< ಯೆಹೋಶುವನು 21 >
1 ೧ ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,
Then the heads of fathers’ houses of the Levites came near to Eleazar the priest, and to Joshua the son of Nun, and to the heads of fathers’ houses of the tribes of the children of Israel.
2 ೨ “ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು
They spoke to them at Shiloh in the land of Canaan, saying, “The LORD commanded through Moses to give us cities to dwell in, with their pasture lands for our livestock.”
3 ೩ ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
The children of Israel gave to the Levites out of their inheritance, according to the commandment of the LORD, these cities with their pasture lands.
4 ೪ ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.
The lot came out for the families of the Kohathites. The children of Aaron the priest, who were of the Levites, had thirteen cities by lot out of the tribe of Judah, out of the tribe of the Simeonites, and out of the tribe of Benjamin.
5 ೫ ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
The rest of the children of Kohath had ten cities by lot out of the families of the tribe of Ephraim, out of the tribe of Dan, and out of the half-tribe of Manasseh.
6 ೬ ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
The children of Gershon had thirteen cities by lot out of the families of the tribe of Issachar, out of the tribe of Asher, out of the tribe of Naphtali, and out of the half-tribe of Manasseh in Bashan.
7 ೭ ಮೆರಾರೀ ಗೋತ್ರದವರಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳಿಂದ ಹನ್ನೆರಡು ಪಟ್ಟಣಗಳು ಸಿಕ್ಕಿದವು
The children of Merari according to their families had twelve cities out of the tribe of Reuben, out of the tribe of Gad, and out of the tribe of Zebulun.
8 ೮ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಇಸ್ರಾಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ಪಟ್ಟಣಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.
The children of Israel gave these cities with their pasture lands by lot to the Levites, as the LORD commanded by Moses.
9 ೯ ಲೇವಿ ಕುಲದವರು ಕೆಹಾತ್ಯರ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಮೊದಲು ಚೀಟು ಬಿದ್ದಿತು.
They gave out of the tribe of the children of Judah, and out of the tribe of the children of Simeon, these cities which are mentioned by name:
10 ೧೦ ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು.
and they were for the children of Aaron, of the families of the Kohathites, who were of the children of Levi; for theirs was the first lot.
11 ೧೧ ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.
They gave them Kiriath Arba, named after the father of Anak (also called Hebron), in the hill country of Judah, with its pasture lands around it.
12 ೧೨ ಆದರೆ ಇದರ ಹೊಲಗಳನ್ನೂ, ಇದಕ್ಕೆ ಸೇರಿದ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.
But they gave the fields of the city and its villages to Caleb the son of Jephunneh for his possession.
13 ೧೩ ಮಹಾಯಾಜಕನಾದ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನೆಂಬ ಆಶ್ರಯ ನಗರವಾದ ಲಿಬ್ನಾ,
To the children of Aaron the priest they gave Hebron with its pasture lands, the city of refuge for the man slayer, Libnah with its pasture lands,
Jattir with its pasture lands, Eshtemoa with its pasture lands,
Holon with its pasture lands, Debir with its pasture lands,
16 ೧೬ ಅಯಿನ್, ಯುಟ್ಟಾ, ಬೇತ್ಷೆಮೆಷ್ ಎಂಬ ಒಂಭತ್ತು ಗೋಮಾಳ ಸಹಿತವಾದ ಪಟ್ಟಣಗಳು
Ain with its pasture lands, Juttah with its pasture lands, and Beth Shemesh with its pasture lands: nine cities out of those two tribes.
17 ೧೭ ಹಾಗೂ ಬೆನ್ಯಾಮೀನನ ಕುಲದಿಂದ ಗಿಬ್ಯೋನ್, ಗೆಬ,
Out of the tribe of Benjamin, Gibeon with its pasture lands, Geba with its pasture lands,
18 ೧೮ ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.
Anathoth with its pasture lands, and Almon with its pasture lands: four cities.
19 ೧೯ ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
All the cities of the children of Aaron, the priests, were thirteen cities with their pasture lands.
20 ೨೦ ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ
The families of the children of Kohath, the Levites, even the rest of the children of Kohath, had the cities of their lot out of the tribe of Ephraim.
21 ೨೧ ಎಫ್ರಾಯೀಮ್ಯರ ಸ್ವತ್ತಿನಿಂದ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ,
They gave them Shechem with its pasture lands in the hill country of Ephraim, the city of refuge for the man slayer, and Gezer with its pasture lands,
22 ೨೨ ಗೆಜೆರ್, ಕಿಬ್ಚೈಮ್ ಹಾಗೂ ಬೇತ್ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
Kibzaim with its pasture lands, and Beth Horon with its pasture lands: four cities.
