< ಯೆಹೋಶುವನು 4 >
1 ೧ ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ
Mikor pedig az egész nép teljesen általment vala a Jordánon, szóla az Úr Józsuénak, mondván:
2 ೨ “ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು
Vegyetek magatokhoz a népből tizenkét férfiút, egy-egy férfiút egy-egy nemzetségből.
3 ೩ ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.
És parancsoljátok nékik, mondván: Vegyetek fel innét a Jordán közepéből, arról a helyről, a hol bátorsággal állanak a papok lábai, tizenkét követ, és vigyétek át azokat magatokkal, és tegyétek le a szálláson, a hol megháltok ez éjszaka.
4 ೪ ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ
Előhivá azért Józsué a tizenkét férfiút, a kiket az Izráel fiai közül rendelt vala, egy-egy férfiút egy-egy nemzetségből;
5 ೫ “ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
És monda nékik Józsué: Menjetek át az Úrnak, a ti Isteneteknek frigyládája előtt a Jordán közepébe, s vegyen fel mindegyikőtök egy-egy követ az ő vállára, az Izráel fiai nemzetségeinek száma szerint,
6 ೬ ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ
Hogy legyen ez jelül köztetek. Ha kérdezik majd ezután a ti fiaitok, mondván: Mire valók néktek ezek a kövek?
7 ೭ ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
Mondjátok meg nékik, hogy kétfelé vált a Jordánnak vize az Úr frigyládája előtt, mikor általment a Jordánon; ketté vált a Jordánnak vize, és ezek a kövek emlékeztetőül lesznek az Izráel fiainak mindörökre.
8 ೮ ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
És úgy cselekedének Izráel fiai, a mint megparancsolta vala Józsué, és felvevének a Jordán közepéből tizenkét követ, a mint megmondotta vala az Úr Józsuénak, az Izráel fiai nemzetségeinek száma szerint, és általhozák magokkal az éjjeli szállásra és ott letevék azokat.
9 ೯ ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.
Tizenkét követ állíta fel Józsué a Jordán közepén is, azon a helyen, a hol állottak vala a frigyládát vivő papok lábai; ott is vannak mind e mai napig.
10 ೧೦ ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.
A papok pedig, a ládának hordozói, állanak vala a Jordán közepén, a míg végbe mene mind az a dolog, a mit parancsolt vala az Úr Józsuénak, hogy mondja meg a népnek, egészen úgy, a mint Mózes parancsolta vala Józsuénak. A nép pedig sietett és általméne.
11 ೧೧ ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.
És a mint véget ére az egész nép általmenetele, általméne az Úr ládája is és a papok is, a nép előtt.
12 ೧೨ ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.
Általmentek vala a Rúben fiai, a Gád fiai és Manassé félnemzetsége is felfegyverkezve az Izráel fiai előtt, a miképen szólt vala nékik Mózes.
13 ೧೩ ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:
Mintegy negyven ezernyi fegyveres vitéz ment vala át az Úr előtt a harczra, Jérikhónak sík mezejére.
14 ೧೪ ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.
Azon a napon felmagasztalá az Úr Józsuét az egész Izráel szemei előtt, és félék őt, a mint félték vala Mózest, életének minden napjaiban.
15 ೧೫ ಯೆಹೋವನು ಯೆಹೋಶುವನ ಸಂಗಡ ಮಾತನಾಡಿ “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು” ಎಂದನು.
Mert szólt vala az Úr Józsuénak, mondván:
Parancsold meg a papoknak, a kik a bizonyság ládáját hordozzák, hogy jőjjenek fel a Jordánból.
17 ೧೭ ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.
És parancsola Józsué a papoknak, mondván: Jőjjetek fel a Jordánból!
18 ೧೮ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.
És lőn, hogy a mint a papok, az Úr frigyládájának hordozói, feljöttek vala a Jordán közepéből, és érintik vala a papok talpai a szárazt: visszatére a Jordán vize az ő helyére, és folyt vala, mint az előtt, minden partja felett.
19 ೧೯ ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.
A nép pedig az első hónak tizedik napján jöve fel a Jordánból, és tábort üte Gilgálban, Jérikhónak keleti határán.
20 ೨೦ ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.
Azt a tizenkét követ is, a melyeket a Jordánból hoztak vala, Gilgálban állatá fel Józsué.
21 ೨೧ ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ
És szóla Izráel fiainak, mondván: Ha fiaitok kérdezik majd apáiktól, mondván: Mire valók ezek a kövek?
22 ೨೨ ‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.
Tudassátok majd a ti fiaitokkal, mondván: Szárazon jött át Izráel ezen a Jordánon.
23 ೨೩ ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.
Mert kiszárította az Úr, a ti Istenetek a Jordán vizét ti előttetek, míg általjövétek rajta, a miképen cselekedett vala az Úr, a ti Istenetek a Veres tengerrel, a melyet megszárított előttünk; míg általjövénk rajta.
24 ೨೪ ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.
Hogy megismerje a földnek minden népe az Úrnak kezét, hogy bizony erős az; hogy féljétek az Urat, a ti Isteneteket minden időben.