< ಯೆಹೋಶುವನು 3 >

1 ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.
بامدادان یوشع بزودی برخاسته، او و تمامی بنی‌اسرائیل از شطیم روانه شده، به اردن آمدند، و قبل از عبور کردن در آنجا منزل گرفتند.۱
2 ಮೂರು ದಿನಗಳಾದ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ
و بعد از سه روز روسای ایشان از میان لشکرگاه گذشتند.۲
3 “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.
و قوم را امر کرده، گفتند: «چون تابوت عهد یهوه، خدای خود را ببینید که لاویان کهنه آن را می‌برند، آنگاه شما از جای خود روانه شده، در عقب آن بروید.۳
4 ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.
و در میان شما و آن، به مقدار دوهزار ذراع مسافت باشد، ونزدیک آن میایید تا راهی که باید رفت بدانید، زیراکه از این راه قبل از این عبور نکرده‌اید.»۴
5 ಇದಲ್ಲದೆ ಯೆಹೋಶುವನು ಜನರಿಗೆ “ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು” ಎಂದು ಹೇಳಿದನು.
و یوشع به قوم گفت: «خود را تقدیس نمایید زیرا فرداخداوند در میان شما کارهای عجیب خواهدکرد.»۵
6 ನಂತರ ಯೆಹೋಶುವನು ಯಾಜಕರಿಗೆ “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ಹೊಳೆ ದಾಟಿರಿ” ಎಂದು ಆಜ್ಞಾಪಿಸಲು ಅವರು ಆ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ಹೋದರು.
و یوشع کاهنان را خطاب کرده، گفت: «تابوت عهد را برداشته، پیش روی قوم بروید.» پس تابوت عهد را برداشته، پیش روی قوم روانه شدند.۶
7 ಆಗ ಯೆಹೋವನು ಯೆಹೋಶುವನಿಗೆ “ನಾನು ಈ ದಿನ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂದು ಅವರಿಗೆ ಗೊತ್ತಾಗುವುದು.
و خداوند یوشع را گفت: «امروز به بزرگ ساختن تو در نظر تمام اسرائیل شروع می‌کنم تابدانند که چنانکه با موسی بودم با تو نیز خواهم بود.۷
8 ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು” ಎಂದು ಹೇಳಿದನು.
پس تو کاهنان را که تابوت عهد رابرمی دارند امر فرموده، بگو: چون شما به کنار آب اردن برسید در اردن بایستید.»۸
9 ಆಗ ಯೆಹೋಶುವನು ಇಸ್ರಾಯೇಲ್ಯರಿಗೆ “ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವನ ಮಾತುಗಳನ್ನು ಕೇಳಿರಿ” ಎಂದು ಹೇಳಿ,
و یوشع بنی‌اسرائیل را گفت: «اینجا نزدیک آمده، سخنان یهوه خدای خود را بشنوید.»۹
10 ೧೦ “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.
و یوشع گفت: «به این خواهید دانست که خدای زنده در میان شماست، و او کنعانیان و حتیان و حویان و فرزیان و جرجاشیان و اموریان و یبوسیان را از پیش روی شما البته بیرون خواهد کرد.۱۰
11 ೧೧ ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.
اینک تابوت عهد خداوند تمامی زمین، پیش روی شما به اردن عبور می‌کند.۱۱
12 ೧೨ ಆಗ ನೀನು ಇಸ್ರಾಯೇಲರ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.
پس الان دوازده نفر از اسباطاسرائیل، یعنی از هر سبط یک نفر را انتخاب کنید.۱۲
13 ೧೩ ಸರ್ವಲೋಕದ ಒಡೆಯನಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ ಮೇಲಿನಿಂದ ಹರಿದು ಬರುವ ನೀರು ಮುಂದೆ ಸಾಗದೆ, ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು” ಎಂದು ತಿಳಿಸಿದನು.
و واقع خواهد شد چون کف پایهای کاهنانی که تابوت یهوه، خداوند تمامی زمین رابرمی دارند در آبهای اردن قرار گیرد که آبهای اردن، یعنی آبهایی که از بالا می‌آید شکافته شده مثل توده بر روی هم خواهد ایستاد.»۱۳
14 ೧೪ ಜನರು ಯೊರ್ದನ್ ನದಿಯನ್ನು ದಾಟುವುದಕ್ಕೋಸ್ಕರ ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.
و چون قوم از خیمه های خود روانه شدند تا از اردن عبور کنند و کاهنان تابوت عهد را پیش روی قوم می‌بردند.۱۴
15 ೧೫ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.
و بردارندگان تابوت به اردن رسیدند، و پایهای کاهنانی که تابوت رابرداشته بودند، به کنار آب فرو رفت (و اردن، تمام موسم حصاد، بر همه کناره هایش سیلاب می‌شود).۱۵
16 ೧೬ ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.
واقع شد که آبهایی که از بالامی آمد، بایستاد و به مسافتی بسیار دور تا شهرآدم که به‌جانب صرتان است، بلند شد، و آبی که به سوی دریای عربه، یعنی بحرالملح می‌رفت تمام قطع شد، و قوم در مقابل اریحا عبور کردند.۱۶
17 ೧೭ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.
و کاهنانی که تابوت عهد خداوند رابرمی داشتند در میان اردن بر خشکی قایم ایستادند، و جمیع اسرائیل به خشکی عبورکردند تا تمامی قوم از اردن، بالکلیه گذشتند.۱۷

< ಯೆಹೋಶುವನು 3 >