< ಯೆಹೋಶುವನು 8 >

1 ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
পরে সদাপ্রভু যিহোশূয়কে বললেন, “তুমি ভয় পেয়ো না, নিরাশ হয়ো না; সমস্ত সৈন্যকে সঙ্গে করে নাও, ওঠ, অয়ে যাও; দেখ, আমি অয়ের রাজাকে ও তার প্রজাদের এবং তার নগর ও তার দেশ তোমার হাতে সমর্পণ করেছি।
2 ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
তুমি যিরীহোর ও সেখানের রাজার প্রতি যেমন করেছিলে, অয়ের ও সেখানের রাজার প্রতিও তেমনই করবে, কিন্তু তার লুটদ্রব্য ও পশু তোমরা তোমাদের জন্য নেবে। তুমি নগরের বিরুদ্ধে পিছনের দিকে তোমার এক দল সৈন্য গোপনে রাখ।”
3 ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ
তখন যিহোশূয় ও সমস্ত যোদ্ধা উঠে অয়ের বিরুদ্ধে যাত্রা করলেন; যিহোশূয় ত্রিশ হাজার বলবান বীর মনোনীত করলেন এবং তাদেরকে রাতে পাঠিয়ে দিলেন।
4 “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.
তিনি এই আদেশ দিলেন, “দেখ, তোমরা নগরের পিছনে নগরের বিরুদ্ধে লুকিয়ে থাকবে; নগর থেকে বেশী দূরে যাবে না, কিন্তু সবাই প্রস্তুত থাকবে।
5 ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.
পরে আমি ও আমার সমস্ত সঙ্গীরা নগরের কাছে উপস্থিত হব; আর তারা যখন আগের মত আমাদের বিরুদ্ধে বের হয়ে আসবে, তখন আমরা তাদের সামনে থেকে পালিয়ে যাব।
6 ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.
আর তারা বের হয়ে আমাদের পিছন পিছন আসবে, শেষে আমরা তাদেরকে নগর থেকে দূরে আকর্ষণ করব; কারণ তারা বলবে, এরা আগের মত আমাদের সামনে দিয়ে পালিয়ে যাচ্ছে; এই ভাবে আমরা তাদের সামনে থেকে পালিয়ে যাব;
7 ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.
আর তোমরা সেই গোপন জায়গা থেকে উঠে নগর অধিকার করবে; কারণ তোমাদের ঈশ্বর সদাপ্রভু তা তোমাদের হাতে সমর্পণ করবেন।
8 ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.
নগর আক্রমণ করার সঙ্গে সঙ্গে তোমরা নগরে আগুন লাগিয়ে দেবে; তোমরা সদাপ্রভুর বাক্য অনুসারে কাজ করবে; দেখ, আমি তোমাদেরকে আদেশ করলাম।”
9 ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.
এই ভাবে যিহোশূয় তাদেরকে পাঠালেন; আর তারা গিয়ে অয়ের পশ্চিমে বৈথেলের ও অয়ের মাঝে লুকিয়ে থাকল; কিন্তু যিহোশূয় লোকদের মধ্যে সেই রাত কাটালেন।
10 ೧೦ ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.
১০পরে যিহোশূয় খুব ভোরে উঠে লোক সংগ্রহ করলেন, আর তিনি ও ইস্রায়েলের প্রাচীনেরা লোকদের আগে আগে অয়ে গেলেন।
11 ೧೧ ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.
১১আর তার সঙ্গী, সমস্ত যোদ্ধারা গেল এবং কাছে গিয়ে নগরের সামনে উপস্থিত হল, আর অয়ের উত্তরদিকে শিবির স্থাপন করল; তাঁর ও অয়ের মধ্যে এক উপত্যকা ছিল।
12 ೧೨ ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.
১২আর তিনি প্রায় পাঁচ হাজার লোক নিয়ে নগরের পশ্চিম দিকে বৈথেলের ও অয়ের মধ্যে লুকিয়ে রাখলেন।
13 ೧೩ ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.
১৩এই ভাবে লোকেরা নগরের উত্তর দিকের গুপ্ত দলকে স্থাপন করল এবং যিহোশূয় ঐ রাতে উপত্যকার মধ্যে গেলেন।
14 ೧೪ ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.
