< ಯೆಹೋಶುವನು 22 >
1 ೧ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ,
Yoshuwa ya kira mutanen Ruben, mutanen Gad, da rabin kabilar Manasse
2 ೨ “ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.
ya ce musu, “Kun yi duk abin da Musa bawan Ubangiji ya umarta, kun kuma yi mini biyayya cikin dukan umarnan da na ba ku.
3 ೩ ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.
Dukan waɗannan yawan kwanaki, har zuwa yau, ba ku yashe’yan’uwanku Isra’ilawa ba, amma kuka kiyaye umarnin da Ubangiji Allahnku ya ba ku.
4 ೪ ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
Yanzu da Ubangiji Allahnku ya ba’yan’uwanku hutu kamar yadda ya yi alkawari, sai ku koma gidajenku a ƙasar da Musa bawan Ubangiji ya ba ku a Urdun.
5 ೫ ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
Amma ku yi hankali, ku kiyaye umarnai da kuma dokokin da Musa bawan Ubangiji ya ba ku. Ku ƙaunaci Ubangiji Allahnku, ku yi tafiya kan hanyarsa, ku yi biyayya da umarnansa, ku riƙe shi sosai, ku bauta masa da dukan zuciyarku da kuma dukan ranku.”
6 ೬ ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
Sai Yoshuwa ya sa musu albarka, ya sallame su, suka kuwa tafi gidajensu.
7 ೭ ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ
(Musa ya riga ya ba rabin kabilar Manasse gādo a Bashan; sauran rabin kabilar kuma Yoshuwa ya ba su gādo tare’yan’uwansu a yammacin hayin Urdun.) Sa’ad da Yoshuwa ya sallame su su tafi gida, ya sa musu albarka,
8 ೮ ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನು
ya ce, “Ku koma gidajenku tare da dukiya mai yawa, babban garken dabbobi, azurfa da zinariya, tagulla da ƙarfe, da tufafi masu yawa sosai, sai ku raba ganimar da kuka samu daga abokan gābanku, da’yan’uwanku.”
9 ೯ ಆಗ ರೂಬೇನ್ಯರೂ ಗಾದ್ಯರೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯಿಂದ ತಮಗೆ ಸಿಕ್ಕಿದ ಸ್ವತ್ತಾದ ಗಿಲ್ಯಾದ್ ದೇಶಕ್ಕೆ ಹೊರಟು ಹೋದರು.
Saboda haka sai mutanen Ruben, mutanen Gad da kuma rabin mutanen kabilar Manasse, suka bar Isra’ilawa a Shilo cikin Kan’ana don su koma Gileyad, ƙasarsu, wadda suka samu bisa ga umarnin Ubangiji ta wurin Musa.
10 ೧೦ ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.
Da suka kai Gelilot kusa da Urdun cikin ƙasar Kan’ana, sai mutanen Ruben, mutanen Gad da kuma rabin mutanen kabilar Manasse suka gina bagade a can, a Urdun.
11 ೧೧ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಜನರು ಇಸ್ರಾಯೇಲ ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್ ನದಿಯ ತೀರಪ್ರದೇಶದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ಮಿಕ್ಕ ಇಸ್ರಾಯೇಲರಿಗೂ ತಿಳಿದಾಗ,
Sa’ad da Isra’ilawa suka ji cewa sun gina bagade a iyakar Kan’ana, a Gelilot kusa da Urdun wajen gefensu na Isra’ilawa,
12 ೧೨ ಅವರೆಲ್ಲರೂ ಶೀಲೋವಿನಲ್ಲಿ ಒಟ್ಟಿಗೆ ಸೇರಿ ಅವರೊಡನೆ ಹೋರಾಡಲು ಸಿದ್ಧರಾದರು.
sai dukan Isra’ilawa suka taru a Shilo don su je su yaƙe su.
13 ೧೩ ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು
Saboda haka sai Isra’ilawa suka aiki Finehas ɗan Eleyazar, firist, zuwa ƙasar Gileyad, wurin mutanen Ruben, mutanen Gad da kuma rabin mutanen kabilar Manasse.
