< ಯೆಹೋಶುವನು 3 >
1 ೧ ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
১যিহোশূয় অনেক ভোরে ঘুম থেকে উঠে সমস্ত ইস্রায়েল-সন্তানদের সঙ্গে শিটীম থেকে যাত্রা শুরু করে যর্দ্দনের কাছে উপস্থিত হলেন, কিন্তু তখন পার না হয়ে সেই স্থানেই রাত কাটালেন।
2 ೨ ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ
২তিন দিনের র পর আধিকারিকরা শিবিরের মধ্য দিয়ে গেলেন;
3 ೩ “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.
৩তাঁরা লোকদের এই আজ্ঞা দিলেন; তোমরা যখন তোমাদের ঈশ্বর সদাপ্রভুর নিয়ম সিন্দুক ও লেবীয় যাজকদের তা বহন করতে দেখবে, তখন নিজের নিজের স্থান থেকে যাত্রা শুরু করবে ও তার পেছনে পেছনে যাবে।
4 ೪ ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
৪সেখানে তার ও তোমাদের মধ্যে প্রায় দুই হাজার হাতের দূরত্ব থাকবে; তার কাছে যাবে না; যেন তোমরা তোমাদের গন্তব্য পথ জানতে পার, কারণ এর আগে তোমরা এই পথ দিয়ে যাও নি।
5 ೫ ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
৫পরে যিহোশূয় লোকদের বললেন, “তোমরা নিজেদের পবিত্র কর, কারণ কালকে সদাপ্রভু তোমাদের মধ্যে আশ্চর্য্য কাজ করবেন।”
6 ೬ ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
৬এর পরে যিহোশূয় যাজকদের বললেন, “তোমরা নিয়ম সিন্দুক তুলে নিয়ে লোকদের আগে আগে যাও৷” তাতে তারা নিয়ম সিন্দুক তুলে নিয়ে লোকদের আগে আগে গেল।
7 ೭ ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
৭তখন সদাপ্রভু যিহোশূয়কে বললেন, “আজ থেকে আমি সমস্ত ইস্রায়েলের সামনে তোমাকে মহিমান্বিত করব, যেন তারা জানতে পারে যে আমি যেমন মোশির সঙ্গে সঙ্গে ছিলাম, তেমনি তোমারও সঙ্গে সঙ্গে থাকব।
8 ೮ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
৮তুমি নিয়ম-সিন্দুকবাহক যাজকদের এই আদেশ দাও, যর্দ্দনের জলের কাছে উপস্থিত হলে, তোমরা যর্দ্দন নদীর সামনে দাঁড়িয়ে থাকবে।”
9 ೯ ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,
৯তখন যিহোশূয় ইস্রায়েল-সন্তানদের বললেন, “তোমরা এখানে এস, তোমাদের ঈশ্বর সদাপ্রভুর বাক্য শোন।”
10 ೧೦ “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
১০এবং যিহোশূয় বললেন, “জীবন্ত ঈশ্বর যে তোমাদের মধ্যে উপস্থিত এবং কনানীয়, হিত্তীয়, হিব্বীয়, পরিষীয়, গির্গাশীয়, ইমোরীয় ও যিবূষীয়দের তোমাদের সামনে থেকে নিশ্চয়ই তাড়িয়ে দেবেন, তা তোমরা এর মাধ্যমে জানতে পারবে।
11 ೧೧ ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
১১দেখ, সমস্ত পৃথিবীর প্রভুর নিয়ম সিন্দুক তোমাদের আগে যর্দনে যাচ্ছে।
12 ೧೨ ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
১২এখন তোমরা ইস্রায়েলের প্রত্যেক বংশ থেকে একজন করে অর্থাৎ বার বংশ থেকে বার জনকে, গ্রহণ কর।
13 ೧೩ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
১৩পরে এইরকম হবে, সমস্ত ভূমণ্ডলের প্রভু সদাপ্রভুর নিয়ম সিন্দুক বহনকারী যাজকদের পা যর্দ্দনের জলে ডোবার সঙ্গে সঙ্গে যর্দ্দনের জল, অর্থাৎ উপর থেকে যে জল বয়ে আসছে, তা স্থির হবে এবং এক রাশি হয়ে দাঁড়িয়ে থাকবে।”
14 ೧೪ ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
১৪তখন লোকেরা যর্দ্দন পার হবার জন্য নিজেদের তাঁবু থেকে যাত্রা শুরু করল, আর যাজকরা নিয়ম সিন্দুক বহন করার জন্য লোকদের সামনে গেল।
15 ೧೫ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.
১৫আর সিন্দুক-বাহকেরা যখন যর্দ্দনের সামনে উপস্থিত হল এবং জলের কাছে সিন্দুক বহনকারী যাজকদের পা জলে ডুবে গেল, প্রকৃত পক্ষে ফসল কাটার দিনের যর্দ্দনের সমস্ত জল তীরের উপরে থাকে৷
16 ೧೬ ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
১৬তখন উপর থেকে আসা সমস্ত জল দাঁড়াল, অনেক দূরে সর্ত্তনের কাছে আদম নগরের কাছে এক রাশি হয়ে স্থির হয়ে থাকল এবং অরাবা তলভূমির সমুদ্রে অর্থাৎ লবণ সমুদ্রে যে জল নেমে যাচ্ছিল, তা সম্পূর্ণভাবে বন্ধ হল; তাতে লোকেরা যিরীহোর সামনে দিয়েই পার হল।
17 ೧೭ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
১৭আর যে পর্যন্ত না সমস্ত লোক যর্দ্দন পার হল, সেই পর্যন্ত সদাপ্রভুর নিয়ম সিন্দুক বহনকারী যাজকরা যর্দ্দনের মধ্যে শুকনো জমিতে দাঁড়িয়ে রইল এবং সমস্ত ইস্রায়েল শুকনো জমি দিয়ে পার হয়ে গেল।