< ಯೆಹೋಶುವನು 24 >
1 ೧ ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.
Josué te rasanble tout tribi Israël yo nan Sichem. Li te rele ansyen Israël yo, chèf an tèt pa yo, jij pa yo ak ofisye pa yo. Yo te prezante yo menm devan Bondye.
2 ೨ ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
Josué te di a tout pèp la: “Konsa pale SENYÈ a, Bondye Israël la: ‘Depi nan tan ansyen yo, zansèt nou yo te viv lòtbò Rivyè a. Menm Térach, papa Abraham nan, ak papa a Nachor, te sèvi lòt dye yo.
3 ೩ ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.
Epi Mwen te pran zansèt nou an, Abraham, pou l soti lòtbò Rivyè a. Mwen te mennen li pase nan tout peyi a Canaan yo. Mwen te miltipliye desandan li yo e te bay li Isaac.
4 ೪ ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.
A Isaac, Mwen te bay Jacob avèk Ésaü. A Ésaü, Mwen te bay Mòn Séir pou posede l, men Jacob avèk fis li yo te desann an Égypte.
5 ೫ ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.
“‘Epi Mwen te voye Moïse avèk Aaron pou te toumante Égypte pa sa Mwen te fè nan mitan li yo. Epi apre, Mwen te mennen nou sòti.
6 ೬ ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.
Mwen te mennen zansèt nou yo sòti an Égypte, e nou te rive bò kote lanmè a. Konsa, Égypte te kouri dèyè zansèt nou yo avèk cha ak sòlda sou cheval yo jis rive nan Lamè Wouj la.
7 ೭ ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.
Men lè yo te kriye vè SENYÈ a, Li te mete tenèb antre nou menm avèk Ejipsyen yo. Mwen te mennen lanmè a sou yo pou te kouvri yo, epi pwòp zye pa nou te wè sa Mwen te fè an Égypte. Konsa, nou te viv nan dezè a pandan anpil tan.
8 ೮ ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.
“‘Alò, Mwen te mennen nou antre nan peyi Amoreyen ki te rete lòtbò Jourdain an. Yo te goumen avèk nou, epi Mwen te livre yo nan men nou. Nou te pran posesyon a peyi pa yo a e Mwen te detwi yo devan nou.
9 ೯ ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
Konsa, Balak, fis Tsippor a, wa Moab la, te leve pou te goumen kont Israël, e li te voye rele Balaam, fis a Beor a, pou modi nou.
10 ೧೦ ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.
Men Mwen pa t dakò koute Balaam. Konsa, li te oblije beni nou, e Mwen te delivre nou soti nan men li.
11 ೧೧ ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.
“‘Nou te travèse Jourdain an pou te rive Jéricho, epi pèp Jéricho yo te goumen kont nou; Amoreyen yo, Ferezyen yo, Kananeyen yo avèk Etyen yo avèk Gigazyen yo, Evyen yo ak Jebizyen yo. Konsa, Mwen te livre yo nan men nou.
12 ೧೨ ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.
Apre, Mwen te voye gèp la devan nou e li te chase fè sòti wa Amoreyen yo devan nou, men pa akoz nepe nou ni banza nou.
13 ೧೩ ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”
Mwen te bannou yon peyi pou sila nou pa t travay, vil ke nou pa t bati e nou te viv ladan yo. N ap manje nan chan rezen avèk chan doliv ke nou pa t plante.’
14 ೧೪ ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.
“Koulye a, pou sa, gen lakrent SENYÈ a e sèvi Li avèk bon kè ak verite. Mete akote dye ke zansèt nou yo te konn sèvi lòtbò Rivyè a ak an Égypte pou sèvi SENYÈ a.
15 ೧೫ ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
Si nou twouve li degoutan nan zye nou pou sèvi SENYÈ a, chwazi pou kont nou jodi a, kilès nou va sèvi; si se dye ke zansèt nou yo te konn sèvi lòtbò Rivyè a, oswa dye a Amoreyen yo, de peyi sila nou ap viv yo. Men pou mwen avèk lakay mwen, nou va sèvi SENYÈ a.”