14 ೧೪ ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.
Suka aiki shugabanni guda goma su tafi tare da shi, ɗaya daga kowace kabilar Isra’ila, kowannensu shugaba ne a iyalansa.
15 ೧೫ ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,
Sa’ad da suka je Gileyad, wurin mutanen Ruben, mutanen Gad da kuma rabin mutanen kabilar Manasse, sai suka ce musu,
16 ೧೬ “ಯೆಹೋವನ ಸರ್ವ ಸಭೆಯ ಮಾತನ್ನು ಕೇಳಿರಿ; ನೀವು ಇಸ್ರಾಯೇಲಿನ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ಯಜ್ಞವೇದಿಯನ್ನು ಕಟ್ಟಿಕೊಂಡದ್ದರಿಂದ ನೀವು ಯೆಹೋವನಿಗೆ ದ್ರೋಹ ಮಾಡಿದಂತಾಯಿತು; ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಂತಾಯಿತು.
“Dukan jama’ar Ubangiji sun ce yaya za ku juya wa Allah na Isra’ila baya haka? Yaya za ku daina bin Ubangiji ku gina wa kanku bagade, ku yi masa tawaye yanzu?
17 ೧೭ ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೋ? ಅದರ ದೆಸೆಯಿಂದ ಯೆಹೋವನ ಸಭೆಗೆ ವ್ಯಾಧಿ ಬಂದರೂ ನಾವು ಇನ್ನೂ ಅದರಿಂದ ಪೂರ್ಣ ಶುದ್ಧರಾಗಲಿಲ್ಲ.
Zunubin da Feyor ya yi bai ishe mu ba ne? Ga shi, har yanzu ba mu gama tsarkakewa daga wannan zunubi ba, ko da yake annoba ta auko wa mutanen Ubangiji!
18 ೧೮ ಈಗ ನೀವು ಪುನಃ ಯೆಹೋವನನ್ನು ತಳ್ಳಿ ಬಿಡುತ್ತಿದ್ದೀರೋ? ನೀವು ಈ ಹೊತ್ತು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದರೆ, ನಾಳೆಯೇ ಯೆಹೋವನ ಕೋಪಾಗ್ನಿಯು ಇಸ್ರಾಯೇಲ್ ಸರ್ವಸಭೆಯ ಮೇಲೆ ಉರಿಯ ತೊಡಗುವುದು.
Yanzu za ku daina bin Ubangiji ne? “In kuka yi wa Ubangiji tawaye yau, gobe zai yi fushi da dukan mutanen Isra’ila.
19 ೧೯ ನಿಮ್ಮ ದೇಶವು ಅಶುದ್ಧವಾಗಿದೆ ಎಂದು ತೋರಿದರೆ ಯೆಹೋವನ ಗುಡಾರವಿರುವ ಆತನ ಸ್ವಂತ ಸೀಮೆಗೆ ಬಂದು ನಮ್ಮ ಮಧ್ಯದಲ್ಲಿರುವ ಸ್ವತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಹೊರತು ನಿಮಗೋಸ್ಕರ ಇನ್ನೊಂದನ್ನು ಕಟ್ಟಿಕೊಂಡು ಯೆಹೋವನಿಗೂ ನಮಗೂ ವಿರೋಧವಾಗಿ ತಿರುಗಿ ಬೀಳಬೇಡಿರಿ.
Idan ƙasar mallakarku ƙazantacciya ce, sai ku haye zuwa ƙasar Ubangiji, inda tabanakul yake, mu zauna tare. Amma kada ku yi wa Ubangiji, ko kuma ku yi mana tawaye ta wurin gina wa kanku bagade wanda ba na Ubangiji Allahnmu ba.
20 ೨೦ ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.
Lokacin da Akan ɗan Zera ya yi rashin aminci game da kayan da aka keɓe, fushinsa Ubangiji bai auko a kan mutanen Isra’ila duka ba? Ai, ba shi kaɗai ya mutu don zunubinsa ba.”