১৪পরে যখন অয়ের রাজা তা দেখলেন, তখন নগরের লোকেরা, রাজা ও তাঁর সকল লোক, তাড়াতাড়ি খুব ভোরে উঠে ইস্রায়েলের সঙ্গে যুদ্ধ করতে বের হয়ে নির্ধারিত স্থানে অরাবা উপত্যকার সামনে গেলেন; কিন্তু তাঁর বিরুদ্ধে এক দল সৈন্য নগরের পিছনে লুকিয়ে আছে, তা তিনি জানতেন না।
15 ೧೫ ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.
১৫যিহোশূয় ও সমস্ত ইস্রায়েল তাদের সামনে নিজেদেরকে পরাজিতদের মত দেখিয়ে মরুপ্রান্তের রাস্তা দিয়ে পালিয়ে গেল।
16 ೧೬ ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.
১৬তাতে নগরে অবস্থিত সব লোককে ডাকা হল, যেন তারা তাদের পেছনে দৌড়িয়ে যায়। আর তারা যিহোশূয়ের পিছন পিছন যেতে যেতে নগর থেকে দূরে আকর্ষিত হল;
17 ೧೭ ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.
১৭বের হয়ে ইস্রায়েলের পিছনে গেল না, এমন এক জনও অয়ে বা বৈথেলে অবশিষ্ট থাকল না; সবাই নগরের দরজা খোলা রেখে ইস্রায়েলের পিছন পিছন দৌড়াল।
18 ೧೮ ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.
১৮তখন সদাপ্রভু যিহোশূয়কে বললেন, “তুমি তোমার হাতের বর্শা অয়ের দিকে বিস্তার কর; কারণ আমি সেই নগর তোমার হাতে দেব।” তখন যিহোশূয় তার হাতের বর্শা নগরের দিকে বিস্তার করল।
19 ೧೯ ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.
১৯তিনি হাত বাড়ানোর সঙ্গে সঙ্গে গোপনে অবস্থিত সৈন্যদল অমনি তাদের জায়গা থেকে উঠে দ্রুত গেল ও নগরে প্রবেশ করে তা অধিকার করল এবং তাড়াতাড়ি নগরে আগুন লাগিয়ে দিল।
20 ೨೦ ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.
২০পরে অয়ের লোকেরা পিছন ফিরে দেখল, আর দেখ, নগরের ধোঁয়া আকাশে উঠছে, কিন্তু তারা এদিকে কি ওদিকে কোন দিকেই পালানোর উপায় পেল না; আর মরুপ্রান্তে যে লোকেরা পালিয়ে যাচ্ছিল তারা সেই লোকদের দিকে ফিরে আক্রমণ করতে লাগল যারা তাদেরকে তাড়া করছিল।
21 ೨೧ ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.
২১যখন গোপনে অবস্থিত সৈন্যদল নগর অধিকার করেছে ও নগরের ধোঁয়া উঠছে, তা দেখে যিহোশূয় ও সমস্ত ইস্রায়েল ফিরে অয়ের লোকদেরকে হত্যা করতে লাগলেন;
22 ೨೨ ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
২২আর অন্য দলও নগর থেকে তাদের বিরুদ্ধে আসছিল; সুতরাং তারা ইস্রায়েলের মধ্যে পড়ল, কয়েকজন এপাশে কয়েকজন ওপাশে; আর তারা তাদেরকে এমন আঘাত করল যে, তাদের কেউই অবশিষ্ট বা রক্ষা পেল না।
23 ೨೩ ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.
২৩আর তারা অয়ের রাজাকে জীবিত ধরে যিহোশূয়ের কাছে নিয়ে গেল।
24 ೨೪ ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
২৪এই ভাবে ইস্রায়েল তাদের সবাইকে মাঠে, অর্থাৎ যে মরুপ্রান্তে অয়ে বসবাসকারী যে লোকেরা তাদের তাড়া করেছিল, সেখানে তাদেরকে সম্পূর্ণরূপে হত্যা করল; তাদের সবাই তরোয়ালের আঘাতে মারা গেল, পরে সমস্ত ইস্রায়েল ফিরে অয়ে গিয়ে তরোয়াল দিয়ে সেখানকার লোকদেরকেও হত্যা করল।
25 ೨೫ ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.