23 ೨೩ ದಾನ್ಯರ ಸ್ವತ್ತಿನಿಂದ ಎಲ್ತೆಕೇ, ಗಿಬ್ಬೆತೋನ್,
Out of the tribe of Dan, Elteke with its pasture lands, Gibbethon with its pasture lands,
24 ೨೪ ಅಯ್ಯಾಲೋನ್, ಗತ್ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
Aijalon with its pasture lands, Gath Rimmon with its pasture lands: four cities.
25 ೨೫ ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.
Out of the half-tribe of Manasseh, Taanach with its pasture lands, and Gath Rimmon with its pasture lands: two cities.
26 ೨೬ ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
All the cities of the families of the rest of the children of Kohath were ten with their pasture lands.
27 ೨೭ ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
They gave to the children of Gershon, of the families of the Levites, out of the half-tribe of Manasseh Golan in Bashan with its pasture lands, the city of refuge for the man slayer, and Be Eshterah with its pasture lands: two cities.
28 ೨೮ ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
Out of the tribe of Issachar, Kishion with its pasture lands, Daberath with its pasture lands,
29 ೨೯ ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
Jarmuth with its pasture lands, En Gannim with its pasture lands: four cities.
30 ೩೦ ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
Out of the tribe of Asher, Mishal with its pasture lands, Abdon with its pasture lands,
31 ೩೧ ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
Helkath with its pasture lands, and Rehob with its pasture lands: four cities.
32 ೩೨ ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
Out of the tribe of Naphtali, Kedesh in Galilee with its pasture lands, the city of refuge for the man slayer, Hammothdor with its pasture lands, and Kartan with its pasture lands: three cities.
33 ೩೩ ಗೇರ್ಷೊನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು.
All the cities of the Gershonites according to their families were thirteen cities with their pasture lands.
34 ೩೪ ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,
To the families of the children of Merari, the rest of the Levites, out of the tribe of Zebulun, Jokneam with its pasture lands, Kartah with its pasture lands,
35 ೩೫ ಕರ್ತಾ, ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು.
Dimnah with its pasture lands, and Nahalal with its pasture lands: four cities.
36 ೩೬ ರೂಬೇನ್ಯರ ಸ್ವತ್ತಿನಿಂದ ಬೆಚೆರ್, ಯಹಚಾ,
Out of the tribe of Reuben, Bezer with its pasture lands, Jahaz with its pasture lands,
37 ೩೭ ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು;
Kedemoth with its pasture lands, and Mephaath with its pasture lands: four cities.
38 ೩೮ ಗಾದ್ಯರ ಸ್ವತ್ತಿನಿಂದ ಕೊಲೆ ಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,
Out of the tribe of Gad, Ramoth in Gilead with its pasture lands, the city of refuge for the man slayer, and Mahanaim with its pasture lands,
39 ೩೯ ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.
Heshbon with its pasture lands, Jazer with its pasture lands: four cities in all.
40 ೪೦ ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿಯಿಂದ ದೊರಕಿದ ಪಟ್ಟಣಗಳು ಒಟ್ಟು ಹನ್ನೆರಡು.
All these were the cities of the children of Merari according to their families, even the rest of the families of the Levites. Their lot was twelve cities.
41 ೪೧ ಲೇವಿಯರಿಗೆ ಇಸ್ರಾಯೇಲರ ಮಧ್ಯದಲ್ಲಿ ದೊರಕಿದ ಗೋಮಾಳ ಸಹಿತವಾದ ಪಟ್ಟಣಗಳು ನಲವತ್ತೆಂಟು.
All the cities of the Levites amongst the possessions of the children of Israel were forty-eight cities with their pasture lands.
42 ೪೨ ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಗೋಮಾಳಗಳಿದ್ದವು. ಎಲ್ಲಾ ಪಟ್ಟಣಗಳಿಗೂ ಹೀಗೆಯೇ ಇದ್ದಿತು.
Each of these cities included their pasture lands around them. It was this way with all these cities.
43 ೪೩ ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.
So the LORD gave to Israel all the land which he swore to give to their fathers. They possessed it, and lived in it.
44 ೪೪ ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಗಳಿಂದಲೂ ಸಮಾಧಾನವನ್ನು ಅನುಗ್ರಹಿಸಿದನು. ವೈರಿಗಳಲ್ಲಿ ಒಬ್ಬನೂ ಅವರೆದುರು ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.
The LORD gave them rest all around, according to all that he swore to their fathers. Not a man of all their enemies stood before them. The LORD delivered all their enemies into their hand.
45 ೪೫ ಯೆಹೋವನು ಇಸ್ರಾಯೇಲ್ಯರಿಗೆ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ. ಎಲ್ಲವೂ ನೆರವೇರಿದವು.
Nothing failed of any good thing which the LORD had spoken to the house of Israel. All came to pass.