21 ೨೧ ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:
Sai mutanen Ruben, mutanen Gad da kuma rabin mutanen kabilar Manasse suka amsa wa shugabannin iyalan Isra’ila suka ce,
22 ೨೨ “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.
“Maɗaukaki, Allah, Ubangiji! Maɗaukaki, Allah, Ubangiji ya sani! In mun yi wannan cikin tawaye ko rashin biyayya ga Ubangiji ne, kada ku bar mu da rai yau.
23 ೨೩ ನಾವು ಯೆಹೋವನಿಂದ ವಿಮುಖರಾಗಿ ಸರ್ವಾಂಗಹೋಮ, ಸಮಾಧಾನಯಜ್ಞ, ಧಾನ್ಯ ನೈವೇದ್ಯ ಇವುಗಳನ್ನು ಸಮರ್ಪಿಸುವುದಕ್ಕೋಸ್ಕರ ಈ ಯಜ್ಞವೇದಿಯನ್ನು ಕಟ್ಟಿದ್ದರೆ ಯೆಹೋವನು ತಾನೇ ನಮ್ಮನ್ನು ಶಿಕ್ಷಿಸಲಿ.
Idan mun bar bin Ubangiji, muka gina wa kanmu bagade don mu miƙa hadayun ƙonawa, ko kuwa hadayun gari, ko kuwa hadayun salama, to, bari Ubangiji kansa ya sāka mana.
24 ೨೪ ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’
“A’a! Mun yi haka ne don tsoro, kada nan gaba’ya’yanku su ce wa’ya’yanmu, ‘Me ya haɗa ku da Ubangiji, Allah na Isra’ila?
25 ೨೫ ರೂಬೇನ್ಯರೇ, ಗಾದ್ಯರೇ, ಯೆಹೋವನು ನಿಮಗೂ ನಮಗೂ ನಡುವೆ ಈ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದಾನೆ. ಯೆಹೋವನಲ್ಲಿ ನಿಮಗೆ ಯಾವ ಪಾಲೂ ಇಲ್ಲ ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೈವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.
Ubangiji ya sa Urdun ya zama iyaka tsakaninmu da ku, ku mutanen Ruben da mutanen Gad! Ba ku da rabo cikin Ubangiji.’’Ya’yanku za su iya sa’ya’yanmu su daina tsoron Ubangiji.
26 ೨೬ ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’
“Shi ya sa muka ce, ‘Bari mu yi shiri mu gina bagade, amma ba na ƙona hadayu ko na sadaka ba.’
27 ೨೭ ಆದರೆ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮಯಜ್ಞ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸಿ ಆರಾಧಿಸುವುದಕ್ಕೋಸ್ಕರ ನಮಗೂ ಹಕ್ಕಿದೆ ಎಂಬುದಕ್ಕೆ ಇದು ನಮಗೂ, ನಿಮಗೂ, ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಸಾಕ್ಷಿಯಾಗಿರುವುದು. ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ ಯೆಹೋವನಲ್ಲಿ ನಿಮಗೆ ಪಾಲಿಲ್ಲವೆಂದು ಹೇಳುವುದಕ್ಕೆ ಆಸ್ಪದವಿರುವುದಿಲ್ಲ.
Sai dai yă zama shaida tsakaninmu da ku, da kuma waɗanda za su zo a baya, cewa za mu yi wa Ubangiji sujada a wurinsa mai tsarki, za mu miƙa hadayunmu na ƙonawa, hadayu na zumunta. Sa’an nan, nan gaba’ya’yanku ba za su ce wa’ya’yanmu, ‘Ba ku da rabo a cikin Ubangiji ba.’
28 ೨೮ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ರೀತಿಯಾಗಿ ಹೇಳಿದರೆ ನಾವು ಅವರಿಗೆ ‘ಯೆಹೋವನ ಯಜ್ಞವೇದಿಯ ಮಾದರಿಯನ್ನು ನೋಡಿರಿ: ನಮ್ಮ ಪೂರ್ವಿಕರು ಇದನ್ನು ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸುವುದಕ್ಕೋಸ್ಕರ ಕಟ್ಟಲಿಲ್ಲ; ಇದು ನಮ್ಮ ನಿಮ್ಮ ಮಧ್ಯದಲ್ಲಿ ಒಂದು ಸಾಕ್ಷಿಯಾಗಿದೆಯಷ್ಟೆ’ ಎಂದು ಹೇಳುವೆವು.