16 ೧೬ ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.
Pèp la te reponn e te di: “Se lwen de nou pou nou ta abandone SENYÈ a pou sèvi lòt dye yo;
17 ೧೭ ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
paske SENYÈ a, Bondye nou an, se Li ki te mennen nou avèk zansèt nou yo monte sòti nan peyi Égypte la, soti nan kay esklavaj la, ki te fè gwo sign sila yo nan mitan nou. Se Li ki te pwoteje nou nan tout chemen kote nou pase e pami tout pèp nan mitan a sila nou te pase yo.
18 ೧೮ ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
SENYÈ a te pouse fè sòti devan nou tout pèp yo, menm Amoreyen ki te viv nan peyi a. Konsa, nou osi, nou va sèvi SENYÈ a; paske se Li menm ki Dye nou.”
19 ೧೯ ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
Alò, Josué te di a pèp la: “Nou p ap kapab sèvi SENYÈ a, paske Li se yon Bondye ki sen. Li se yon Bondye ki jalou. Li p ap padone transgresyon nou yo oswa peche nou yo.
20 ೨೦ ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.
Si nou abandone SENYÈ a pou sèvi dye etranje yo; alò, Li va vire fè nou mal e vin manje nou nèt apre Li te fin fè nou byen.”
21 ೨೧ ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
Pèp la te di a Josué: “Non, men nou va sèvi SENYÈ a.”
22 ೨೨ ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು
Josué te di a pèp la: “Nou se temwen kont pwòp tèt nou ke nou te chwazi pou kont nou SENYÈ a, pou sèvi Li.” Yo te reponn: “Nou se temwen.”
23 ೨೩ ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
“Koulye a, pou sa, mete akote dye etranje ki nan mitan nou yo e tounen kè nou vè SENYÈ a, Bondye Israël la.”
24 ೨೪ ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
Pèp la te di a Josué: “Nou va sèvi SENYÈ a, Bondye nou an e nou va obeyi vwa Li.”
25 ೨೫ ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
Konsa, Josué te fè yon akò avèk pèp la nan jou sa a. Li te fè pou yo yon lwa ak yon règleman nan Sichem.
26 ೨೬ ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
Josué te ekri pawòl sila yo nan liv lalwa Bondye a; epi li te pran yon gwo wòch e te fè l kanpe la anba gwo bwadchenn ki te akote sanktyè SENYÈ a.
27 ೨೭ ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ
Josué te di a tout pèp la: “Gade byen, wòch sa a va tankou yon temwen kont nou; paske li te tande tout pawòl SENYÈ a te pale nou yo. Konsa, li va tankou yon temwen kont nou, pou nou pa vin enfidèl anvè Bondye nou an.”
28 ೨೮ ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.
Konsa, Josué te voye tout pèp la ale. Yo chak rive nan pwòp eritaj pa yo.
29 ೨೯ ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.
Li te vin rive apre bagay sa yo ke Josué, fis a Nun nan, sèvitè Bondye a, te vin mouri, avèk laj san-dis ane.
30 ೩೦ ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
Yo te antere li nan teritwa eritaj li nan Thimnath-Sérach, ki nan peyi ti mòn Éphraïm yo, sou nò a mòn Gaasch.
31 ೩೧ ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.
Israël te sèvi SENYÈ a pandan tout jou a Josué yo, tout jou a ansyen ki te vivan nan tan Josué yo, e yo te konnen tout zèv SENYÈ a te fè pou Israël.
32 ೩೨ ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.
Alò, yo te antere zo Joseph yo, ke fis Israël yo te mennen monte soti Égypte, nan Sichem, nan mòso tè ke Jacob te achte nan men fis a Hamor yo, papa a Sichem, pou san pyès lajan an. Konsa, yo te devni eritaj a fis Joseph yo.
33 ೩೩ ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.
Anplis, Éléazar, fis a Aaron an te vin mouri. Yo te antere li nan Guibeath-Phinées, ki te bay a fis li nan peyi ti kolin a Éphraïm yo.