২৫সেই দিনের অয়ে বসবাসকারী সমস্ত লোক অর্থাৎ মহিলা পুরুষ সবাইকে মিলিয়ে মোট বার হাজার লোক মারা গেল।
26 ೨೬ ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
২৬কারণ অয়ে বসবাসকারী সবাই যতক্ষণ না সম্পূর্ণভাবে ধ্বংস হল, ততক্ষণ যিহোশূয় তাঁর বাড়ানো বর্শা ধরা হাত নামাতে পারলেন না।
27 ೨೭ ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
২৭যিহোশূয়ের প্রতি সদাপ্রভুর দেওয়া কথা অনুযায়ী ইস্রায়েল শুধু ঐ নগরের পশু ও সমস্ত লুটদ্রব্য নিজেদের জন্য গ্রহণ করল।
28 ೨೮ ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.
২৮আর যিহোশূয় অয় নগর পুড়িয়ে দিয়ে চিরস্থায়ী ঢিবি এবং ধ্বংসের স্থান করলেন, তা আজও সেই রকম আছে।
29 ೨೯ ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.
২৯আর তিনি অয়ের রাজাকে সন্ধ্যা পর্যন্ত গাছে টাঙ্গিয়ে রাখলেন, পরে সূর্যাস্তের দিনের লোকেরা যিহোশূয়ের আদেশে তাঁর মৃত দেহ গাছ থেকে নামিয়ে নগরের দরজার-প্রবেশের স্থানে ফেলে তার উপরে পাথরের এক বড় ঢিবি করল; তা আজও আছে।
30 ೩೦ ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
৩০তখন যিহোশূয় এবল পর্বতে ইস্রায়েলের ঈশ্বর সদাপ্রভুর উদ্দেশ্য এক যজ্ঞবেদি তৈরী করলেন।
31 ೩೧ ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
৩১সদাপ্রভুর দাস মোশি ইস্রায়েল-সন্তানদেরকে যেমন আদেশ করেছিলেন, তেমনি তারা মোশির ব্যবস্থার বইতে লেখা আদেশ অনুসারে গোটা পাথরে, যার উপরে কেউ লোহা উঠায় নি, এমন পাথরে ঐ যজ্ঞবেদি তৈরী করল এবং তার উপরে সদাপ্রভুর উদ্দেশ্য হোম করল ও মঙ্গলার্থে বলি উৎসর্গ করল।
32 ೩೨ ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.
৩২আর সেখানে পাথরগুলির উপরে ইস্রায়েল-সন্তানদের সামনে তিনি মোশির লেখা ব্যবস্থার এক অনুরূপ লিপি লিখলেন।
33 ೩೩ ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.
৩৩আর ইস্রায়েলের লোকদের সবার প্রথমে আশীর্বাদ করার জন্য, সদাপ্রভুর দাস মোশি যেমন আদেশ করেছিলেন, তেমন সমস্ত ইস্রায়েল, তাদের প্রাচীনেরা, কর্মচারীরা ও বিচারকর্তারা, স্বজাতীয় কি প্রবাসী সমস্ত লোক সিন্দুকের এদিকে ওদিকে সদাপ্রভুর নিয়ম-সিন্দুক-বহনকারী লেবীয় যাজকদের সামনে দাঁড়াল; তাদের অর্ধেক গরীষীম পর্বতের সামনে, অর্ধেক এবল পর্বতের সামনে থাকল।
34 ೩೪ ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
৩৪পরে ব্যবস্থার বইতে যা যা লেখা আছে, সেই অনুযায়ী তিনি ব্যবস্থার সমস্ত কথা, আশীর্বাদের ও অভিশাপের কথা, পাঠ করলেন।
35 ೩೫ ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.
৩৫মোশি যা যা আদেশ করেছিলেন, যিহোশূয় ইস্রায়েলের সমস্ত সমাজের এবং মহিলাদের, ছোট ছেলে-মেয়েদের ও তাদের মধ্য প্রবাসীদের সামনে সেই সমস্ত পাঠ করলেন, একটি বাক্যেরও ত্রুটি করলেন না।

< ಯೆಹೋಶುವನು 8 >