“Muka kuma ce, ‘In har suka ce mana, ko’ya’yanmu haka, sai mu amsa mu ce ku dubi bagaden da yake daidai da na Ubangiji wanda iyayenmu suka gina, ba don ƙona hadayu da kuma yin sadaka ba, sai dai don yă zama shaida tsakaninmu da ku.’
29 ೨೯ ನಮ್ಮ ದೇವರಾದ ಯೆಹೋವನ ಗುಡಾರದ ಮುಂದಿರುವ ಯಜ್ಞವೇದಿಯ ಹೊರತು ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಮೊದಲಾದವುಗಳನ್ನು ಸಮರ್ಪಿಸುವುದಕ್ಕೋಸ್ಕರ ಬೇರೊಂದು ಯಜ್ಞವೇದಿಯನ್ನು ಕಟ್ಟಿ ಯೆಹೋವನಿಗೆ ವಿರುದ್ಧವಾಗಿ ದ್ರೋಹಿಗಳಾಗಿರದಂತಾಗಲಿ. ಹಾಗೆ ನಮಗೆ ಎಂದಿಗೂ ಆಗದಿರಲಿ” ಎಂದರು.
“Allah ya sawwaƙa mana mu tayar wa Ubangiji mu bar binsa, har mu gina bagade don miƙa hadayu na ƙonawa, da na gari, da na sadaka, ban da bagaden Ubangiji Allahnmu wanda yake tsaye a gaban tabanakul.”
30 ೩೦ ಯಾಜಕನಾದ ಫೀನೆಹಾಸನೂ ಅವನ ಜೊತೆಯಲ್ಲಿ ಬಂದ ಕುಲಾಧಿಪತಿಗಳಾಗಿರುವ ಇಸ್ರಾಯೇಲ್ ಪ್ರಭುಗಳು, ರೂಬೇನ್, ಗಾದ್, ಮನಸ್ಸೆಯ ಕುಲಗಳವರ ಮಾತುಗಳನ್ನು ಕೇಳಿ ಸಂತೋಷಪಟ್ಟರು.
Da Finehas firist, da shugabannin mutanen, shugabannin iyalan Isra’ila, suka ji abin da mutanen Ruben, mutanen Gad da kuma rabin mutanen kabilar Manasse suka ce, sai suka ji daɗi.
31 ೩೧ ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.
Sai Finehas ɗan Eleyazar, firist, ya ce wa mutanen Ruben, mutanen Gad da kuma rabin mutanen kabilar Manasse, “Yau mun san Ubangiji yana tare da mu, domin ba ku yi wa Ubangiji rashin aminci cikin wannan abu ba. Yanzu kun kuɓutar da Isra’ilawa daga hannun Ubangiji.”
32 ೩೨ ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು
Sai Finehas ɗan Eleyazar, firist, da shugabannin suka koma Kan’ana daga saduwa da mutanen Ruben da mutanen Gad a Gileyad, suka kai wa Isra’ilawa rahoto.
33 ೩೩ ಅವರು ಬಹು ಸಂತೋಷಪಟ್ಟು ದೇವರನ್ನು ಕೊಂಡಾಡಿ ರೂಬೇನ್ ಗಾದ್ ಕುಲಗಳೊಡನೆ ಯುದ್ಧ ಮಾಡಿ ಅವರ ದೇಶವನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ಬಿಟ್ಟರು.
Isra’ilawa suka ji daɗin rahoton da suka ji, suka kuma yi wa Allah yabo. Ba su sāke yin maganar zuwa yaƙi don su rushe ƙasar da mutanen Ruben da mutanen Gad suke ciki ba.
34 ೩೪ ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.
Sai mutanen Ruben da mutanen Gad suka ba wa wannan bagaden sunan, Shaida Tsakaninmu, cewa Ubangiji Allah ne.