti Geserfo te hɔ sɛ nkoa de besi nnɛ.

< ಯೆಹೋಶುವನು 16 >